ಕುತೂಹಲ ಮೂಡಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ನಡೆ: ಶ್ರುತಿಗೆ ಮತ್ತೆ ಅಧ್ಯಕ್ಷ ಸ್ಥಾನ!
ಬೆಂಗಳೂರು, ಜು. 19: ಹಿರಿಯ ಚಿತ್ರನಟಿ, ಬಿಜೆಪಿ ನಾಯಕಿ ಶ್ರುತಿ ಅವರಿಗೆ ಮತ್ತೆ ಹುದ್ದೆ ಕೊಟ್ಟು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಕಳೆದ ಎರಡು ದಿನಗಳ ಹಿಂದಷ್ಟೇ ಯಾವುದೇ ಮಾಹಿತಿ ಕೊಡದೇ ಅವರನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ತೆಗೆದುಕೊಂಡಿದ್ದ ಏಕಾಏಕಿ ನಿರ್ಧಾರದಿಂದ ಶ್ರುತಿ ಅವರಿಗೆ ತೀವ್ರ ಮುಜುಗುರವಾದಂತಿತ್ತು. ಅಧ್ಯಕ್ಷ ಸ್ಥಾನದಿಂದ ಅವರನ್ನು ಬದಲಾವಣೆ ಮಾಡಿದ್ದ ಕುರಿತೂ ಅವರಿಗೆ ಮಾಹಿತಿ ನೀಡಿರಲಿಲ್ಲ.
ಕೆಎಸ್ಟಿಡಿಸಿ ಮಾಜಿ ಅಧ್ಯಕ್ಷೆ ಶ್ರುತಿ ಅವರಿಗೆ ಇದೀಗ ಕರ್ನಾಟಕ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರಯವಂತೆ ಶ್ರುತಿ ಅವರನ್ನು ಕರ್ನಾಟಕ ಮದ್ಯಪಾನ ಸ್ವಯಂ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶದ ಅನುಸಾರ ಶ್ರುತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ ಅಧೀನ ಕಾರ್ಯದರ್ಶಿ ಎಂ. ಜೆಸಿಂತ ಅವರು ತಿಳಿಸಿದ್ದಾರೆ.

Recommended Video
ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಚರ್ಚೆ ತಾರಕ್ಕೇರಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ತೀವ್ರ ಸಂಚಲನ ಮೂಡಿಸಿತ್ತು. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದಿಂದ ಹಿರಿಯ ನಟಿ ಶ್ರುತಿ ಅವರನ್ನು ಬದಲಾಯಿಸಿ ಅವರ ಸ್ಥಾನಕ್ಕೆ ತಮ್ಮ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ಸಿಎಂ ಯಡಿಯೂರಪ್ಪ ನೇಮಕ ಮಾಡಿ ಆದೇಶ ಮಾಡಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ನಡೆ ರಾಜ್ಯ ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications