73 ಕೈಗಾರಿಕಾ ಯೋಜನೆಗಳು, ₹3,935 ಕೋಟಿ ಹೂಡಿಕೆಗೆ ಒಪ್ಪಿಗೆ: ಉದ್ಯೋಗ ಸೃಷ್ಟಿ ಲೆಕ್ಕ ಕೊಟ್ಟ ಸರ್ಕಾರ
ಬೆಂಗಳೂರು, ಜನವರಿ 14: ಕರ್ನಾಟಕದಲ್ಲಿ ಹಂತ ಹಂತವಾಗಿ ಬಂಡವಾಳ ಹೂಡಿಕೆ ಪ್ರಮಾಣ ಹೆಚ್ಚಾಗುತ್ತಿದೆ. ಇದೀಗ ಬರೋಬ್ಬರಿ ರೂ.3,935 ಕೋಟಿಗೂ ಹೆಚ್ಚಿನ ಹೂಡಿಕೆಗೆ ಅನುಮೋದನೇ ಸಿಕ್ಕಿದೆ. ಇದರಿಂದ ಸಾವಿರಾರು ಉದ್ಯೋಗ ಸೃಷ್ಟಿಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗಾದರೆ ಹೂಡಿಕೆ ಮೊತ್ತ ವೆಷ್ಟು, ಉದ್ಯೋಗ ಸೃಷ್ಟಿ ಎಷ್ಟು, ಯೋಜನೆಗಳ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ, ಒಟ್ಟು ₹3,935 ಕೋಟಿಗೂ ಹೆಚ್ಚಿನ ಹೂಡಿಕೆಯ 73 ಯೋಜನೆಗಳನ್ನು ಅನುಷ್ಠಾನ ಗೊಳಿಸುವ ಪ್ರಸ್ತಾವನೆಗೆ ಸರ್ಕಾರ ಮತ್ತು ಸಮಿತಿಯಿಂದ ಒಪ್ಪಿಗೆ ದೊರೆತಿದೆ. ಎಲ್ಲವು ಅಂದುಕೊಂಡಂತಾದರೆ ಈ ಎಲ್ಲ ಯೋಜನೆಗಳಿಂದ ಒಟ್ಟು 14,497 ಉದ್ಯೋಗಾವಕಾಶ ಸೃಷ್ಟಿ ಆಗಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಾಹಿತಿ ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಟ್ಟು ಯೋಜನೆಗಳ ಪೈಕಿ 10 ಯೋಜನೆಗಳಲ್ಲಿ ತಲಾ 50 ಕೋಟಿ ರೂ.ಗೂ ಹೆಚ್ಚು ಹೂಡಿಕೆ ಆಗಲಿದೆ. ಈ ಯೋಜನೆಗಳಲ್ಲಿ ಇಟಿಎಲ್ ಸೆಕ್ಯೂರ್ ಸ್ಪೇಸ್, ದಶ್ ಪಿ.ವಿ.ಟೆಕ್ನಾಲಜೀಸ್, ಮೈಲಾರ್ ಇನ್ಫ್ರಾ, ಸ್ಯಾಂಗೋ ಆಟೋಮೋಟೀವ್ ಪಾರ್ಟ್ಸ್, ವೇನಾಸ್ ಲ್ಯಾಬ್ಸ್, ಸಿಂಬಯೋ ಜನರಿಕ್ಸ್ ಇಂಡಿಯಾ, ಎಂಎಎಫ್ ಕ್ಲಾತಿಂಗ್, ಎಸ್ಎಎ ಪ್ರಾಕ್ಟ್ಸ್, ನಿಫ್ಕೋ ಸೌತ್ ಇಂಡಿಯಾ ಮ್ಯಾನಫ್ಯಾಕ್ಚರಿಂಗ್ ಮತ್ತು ರೆನ್ಸ್ ಬಯೋಟೆಕ್ ಕಂಪನಿಗಳು ಸೇರಿವೆ' ಎಂದು ಅವರು ವಿವರಿಸಿದರು.
ಈ ಭಾಗದಲ್ಲಿ 9,200 ಉದ್ಯೋಗ ಸೃಷ್ಟಿ
ಈ ಕಂಪನಿಗಳು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ಶಿರಾ ಕೈಗಾರಿಕಾ ಪ್ರದೇಶ, ಹೂವಿನ ಹಡಗಲಿ, ರಾಮನಗರ, ಕಡೇಚೂರು, ಚಾಮರಾಜನಗರ, ಗೌರಿಬಿದನೂರು ಮತ್ತು ತುಮಕೂರಿನ ವಸಂತ ನರಸಾಪುರಗಳಲ್ಲಿ ಹೂಡಿಕೆ ಮಾಡಲಿವೆ. ಇಲ್ಲಿ ಒಟ್ಟು 9,200 ಉದ್ಯೋಗಗಳನ್ನು ಸೃಜನೆಯಾಗಲಿವೆ
ಈ ಮೇಲ್ಕಂಡ ಉದ್ದಿಮೆಗಳು ಕನಿಷ್ಠ 96 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 490.50 ಕೋಟಿ ರೂ.ವರೆಗೂ ಬಂಡವಾಳ ತೊಡಗಿಸಲಿವೆ. ಅಷ್ಟೇ ಅಲ್ಲದೇ ಕನಿಷ್ಠ 15 ಕೋಟಿ ರೂ.ಗಳಿಂದ ಹಿಡಿದು ಗರಿಷ್ಠ 50 ಕೋಟಿ ರೂ.ವರೆಗೂ ಹೂಡಿಕೆ ಮಾಡುವ ಪ್ರಸ್ತಾವನೆ ಸಲ್ಲಿಸಿದ್ದ 59 ಹೊಸ ಯೋಜನೆಗಳಿಗೂ ಒಪ್ಪಿಗೆ ನೀಡಲಾಗಿದೆ.

ಹೆಚ್ಚುವರಿ ಬಂಡವಾಳ ಹೂಡಿಕೆಗೆ ಅನುಮೋದನೆ
ಇದರಿಂದ 5,297 ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ, ಹೆಚ್ಚುವರಿ ಬಂಡವಾಳ ಹೂಡಿಕೆಯ 5 ಯೋಜನೆಗಳಿಗೂ ಅನುಮೋದನೆ ಕೊಟ್ಟಿದ್ದು, ಇದರಿಂದ 87.67 ಕೋಟಿ ರೂ. ಬಂಡವಾಳ ರಾಜ್ಯಕ್ಕೆ ಹರಿದು ಬರಲಿದೆ ಎಂದು ತಿಳಿಸಿದರು.
ರಾಜ್ಯ ಸರಕಾರವು ಉದ್ಯಮಸ್ನೇಹಿಯಾಗಿದ್ದು, ಹೂಡಿಕೆದಾರರಿಗೆ ಸುಗಮ ಒಪ್ಪಿಗೆ ಸಿಗುವಂತೆ ನಿಜವಾದ ಅರ್ಥದಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿಗೆ ತಂದಿದೆ. ಹೂಡಿಕೆದಾರರನ್ನು ಉತ್ತೇಜಿಸವಂತಹ ಹಲವು ಅಂಶಗಳನ್ನು 2020-25ರ ಕೈಗಾರಿಕಾ ನೀತಿಯಲ್ಲಿ ಅಳವಡಿಸಿಕೊಂಡಿದ್ದು, ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಆದ್ಯತೆ ಕೊಡಲಾಗಿದೆ. ಇದರಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಣೆಗೂ ಗಮನ ಹರಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಹೂಡಿಕೆ ಆಗುವಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ವ್ಯವಸ್ಥಾಪಕ ನಿರ್ದೇಶಕ ಡಾ.ಮಹೇಶ್, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜ್ ಮತ್ತಿತರರು ಪಾಲ್ಗೊಂಡಿದ್ದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications