RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್: ಸಚಿವ ಸಂಪುಟದಲ್ಲಿ ನಿರ್ಧಾರ
ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣ (ಸರ್ಕಾರಿ ಜಾಗಗಳಲ್ಲಿ) ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿದಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ. ವಿಶೇಷವೆಂದರೆ ಆರ್‌ಎಸ್‌ಎಸ್ ಹೆಸರು ಉಲ್ಲೇಖಿಸದೇ ಜಾಣ ನಡೆ ಪ್ರದರ್ಶಿಸಿದೆ.
ಹೌದು, ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

ನಂತರ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಸಚಿವರು, ಸಿಎ, ಡಿಸಿಎಂ ಚರ್ಚಿಸಿದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮದ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಜಾಗಗಳಲ್ಲಿ ನಿಷೇಧಿಸಲಾಗಿದೆ. ಇದು ಕೇವಲ ಆರ್‌ಎಸ್‌ಎಸ್ ಮಾತ್ರವಲ್ಲ ಇತರ ಖಾಸಗಿ ಸಂಘಟನೆ, ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಆರ್‌ಎಸ್‌ಎಸ್ ಚಟುವಟಿಕೆಗೆ ಸರ್ಕಾರ ಮೂಗುದಾರ ಹಾಕಿದೆ. ಆರ್ಎಸ್‌ಎಸ್ ಬೈಠಕ್, ಕವಾಯಿತಿ ನಿರ್ಬಂಧಿಸಿದಂತಾಗಿದೆ.
ತಮಿಳುನಾಡು ಮಾದರಿ ಅನುಸರಿಸಿದ ರಾಜ್ಯ ಸರ್ಕಾರ ಈ ತಿರ್ಮಾನಕ್ಕೆ ಬಂದಿದೆ. ಅಲ್ಲಿ ಸರ್ಕಾರಿ ಜಾಗಗಳಲ್ಲಿ ಯಾವುದೊ ಒಂದು ಖಾಸಗಿ ಸಂಸ್ಥೆ, ಸಂಘಟನೆ ಯಾವುದಾದರೂ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಇಲ್ಲಿಯೂ ಮಾಡಲಾಗಿದೆ. ಶೀಘ್ರವೇ ಈ ಕುರಿತು ಹೊಸ ನಿಯಮ ಜಾರಿಗೆ ತರಲು ಸರ್ಕಾರ ನಿರ್ಧಾರ. ಸಂಪುಟದಲ್ಲಿ ಖಾಸಗಿ ಸಂಘಟನೆ, ಸಂಸ್ಥೆ ಎಂದಿರುವ ನಾಯಕರು ಎಲ್ಲಿಯೂ ಆರ್‌ಎಸ್‌ಎಸ್ ಎಂದು ಉಲ್ಲೇಖಿಸದೇ ನಿರ್ಬಂಧ ನಿಯಮ ಜಾರಿಗೆ ತಂದಿದೆ.
ಟಾರ್ಗೆಟ್ ರಾಜಕಾರಣ ಬೇಕಿಲ್ಲ: ಸಚಿವೆ
ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಿಸಿದ ಸಂಪುಟ ನಿರ್ಧಾರದ ಕುರಿತು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿದರು. ನಮಗೆ ಟಾರ್ಗೆಟ್ ರಾಜಕಾರಣ ಬೇಕಿಲ್ಲ. ಈ ಹಿಂದೆ 2013ರಲ್ಲಿ ಬಿಜೆಪಿ ಸರ್ಕಾರ ಮಾಡಿದ್ದ ಆದೇಶ ಮಾಡಿದ್ದನ್ನೇ ನಾವು ಮುಂದುವರಿಸಿದ್ದೇವೆ. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಮಾಡಿದರೆ ಇತರರಿಗೆ ತೊಂದರೆ ಆಗುತ್ತದೆ ಎಂದು ಹೇಳಿದರು.












Click it and Unblock the Notifications