Bike Taxi Ban: ರ‍್ಯಾಪಿಡೋ ಸೇರಿ ಎಲ್ಲ ಬೈಕ್ ಟ್ಯಾಕ್ಸಿ ಸೇವೆ ಬ್ಯಾನ್!
ಕರ್ನಾಟಕದಲ್ಲಿ ಹೆಚ್ಚು ಜನಪ್ರಿಯವಾಗಿದ್ದ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಗೆ ಕೊನೆಗೂ ಮೂಗುದಾರ ಬಿದ್ದಿದೆ. ಆಟೋ ಚಾಲಕರು ಹಾಗು ಕ್ಯಾಬ್ ಚಾಲಕರಿಂದ ಈ ಬೈಕ್ ಟ್ಯಾಕ್ಸಿ ಸೇವೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ನಮ್ಮ ಅನ್ನವನ್ನು ಕಸಿಯುತ್ತರುವ ಬೈಕ್ ಟ್ಯಾಕ್ಸಿ ಸೇವೆ ಬ್ಯಾನ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆ ಕರ್ನಾಟಕ ಹೈಕೋರ್ಟ್‌ನ ಆದೇಶದಂತೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವ ರಾಮಲಿಂಗಾ ರೆಡ್ಡಿ ಅವರು ಕರ್ನಾಟಕ ಹೈಕೋರ್ಟ್‌ನ ಆದೇಶ ಪಾಲಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇದರಿಂದ ಆಟೋ ಮತ್ತು ಕ್ಯಾಬ್ ಚಾಲಕರ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಈ ಬೈಕ್ ಟ್ಯಾಕ್ಸಿ ಸೇವೆಯನ್ನು ಖಾಸಗಿ ಬೈಕ್‌ಗಳಲ್ಲಿ ನೀಡುತ್ತಿದ್ದರಿಂದ ಭಾರಿ ವಿರೋಧಕ್ಕೆ ಕಾರಣವಾಗಿತ್ತು. ವೈಟ್ ಬೋರ್ಡ್ ಇರುವ ವಾಹನಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಲಾಗುತ್ತಿದೆ. ಆದರೆ ಯೆಲ್ಲೋ ಬೋರ್ಡ್ ಇರುವ ನಾವು ಹೆಚ್ಚು ತೆರಿಗೆ ಕಟ್ಟುತ್ತೇವೆ. ಬೈಕ್ ಟ್ಯಾಕ್ಸಿಗಳಿಗೆ ಯಾವುದೇ ತೆರಿಗೆ ಇಲ್ಲ. ಇದರಿಂದ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆಯಾಗಿದೆ ಎಂದು ಆಟೋ ಹಾಗೂ ಕ್ಯಾಬ್ ಚಾಲಕರು ಗರಂ ಆಗಿದ್ದರು. ಅಲ್ಲದೆ ರ‍್ಯಾಪಿಡೋ ಹಾಗೂ ಇನ್ನಿತರೆ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದ ಬೈಕ್ ಸವಾರರ ಮೇಲೆ ರಸ್ತೆಗಳಲ್ಲೇ ಗಲಾಟೆ ಕೂಡ ಮಾಡುತ್ತಿದ್ದರು.
ಇತ್ತೀಚೆಗೆ ಈ ಬೈಕ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಬೇಕು ಎಂದು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ ಕೂಡ ಸಲ್ಲಿಸಿದ್ದರು. 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶ ಸಹ ನೀಡಿತ್ತು.

ಅಲ್ಲದೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಹಾಗಾಗಿ ಆರು ವಾರಗಳ ಒಳಗೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ ನಿರ್ದೇಶಿಸಿತ್ತು. ಈ ತೀರ್ಪನ್ನು ಸ್ವಾಗತಿಸಿದ್ದ ಸಚಿವ ರಾಮಲಿಂಗಾರೆಡ್ಡಿ, ಈ ಸಂಬಂಧ ನಿಯಮ ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದ್ದು, ಆಪ್ ಆಧಾರಿತ ಈ ಸೇವೆಯಲ್ಲಿ ಅಸುರಕ್ಷತೆಯೂ ಇದೆ ಎಂದು ಹೇಳಿದ್ದರು.
ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಕೂಡ ಬೈಕ್ ಟ್ಯಾಕ್ಸಿ ಬಂದ್ ಮಾಡುವ ಆದೇಶ ನೀಡುವಂತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿತ್ತು. ಅದರಂತೆ ಆರು ವಾರಗಳ ಒಳಗೆ ಎಲ್ಲ ತರಹದ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಗೊಳಿಸಲು ಕ್ರಮ ಕೈಗೊಳ್ಳಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ಕಾರ್ಯದರ್ಶಿಗೆ ಹಾಗೂ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇದರಿಂದ ಬೈಕ್ ಟ್ಯಾಕ್ಸಿ ಓಡಿಸಿಕೊಂಡು ಚೂರು ಹಣ ಸಂಪಾದನೆ ಮಾಡಿಕೊಳ್ಳುತ್ತಿದ್ದವರಿಗೆ ದೊಡ್ಡ ಶಾಕ್ ನೀಡಿದಂತಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications