ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

|
Google Oneindia Kannada News

ಬೆಂಗಳೂರು, ಜೂನ್ 04: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ದ್ವಿತೀಯ ವರ್ಷದ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಪರ-ವಿರೋಧಗಳು ವ್ಯಕ್ತವಾಗಿವೆ ಎಂದರು. ಕೇಂದ್ರವು ಈಗಾಗಲೇ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ವಿವರ: ಕರ್ನಾಟಕದಲ್ಲಿ ಹೇಗೆ ನಡೆಸಲಾಗುತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ?ವಿವರ: ಕರ್ನಾಟಕದಲ್ಲಿ ಹೇಗೆ ನಡೆಸಲಾಗುತ್ತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ?

ಕರ್ನಾಟಕದ ಶಿಕ್ಷಣ ತಜ್ಞರು, ಹಲವು ಇಲಾಖೆ ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಆರೋಗ್ಯ ಮತ್ತು ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಥಮ ಪಿಯುಸಿ ಗ್ರೇಡ್ ಆಧಾರದಲ್ಲಿ ಅಂಕ

ಪ್ರಥಮ ಪಿಯುಸಿ ಗ್ರೇಡ್ ಆಧಾರದಲ್ಲಿ ಅಂಕ

ಕಳೆದ ವರ್ಷ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆಯೂ ಜಿಲ್ಲಾ ಮಟ್ಟದಲ್ಲಿ ಪರೀಕ್ಷೆಗಳನ್ನು ನಡೆಸಿದ್ದೆವು. ಅಂದು ಪಡೆದ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಆಗ ಪಡೆದ ಅಂಕಗಳ ಆಧಾರದ ಮೇಲೆ ಈಗ ಮಾನದಂಡ ನಿಗದಿ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರತ್ಯೇಕ ಪರೀಕ್ಷೆ ನಡೆಸುವುದಕ್ಕೂ ಸರ್ಕಾರದ ಚಿಂತನೆ

ಪ್ರತ್ಯೇಕ ಪರೀಕ್ಷೆ ನಡೆಸುವುದಕ್ಕೂ ಸರ್ಕಾರದ ಚಿಂತನೆ

ಪ್ರಥಮ ಪಿಯುಸಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶ್ರೇಣಿಯನ್ನು ನೀಡಲಾಗುತ್ತದೆ. ಹೀಗೆ ನೀಡಲಾಗಿರುವ ಶ್ರೇಣಿ ಬಗ್ಗೆ ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಲ್ಲಿ ಅಂಥವರಿಗೆ ಕೊರೊನಾವೈರಸ್ ಸಂಖ್ಯೆ ಇಳಿಮುಖವಾದ ಸಂದರ್ಭದಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

12 ದಿನಗಳವರೆಗೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ

12 ದಿನಗಳವರೆಗೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ

ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಕ್ಕೆ ಕನಿಷ್ಠ 12 ದಿನಗಳೇ ಬೇಕಾಗಿರುತ್ತದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆಗಳನ್ನು ನಡೆಸುವ ತೊಂದರೆ ತೆಗೆದುಕೊಳ್ಳುವುದಿಲ್ಲ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

Recommended Video

Rockline ವಿರುದ್ದ ವಿಷ್ಣು ಅಭಿಮಾನಿಯ ಆಕ್ರೋಶ | Oneindia Kannada
ಪಿಯುಸಿ ವಿದ್ಯಾರ್ಥಿಗಳು ಎದೆಗುಂದದಂತೆ ಸಚಿವರ ಸಲಹೆ

ಪಿಯುಸಿ ವಿದ್ಯಾರ್ಥಿಗಳು ಎದೆಗುಂದದಂತೆ ಸಚಿವರ ಸಲಹೆ

ರಾಜ್ಯದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ನಿರ್ಧಾರದಿಂದ ಕುಗ್ಗಬಾರದು. ವೈದ್ಯಕೀಯ, ಐಐಟಿ ಹಾಗೂ ಉನ್ನತ ವ್ಯಾಸಂಗ ಮಾಡುವ ಗುರಿ ಹೊಂದಿರುವ ವಿದ್ಯಾರ್ಥಿಗಳಲ್ಲೇ ಒಬ್ಬ ವೈದ್ಯ ಅಥವಾ ಒಬ್ಬ ಇಂಜಿನಿಯರ್ ಇರಬಹುದು. ಅಂಥ ವಿದ್ಯಾರ್ಥಿಗಳು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು ಎಂದು ಸಚಿವರು ಸಲಹೆ ನೀಡಿದ್ದಾರೆ.

English summary
Karnataka govt cancels 2nd PUC examinations due to covid-19, students will be graded without examination.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X