BPL Card: ರಾಜ್ಯದಲ್ಲಿ 5,00,000ಕ್ಕೂ ಮಂದಿ ಬಿಪಿಎಲ್‌ ಕಾರ್ಡ್‌ನಿಂದ ಹೊರಕ್ಕೆ..

BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಇದೀಗ 5,00,000ಕ್ಕೂ ಹೆಚ್ಚು ಫಲಾನುಭವಿಗಳನ್ನು ಬಿಪಿಎಲ್‌ನಿಂದ ಕೈಬಿಡಲಾಗಿದ್ದು, ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿವೆ.

ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್‌ಗಳನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅರ್ಹರು ಕೂಡ ಬಿಪಿಎಲ್‌ ಕಾರ್ಡ್‌ಗಳನ್ನು ಪಡೆದುಕೊಂಡು ಬಡವರ ಅಕ್ಕಿ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದೀಗ ಈ ನಡುವೆಯೇ ಎಪಿಎಲ್‌ಗೆ ವರ್ಗಾವಣೆಗೊಂಡ 5,00,000ಕ್ಕೂ ಹೆಚ್ಚು ಫಲಾನುಭವಿಗಳು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ದಾರೆ.

Karnataka Govt Cancels Over 5 Lakh Fake BPL Ration Cards Beneficiaries Protest Reclassification

ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದಿದ್ದ 2.50 ಲಕ್ಷಕ್ಕೂ ಅಧಿಕ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಆಗಿ ಪರಿವರ್ತನೆ ಮಾಡುವ ಮೂಲಕ ಸುಮಾರು 5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಬಿಪಿಎಲ್‌ನಿಂದ ಕೈಬಿಡಲಾಗಿದೆ. ಈ ಬಿಪಿಎಲ್‌ ಕಾರ್ಡ್‌ಗಳ ಪರಿವರ್ತನೆ ವಿರುದ್ಧ ಫಲಾನುಭವಿಗಳು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಅನರ್ಹರು ಪಡೆದ ಅಂತ್ಯೋದಯ, ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡುವ ಕಾರ್ಯಕ್ಕೆ ಆಹಾರ ಇಲಾಖೆ ಕಳೆದ ಎರಡ್ಮೂರು ತಿಗಳಿನಿಂದ ಚಾಲನೆ ನೀಡಿದೆ. ತೆರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿ ವಿವಿಧ ಇಲಾಖೆಗಳಿಂದ ದತ್ತಾಂಶ ಪಡೆದು, ಬಿಪಿಎಲ್‌ ಫಲಾನುಭವಿಗಳ ಆದಾಯ ಮೂಲಗಳನ್ನು ಪತ್ತೆ ಕಾರ್ಯ ಕೈಗೊಂಡಿದೆ. ಈ ದತ್ತಾಂಶಗಳ ಮೂಲಕ ಮನೆಯಲ್ಲಿ ಯಾರಾದರೊ ಒಬ್ಬರು ತೆರಿಗೆ ಪಾವತಿದಾರರಾಗಿದ್ದರೆ, ಅಂತಹವರಿಗೆ ನೋಟಿಸ್‌ ನೀಡಿ ಅಥವಾ ನ್ಯಾಯಬೆಲೆ ಅಂಗಡಿಗಳಿಗೆ ಅಂಟಿಸಲಾಗಿರುವ ಪಟ್ಟಿಯಲ್ಲಿ ಹೆಸರು ಪ್ರಕಟಿಸಿ ಆಹಾರ ಇಲಾಖೆ ಎಚ್ಚರಿಸಿತ್ತು.

ಕಾಲಾವಕಾಶ ನೀಡಿದರೂ ಸಹ ಬಿಪಿಎಲ್‌ ಕಾರ್ಡ್‌ ಅನ್ನು ಹಿಂದಿರುಗಿಸದೆ ಕಾರ್ಡ್ ಇಟ್ಟುಕೊಂಡಿದ್ದ ತುಂಬಾ ಮಂದಿ ಫಲಾನುಭವಿಗಳಿಗೆ ಪಡಿತರ ಹಂಚಿಕೆ ನಿಲ್ಲಿಸಲಾಗಿದೆ. ಅಲ್ಲದೆ, 3.65ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಹಿಸಲಾಗಿದೆ. ಇದೀಗ ಕಳೆದ ಎರಡು ತಿಂಗಳಿನಲ್ಲಿ 2,00,000ಕ್ಕೂ ಹೆಚ್ಚು ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತೆ ಬಿಪಿಎಲ್‌ ಕಾರ್ಡ್‌ ಪಡೆಯುವುದೇಗೆ?: ಅರ್ಹತೆ ಇದ್ದರೂ ಸಹ ಬಿಪಿಎಲ್ ಕಾರ್ಡ್ ರದ್ದುಗೊಂಡಿದ್ದರೆ, ಅಂತಹವರು ಬಿಪಿಎಲ್ ಪಡಿತರ ಚೀಟಿಯನ್ನು ಮತ್ತೆ ಅವಕಾಶ ಕಲ್ಪಿಸಲಾಗಿದೆ. 45 ದಿನಗಳ ಒಳಗೆ ಅಗತ್ಯ ದಾಖಲೆಗಳ ಸಹಿತ ಸಂಬಂಧಿಸಿದ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಬೇಕು. ದಾಖಲೆ ಪರಿಶೀಲನೆ ಬಳಿಕ ಬಿಪಿಎಲ್ ಪಡಿತರ ಚೀಟಿ ಹೊಂದಲು ಅರ್ಹರಾಗಿದ್ದರೆ, ಅಂತಹವರ ಬಿಪಿಎಲ್ ಪಡಿತರ ಚೀಟಿಯನ್ನು ಮರು ಸ್ಥಾಪಿಸುವ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಿದ ವಾರದೊಳಗೆ ಪುನಃ ಬಿಪಿಎಲ್‌ ಕಾರ್ಡ್‌ ದೊರೆಯಲಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹರು?

* ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು
* ಕುಟುಂಬದ ವಾರ್ಷಿಕ ಆದಾಯವು 1.2 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು
* ಒಂದು ಕುಟುಂಬವು 3 ಹೆಕ್ಟೇರ್‌ಗಳಿಗಿಂತ (7.5 ಎಕರೆ) ಹೆಚ್ಚು ಕೃಷಿ ಭೂಮಿಯನ್ನು ಹೊಂದಿರಬಾರದು
* ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆ ಹೊಂದಿರಬಾರದು
* ಕುಟುಂಬವು 4 ಚಕ್ರದ ವಾಹನನ್ನು ಹೊಂದಿರಬಾರದು
* ಆದಾಯ ತೆರಿಗೆ ಪಾವತಿಸುತ್ತಿರಬಾರದು
* ಮಾಸಿಕ ವಿದ್ಯುತ್ ಬಿಲ್ 450 ರೂಪಾಯಿಗಿಂತ ಹೆಚ್ಚಿರಬಾದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+