ಇದೇ ತಿಂಗಳು ನಡೆಯಬೇಕಿದ್ದ ಗ್ರಾ.ಪಂ. ಚುನಾವಣೆ ಮುಂದೂಡಿಕೆ

ಬೆಂಗಳೂರು, ಮೇ 05: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದಾಗಿ ದೇಶದಲ್ಲಿ ಅಲ್ಲೊಲ ಕಲ್ಲೊಲ ಉಂಟಾಗಿದೆ. ಕೊರೊನಾ ಮಹಾ‌ಮಾರಿಯ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿಗಳ ಚುನಾವಣೆಯನ್ನು ಮುಂದೂಡಿ ಮಧ್ಯಂತರ ಅವಧಿಗೆ ಆಡಳಿತ ಸಮಿತಿ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ತೀರ್ಮಾನ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಸಚಿವರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ರಾಜ್ಯದ ಗ್ರಾಮ ಪಂಚಾಯ್ತಿಗಳ ಸಾರ್ವತ್ರಿಕ ಚುನಾವಣೆಯು ಇದೇ ತಿಂಗಳಿ(ಮೇ)ನಲ್ಲಿ ನಡೆಯಬೇಕಾಗಿತ್ತು. ಕೊರೊನ ಮಹಾಮಾರಿಯ ತುರ್ತು ಪರಿಸ್ಥಿತಿಯಿಂದಾಗಿ ಅನಿವಾರ್ಯವಾಗಿ ಚುನಾವಣೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.

state government decided to postpone the gram panchayat election and appoint administrator

ಗ್ರಾಮ ಪಂಚಾಯ್ತಿ ಚುನಾವಣೆ ಮುಂದೂಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೂಚನೆಯಂತೆ ಸಚಿವರಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್, ಕೋಟ ಶ್ರೀನಿವಾಸ ಪೂಜಾರಿ, ಜೆ.ಸಿ. ಮಾಧುಸ್ವಾಮಿ ಅವರು ಸಭೆ ನಡೆಸಿ, ಚರ್ಚಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+