ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ ಕಾವೇರಿ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ
ಬೆಂಗಳೂರು, ಜುಲೈ 15: ತಮಿಳುನಾಡಿಗೆ ನಿತ್ಯ 1 ಟಿಎಂಸಿ ಕಾವೇರಿ ನೀರು ಬಡುವಂತೆ CWRC ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಇಂದು (ಜುಲೈ 14) ಸಿದ್ದರಾಮಯ್ಯನವರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದ್ದು, ಸಭೆಯಲ್ಲಿ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಕಾನೂನಾತ್ಮಕವಾಗಿ ಹೋರಾಟ ಮಾಡಲು ಅಂತಿಮವಾಗಿ 11,000 ಕ್ಯೂಸೆಕ್ ಬದಲಿಗೆ 8 ಸಾವಿರ ಕ್ಯೂಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಜುಲೈ 11 ರಂದು ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 tmc ಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ 9.4 tmc, July ನಲ್ಲಿ 31.24tmc ನೀರು ಬಿಡಬೇಕಾಗಿದೆ. ಅಂದರೆ ಒಟ್ಟು 40.43 tmc ಬಿಡಬೇಕಾಗಿದೆ. ಇಲ್ಲಿಯವರೆಗೂ 5 tmc ಗೂ ಹೆಚ್ಚು ನೀರು ಬಿಡಲು ಸಾಧ್ಯವಾಗಿದೆ.

ಕಾವೇರಿ ತೀರದ ಸಚಿವರು, ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಜು12 ರಂದು ಸಭೆ ನಡೆಸಿ ನೀರು ಬಿಡದೇ ಇರಲು ಮತ್ತು ಸರ್ವಪಕ್ಷ ಸಭೆ ಕರೆಯಲು, CWMA ಮುಂದೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದೆವು.
ಈ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷ ಸಭೆ ನಡೆಸಲಾಯಿತು. ಬಿಜೆಪಿ, ಜೆಡಿಎಸ್, ರೈತ ಸಂಘದವರು, ಕಾನೂನು ತಂಡದ ಮುಖ್ಯಸ್ಥರಾದ ಮೋಹನ್ ಕಾತರಕಿ ಅವರು ಸೇರಿ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮ್ಮ ಕಾವೇರಿ ತೀರದ ಜಲಾಶಯಗಳಲ್ಲಿ 63 % ಮಾತ್ರ ಭರ್ತಿ ನೀರು ಆಗಿದೆ. ಕಬಿನಿ ಜಲಾಶಯ ಭರ್ತಿ ಯಾಗಿದ್ದು, ಕಳೆದ ಎರಡು ದಿನ 20 ಸಾವಿರ, 19 ಸಾವಿರ ಹಾಗೂ ಇಂದು 13 ಸಾವಿರ ಕ್ಯೂಸೆಕ್ಸ್ ನೀರು ಹರಿದು ಹೋಗಿದೆ. ಜಲಾಶಯದ ಸುರಕ್ಷತೆಗಾಗಿ ಶೇಖರಿಸಿಡಲು ಸಾಧ್ಯವಾಗದ ನೀರು ಮಾತ್ರ ಹರಿದುಹೋಗಿದೆ.
ವಕೀಲರ ತಂಡದ ಸಲಹೆ ಪ್ರಕಾರ ಹೆಚ್ಚು ಮಳೆ ಬಿದ್ದರೆ ಮಾತ್ರ ಮಳೆ ಪ್ರಮಾಣಕ್ಕೆ ತಕ್ಕಂತೆ, CWMC ಆದೇಶದ ಪ್ರಕಾರ ಪೂರ್ತಿ ನೀರು ಹರಿಸಬಹುದು. ಇಲ್ಲದಿದ್ದರೆ ಕೇವಲ 8 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕಾಗುತ್ತದೆ ಇದರ ಜೊತೆಗೆ ಮೇಲ್ಮನವಿ ಹಾಕೋಣ. ನಾವು ಮೊಂಡಾಟ ಆಡ್ತೀವಿ ಎಂದು CWMC ಗೆ ಅನ್ನಿಸಬಾರದು ಎನ್ನುವ ಸಲಹೆ ಬಂದಿದೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಇಂದು ಸರ್ವಪಕ್ಷ ನಾಯಕರ ಸಭೆ ಕರೆದು ಚರ್ಚೆ ಮಾಡಿದ್ದೇವೆ. ಪ್ರಾಧಿಕಾರದವರು ಸಾಮಾನ್ಯವಾಗಿ ಜುಲೈ ತಿಂಗಳ ಅಂತ್ಯದಲ್ಲಿ ಅಥವಾ ಆಗಸ್ಟ್ ನಲ್ಲಿ ಸಭೆ ಮಾಡುತ್ತಿದ್ದರು. ಈ ಬಾರಿ ಬೇಗ ಸಭೆ ಮಾಡಿ ನಿತ್ಯ ಒಂದು ಟಿಎಂಸಿ ನೀರು ಬಿಡಬೇಕು ಎಂದು ಹೇಳಿದ್ದಾರೆ. ನಮ್ಮ ಅಣೆಕಟ್ಟುಗಳಲ್ಲಿ 30% ನಷ್ಟು ನೀರು ಕೊರತೆ ಇದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಸಮಿತಿಯ ತೀರ್ಮಾನದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಇದೇ ವೇಳೆ ಈಗ ಹೊರಡಿಸಿರುವ ತೀರ್ಮಾನವನ್ನು ನಾವು ಗೌರವಿಸಬೇಕು.
ಮೇಲ್ಮನವಿ ಆಲಿಸುವವರೆಗೂ ಎಷ್ಟು ನೀರು ಬಿಡಲಾಗುವುದು ಎಂದು ಮಾಧ್ಯಮಗಳ ಪ್ರಶ್ನಿಗೆ ಉತ್ತರಿಸಿ, ಕಳೆದ ಎರಡು ಮೂರು ದಿನಗಳಿಂದ 1 ಟಿಎಂಸಿಗೂ ಹೆಚ್ಚು ನೀರು ಬಿಡಲಾಗಿದೆ. ಬಿಳಿಗುಂಡ್ಲು ವರೆಗೂ ತಲುಪಲು ಈ ನೀರು 250 ಕಿ.ಮೀ ಹರಿಯಬೇಕು. ಹೀಗಾಗಿ ನೀರಿನ ಪ್ರಮಾಣ ನೋಡಿಕೊಂಡು ನೀರು ಹರಿಸುತ್ತಿದ್ದೇವೆ. ಎರಡು ದಿನಗಳ ಕಾಲ 20 ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಇಂದು 13 ಸಾವಿರ ಕ್ಯೂಸೆಕ್ ನೀರು ಹರಿಸಿದ್ದೇವೆ. ಸಮಿತಿಯ ತೀರ್ಮಾನ ಗೌರವಿಸಿ ಹಾಗೂ ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.












Click it and Unblock the Notifications