Government Employee: ಫೆ. 20ಕ್ಕೆ ಸರ್ಕಾರಿ ನೌಕರರ ಸಮಾವೇಶ, 10 ಸಾವಿರಕ್ಕೂ ಅಧಿಕ ನೌಕರರು ಭಾಗಿ
ಬೆಂಗಳೂರು, ಫೆಬ್ರವರಿ 16: ಕರ್ನಾಟಕದ ಸರ್ಕಾರಿ ನೌಕರರು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಫೆಬ್ರವರಿ 20ರಂದು ಸರ್ಕಾರಿ ನೌಕರರ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಸಮಾವೇಶದಲ್ಲಿ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ನೌಕರರು ಒತ್ತಾಯಿಸಲಿದ್ದಾರೆ.
ಸಮಾವೇಶದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮಾಹಿತಿ ನೀಡಿದೆ. ದಿನಾಂಕ 20/02/2025ರಂದು ತ್ರಿಪುರವಾಸಿನಿ, ಬೆಂಗಳೂರು ಅರಮನೆ ಆವರಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಹಾಗೂ ಪದಾಧಿಕಾರಿಗಳ 'ಸಮಾವೇಶ ಹಾಗೂ ಕಾರ್ಯಾಗಾರ' ನಡೆಯಲಿದೆ ಎಂದು ಸಂಘ ತಿಳಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆಬ್ರವರಿ 20ರ ಗುರುವಾರ ಬೆಳಗ್ಗೆ 11.45ಕ್ಕೆ ತ್ರಿಪುರವಾಸಿನಿ, ಅರಮನೆ ಆವರಣ, ಮೇಖ್ರಿ ವೃತ್ತದ ಹತ್ತಿರ ಬೆಂಗಳೂರು ಇಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೆಶಕರ-ಪದಾಧಿಕಾರಿಗಳ 'ಸಮಾವೇಶ' ಹಾಗೂ 'ಕಾರ್ಯಾಗಾರ'ವನ್ನು ಆಯೋಜಿಸಿದೆ ಎಂದು ಹೇಳಿದೆ.
ಈ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಜಿಲ್ಲೆ, ತಾಲ್ಲೂಕು ಶಾಖೆಗಳಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಲೋಕಾಯುಕ್ತರು ಭಾಗಿ: ಫೆಬ್ರವರಿ 20ರಂದು ಬೆಳಗ್ಗೆ 10 ಗಂಟೆಗೆ 'ಪ್ರಜಾಸ್ನೇಹಿ ಆಡಳಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. 'ಆಡಳಿತದಲ್ಲಿ ದಕ್ಷತೆ-ಪಾರದರ್ಶಕತೆ-ಪ್ರಾಮಾಣಿಕತೆ' ವಿಷಯ ಕುರಿತು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ. ಎಸ್. ಪಾಟೀಲ್ ಉಪನ್ಯಾಸ ನೀಡಲಿದ್ದಾರೆ.
* 'ಸಾರ್ವಜನಿಕ ಸೇವೆಯಲ್ಲಿ ನೌಕರರ ಪಾತ್ರ' ವಿಷಯದ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಉಪನ್ಯಾಸ ನೀಡಲಿದ್ದಾರೆ.
* 'ಮಾಹಿತಿ ಹಕ್ಕು ಅಧಿನಿಯಮ (2005) ಸವಾಲುಗಳು-ಪರಿಹಾರಗಳು' ವಿಷಯವಾಗಿ ರಾಜ್ಯ ಮಾಹಿತಿ ಆಯೋಗ, ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಧಾಕಪ್ಪ ಉಪನ್ಯಾಸ ನೀಡಲಿದ್ದಾರೆ.
ಈ ಬೃಹತ್ ಸಮಾವೇಶದಲ್ಲಿ ಸರ್ಕಾರಿ ನೌಕರರ ನೆಮ್ಮದಿಯ ಬದುಕಿಗಾಗಿ ನಮ್ಮ ಬೇಡಿಕೆಗಳು ಈಡೇರಬೇಕು ಎಂದು ಸರ್ಕಾರದ ಮುಂದೆ ನೌಕರರ ಸಂಘ ಹಲವು ಬೇಡಿಕೆಗಳನ್ನು ಇಡಲಿದೆ. ಇವುಗಳಲ್ಲಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆ ಲೋಕಾರ್ಪಣೆ ಮಾಡುವುದು ಪ್ರಮುಖವಾಗಿವೆ. ಸಮಾವೇಶದಲ್ಲಿ ಸರ್ಕಾರ ನೌಕರರಿಗೆ ಯಾವ ಭರವಸೆ ನೀಡಲಿದೆ? ಎಂದು ಕಾದು ನೋಡಬೇಕಿದೆ.
2024ರ ಡಿಸೆಂಬರ್‌ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಮುಗಿದು ಹೊಸ ಪದಾಧಿಕಾರಿಗಳ ಆಯ್ಕೆಯಾಗಿದೆ. ಈ ಚುನಾವಣೆ ಬಳಿಕ ಬೃಹತ್ ಸಮಾವೇಶವನ್ನು ಬೆಂಗಳೂರಿನಲ್ಲಿ ಆಯೋಜನೆ ಮಾಡಲಾಗಿದೆ. ಎಲ್ಲಾ ಸರ್ಕಾರಿ ನೌಕರರು ಪಾಲ್ಗೊಳ್ಳಲು ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಹಾಯಕವಾಗುವಂತೆ ವಿವಿಧ ಜಿಲ್ಲೆಗಳಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಓಡಿಡಿ ಸೌಲಭ್ಯವನ್ನು ಸಹ ನೀಡಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications