ಸರ್ಕಾರಿ ನೌಕರರ ಮುಷ್ಕರ, ಹೇಗಿದೆ ಬೆಂಬಲ?

Posted By:
Subscribe to Oneindia Kannada

ಬೆಂಗಳೂರು, ಜೂನ್ 02 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಮುಷ್ಕರದ ಬಿಸಿ ತಟ್ಟಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಸುಮಾರು 6 ಲಕ್ಷ ಸರ್ಕಾರಿ ನೌಕರರು ಇಂದು ಮುಷ್ಕರದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಸರ್ಕಾರ ಮುಷ್ಕರ ನಡೆದಂತೆ ಆದೇಶ ಹೊರಡಿಸಿದೆ. ಆದರೆ, ಈ ಆದೇಶವನ್ನೂ ಮೀರಿ ಮುಷ್ಕರಕ್ಕೆ ಬೆಂಬಲ ವ್ಯಕ್ತವಾಗಿದೆ. ತುಮಕೂರು, ಹಾಸನ, ಬೀದರ್ ಜಿಲ್ಲೆಗಳಲ್ಲಿ ಮುಷ್ಕರಕ್ಕೆ ನೌಕರರು ಬೆಂಬಲ ಕೊಟ್ಟಿದ್ದಾರೆ. [ನೌಕರರ ಬೇಡಿಕೆಗಳೇನು?]

vidhana soudha

ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದಾರೆ. ಆದರೆ, ಕೆಲಸಕ್ಕೆ ಹಾಜರಾಗಿದ್ದಾರೆ. ಆದ್ದರಿಂದ ಸಂಚಾರ ವ್ಯವಸ್ಥೆ ಎಂದಿನಂತೆ ಇದೆ. ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧದ ನೌಕರರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದು, ಹಲವು ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. [ಜೂನ್ 4ರಂದು ಪೊಲೀಸರ ಪ್ರತಿಭಟನೆ]

ಸರ್ಕಾರಿ ಕಾರು ಚಾಲಕರು ಮುಷ್ಕರಕ್ಕೆ ಬೆಂಬಲ ಕೊಟ್ಟಿದ್ದಾರೆ. ಇದರಿಂದಾಗಿ ವಿಧಾನಸೌಧದಕ್ಕೆ ಹಲವು ಐಎಎಸ್ ಅಧಿಕಾರಿಗಳು ಖಾಸಗಿ ಕಾರಿನಲ್ಲಿ ಆಗಮಿಸಿದ್ದಾರೆ. ವಿಧಾನಸೌಧಕ್ಕೆ ನೌಕರರನ್ನು ಕರೆತರುವ ಬಿಎಂಟಿಸಿ ಬಸ್ಸುಗಳು ಖಾಲಿಯಾಗಿವೆ.


* ಬೆಂಗಳೂರಿನ ಕೆ.ಆರ್.ಸರ್ಕಲ್‌ನಲ್ಲಿ ಸರ್ಕಾರಿ ಕಾರಗಳನ್ನು ತಡೆಯಲಾಗಿದೆ

ನೌಕರರ ಪ್ರಮುಖ ಬೇಡಿಕೆಗಳು

* ಕೇಂದ್ರ ಸರ್ಕಾರಿ ನೌಕರರ ವೇತನ ನೀಡಬೇಕು
* ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
* ಹಳೆ ಪಿಂಚಣಿ ಯೋಜನೆ ಮುಂದುವರಿಸಬೇಕು
* ಖಾಲಿ ಇರುವ ಹುದ್ದೆ ಭರ್ತಿ ಮಾಡಬೇಕು
* 7ನೇ ವೇತನ ಆಯೋಗ ರಚಿಸಿ, ವೇತನ ಪರಿಷ್ಕರಣೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Members of the Karnataka State Government Employee's Association (KSGEA) have called for one day strike on June 2, 2016 to protest. Here are the latest updates.
Please Wait while comments are loading...