ಶಾಲೆಯಿಂದ ಹೊರಗುಳಿದ ಮಕ್ಕಳು; ಹೈಕೋರ್ಟ್‌ಗೆ ಪ್ರಮಾಣ ಪತ್ರ

ಕರ್ನಾಟಕ ಹೈಕೋರ್ಟ್ ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಬಗ್ಗೆ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿದೆ.

ಬೆಂಗಳೂರು, ಫೆಬ್ರವರಿ 17; ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದಿರುವ ಒಟ್ಟು 24 ಸಾವಿರಕ್ಕೂ ಅಧಿಕ ಮಕ್ಕಳ ಪೈಕಿ 21,807ಕ್ಕೂ ಅಧಿಕ ಮಕ್ಳಳನ್ನು ಗುರುತಿಸಲಾಗಿದೆ ಹಾಗೂ 6 ವರ್ಷದಿಂದ 14 ವರ್ಷ ವಯೋಮಿತಿಯ 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

2013ರಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಕುರಿತು ದಾಖಲಾಗಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ನ್ಯಾಯಪೀಠದಕ್ಕೆ ರಾಜ್ಯ ಶಾಲಾ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಪ್ರಮಾಣ ಪತ್ರವನ್ನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನೀಡಿದರು. ಈ ಪ್ರಮಾಣ ಪತ್ರವನ್ನು ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮೂರು ವಾರ ಮುಂದೂಡಿತು.

Karnataka Govt Files Affidavit To HC On School Drop Out Children

ಗುರುತು ಸಾಧ್ಯವಿಲ್ಲ: ಹೈಕೋರ್ಟ್ 2022ರ ನ.8ರಂದು ನೀಡಿರುವ ನಿರ್ದೇಶನದಂತೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಲು ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆಗಳು ಸರ್ವೇ ನಡೆಸಿದ್ದವು. ಸರ್ವೇಯಿಂದ ರಾಜ್ಯದಲ್ಲಿ ಒಟ್ಟು 24,308 ಮಕ್ಕಳು ಶಾಲೆಯಿಂದ ಹೊರಗುಳಿದಿರುವ ವಿಚಾರ ತಿಳಿದುಬಂತು.

ಅದರಲ್ಲಿ 12,407 ಮಕ್ಳಳನ್ನು ಗುರುತಿಸಲಾಗಿದೆ. ಇನ್ನೂ 2,901 ಮಕ್ಕಳನ್ನು ಗುರುತಿಸಬೇಕಿದೆ. ವಿಳಾಸ ಮತ್ತು ಫೋನ್ ನಂಬರ್ ತಪ್ಪಾಗಿ ನೀಡಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 2,254 ಮಕ್ಕಳನ್ನು ಗುರುತಿಸಲು ಸಾಧ್ಯವಾಗಲಿಲ್ಲ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

ಇನ್ನೂ 3 ರಿಂದ 6 ವರ್ಷ ವಯೋಮಿತಿಯ 5,19,369 ಮಕ್ಕಳು ಅಂಗನವಾಡಿ ಕೇಂದ್ರಗಳಿಗೆ ದಾಖಲಾಗಿದ್ದಾರೆ. 51,084 ಮಕ್ಕಳು ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ದಾಖಲಾಗಿದ್ದಾರೆ. 7,747 ಮಕ್ಕಳು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ವಲಸೆ ಹೋಗಿದ್ದಾರೆ. 11,174 ಮಕ್ಕಳು 6 ವರ್ಷ ಮೀರಿದ್ದು, ಅದರಲ್ಲಿ 211 ಮಕ್ಕಳನ್ನು ಎರಡು ಕೇಂದ್ರಗಳಲ್ಲಿ ನೋಂದಣಿಯಾಗಿದ್ದಾರೆ.

149 ಮಕ್ಕಳು ಮೃತಪಟ್ಟಿದ್ದಾರೆ. 987 ಮಕ್ಕಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವರದಿಯಲ್ಲಿ ತಪ್ಪಾಗಿ ನಮೂದಿಸಲಾಗಿದೆ. 72 ಮಕ್ಕಳು ಪತ್ತೆಯಾಗಿಲ್ಲ ಎಂದು ಪ್ರಮಾಣಪತ್ರದಲ್ಲಿ ವಿವರಿಸಲಾಗಿದೆ. ಅಲ್ಲದೆ, 6 ರಿಂದ 14 ವರ್ಷ ವಯೋಮಿತಿಯ ಒಟ್ಟು 17,266 ಮಕ್ಕಳನ್ನು ಶಾಲೆಗೆ ದಾಖಲಿಸಲಾಗಿದೆ.

1,813 ಮಕ್ಕಳು ವಲಸೆ ಹೋಗಿದ್ದಾರೆ. 259 ಮಕ್ಕಳು ಅನಾರೋಗ್ಯ ಪೀಡಿತರಾಗಿದ್ದಾರೆ. ಮುಕ್ತ ಶಾಲೆಗೆ 29 ಹಾಗೂ ಮದರಸಾಕ್ಕೆ 120 ಮಕ್ಕಳನ್ನು ದಾಖಲಿಸಲಾಗಿದೆ. 127 ಮಕ್ಕಳು ಸಾವನ್ನಪ್ಪಿದ್ದು, 37 ಮಕ್ಕಳು 6 ವರ್ಷಕ್ಕಿಂತ ಕಡಿಮೆ ವಯೋಮಾನದವರು. 1,756 ಮಕ್ಕಳು 14 ವರ್ಷ ಮೀರಿದವರು ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+