ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆಚ್ಚುವರಿ ಹಣ ವಸೂಲಿಗೆ ಕಡಿವಾಣ, ಸಿಟಿ ಸ್ಕ್ಯಾನಿಂಗ್‌ಗೆ ದರ ನಿಗದಿ ಮಾಡಿದ ಸರ್ಕಾರ

|
Google Oneindia Kannada News

ಬೆಂಗಳೂರು, ಮೇ 07: ಸಿಟಿ ಸ್ಕ್ಯಾನಿಂಗ್‌ ದುಬಾರಿ ಹಣ ವಸೂಲಿಗೆ ಕಡಿವಾಣ ಹಾಕಿ ಸರ್ಕಾರ ದರ ನಿಗದಿ ಮಾಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಟಿ ಸ್ಕ್ಯಾನ್ ಮಾಡಲಾಗುವುದು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 1500 ರೂ ದರ ನಿಗಡಿ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತು ಸಚಿವ ಸುಧಾಕರ್ ಮಾತನಾಡಿ, ಕೆಲ ಆಸ್ಪತ್ರೆಗಳಲ್ಲಿ ರೋಗಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.

ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ.ಸ್ಕ್ಯಾನಿಂಗ್ ಗಾಗಿ ಒಂದೂವರೆ ಸಾವಿರ ರೂಪಾಯಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದೂ ಸಚಿವರು ಎಚ್ಚರಿಕೆ ನೀಡಿದ್ದಾರೆ.

Karnataka Govt Fix Price For City Scan At Private Hospitals

ಸರ್ಕಾರಿ ವ್ಯವಸ್ಥೆಯಲ್ಲಿ ಸ್ಕ್ಯಾನಿಂಗ್ ಅನ್ನು ಉಚಿತವಾಗಿ ಮಾಡಲಾಗುತ್ತಿದೆ. ಸಾರ್ವಜನಿಕರು ಸರಕಾರಿ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದೂ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 49058 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿನಿಂದ 328 ಮಂದಿ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 18943 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಪ್ರತಿನಿತ್ಯ 50,000 ಆಸು-ಪಾಸಿನಲ್ಲಿ ಕೊರೊನಾವೈರಸ್!ಕರ್ನಾಟಕದಲ್ಲಿ ಪ್ರತಿನಿತ್ಯ 50,000 ಆಸು-ಪಾಸಿನಲ್ಲಿ ಕೊರೊನಾವೈರಸ್!

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

Recommended Video

DK Shivakumar ಸರ್ಕಾರದ ವಿರುದ್ದ ಕಿಡಿ ಕಾರಿದ್ದು ಹೀಗೆ !! | Oneindia Kannada

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1790104 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 12,55,797 ಸೋಂಕಿತರು ಗುಣಮುಖರಾಗಿದ್ದು, 17,212ಕ್ಕೆ ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 5,17,075 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
Since CT- Scan or X-Ray is becoming increasingly necessary to detect Covid-19 infection, Karnataka Govt has decided to cap the price of CT-Scan and Digital X-Ray in private hospitals and labs at ₹1,500 and ₹250 respectively.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X