ಕರ್ನಾಟಕದಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆಗೆ ಗ್ರೀನ್ ಸಿಗ್ನಲ್: ಸಚಿವರಿಗೆ ವರ್ಗಾವಣೆ ಹೊಣೆ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿ ಶೇ.6ರಷ್ಟು ಮೀರದಂತೆ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಹಸಿರು ನಿಸಾನೆ ತೋರಿದೆ. ಆಯಾ ಇಲಾಖೆ ಸಚಿವರಿಗೆ ಅಧಿಕಾರಿಗಳ ವರ್ಗಾವಣೆ ಹೊಣೆಗಾರಿಕೆಯನ್ನು ನೀಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಸರ್ಕಾರಿ ನೌಕರರ ವರ್ಗಾವಣೆ ಕುರಿತು ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ 1ರಿಂದ ಮತ್ತು ಜೂನ್ 15ರವರೆಗೆ ಮಾತ್ರ ಷರತ್ತುಗಳಿಗೆ ಒಳಪಟ್ಟಿರುತ್ತವೆ.

2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಅನುಮತಿ ನೀಡಲಾಗಿದೆ.

ಸಚಿವರಿಗೆ ವರ್ಗಾವಣೆ ಹೊಣೆಗಾರಿಕೆ:
2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್ ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರ ವರ್ಗಾವಣೆಯ ಹೊಣೆಯನ್ನು ಆಯಾ ಇಲಾಖೆಗಳ ಸಚಿವರಿಗೆ ವಹಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.












Click it and Unblock the Notifications