ಗಣೇಶ ಚತುರ್ಥಿ ಆಚರಣೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿ

ಬೆಂಗಳೂರು, ಆಗಸ್ಟ್ 14 : ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಗಣೇಶ ಚತುರ್ಥಿ ಬಂದಿದೆ. ಸೋಂಕು ಹರಡುವ ಭೀತಿಯ ಕಾರಣ ಹೆಚ್ಚು ಜನರು ಸೇರುವಂತಿಲ್ಲ ಎಂದು ಸರ್ಕಾರ ಹೇಳಿದೆ. ಗಣೇಶ ಚತುರ್ಥಿ ಆಚರಣೆ ಮಾಡಲು ಕರ್ನಾಟಕ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ.

Recommended Video

      IPL 2020 : 'Tata' shows interest in the title sponsorship | Oneindia Kannada

      ಶುಕ್ರವಾರ ಕರ್ನಾಟಕ ಸರ್ಕಾರ ಗಣೇಶ ಚತುರ್ಥಿ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದೆ. ಆಗಸ್ಟ್ 21ರಂದು ಗೌರಿ ಹಬ್ಬವಿದ್ದು, ಆಗಸ್ಟ್ 22ರ ಶನಿವಾರ ಗಣೇಶ ಚತುರ್ಥಿ ಇದೆ. ಸರ್ಕಾರದ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ ಎಂದು ಸರ್ಕಾರ ಹೇಳಿದೆ.

      Karnataka Govt Guidelines For Ganesh Festival 2020

      ಕೋವಿಡ್ ಭೀತಿಯ ಕಾರಣ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಲಾಗಿದೆ.

      ಮಾರ್ಗಸೂಚಿಗಳು

      * ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸುವುದು.

      * ಹಬ್ಬವನ್ನು ಸಾರ್ವಜನಿಕ ಸ್ಥಳಗಳಲ್ಲಿ(ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ.

      * ಯಾವುದೇ ಕಾರಣಕ್ಕೂ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮಾಡುವಂತಿಲ್ಲ.

      * ಗಣೇಶ ಮೂರ್ತಿಯನ್ನು ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಮೆರವಣಿಗೆ ಮಾಡುವಂತಿಲ್ಲ. ಮೆರವಣಿಗೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

      * ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು.

      ಮಾರ್ಗಸೂಚಿ ಓದಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+