Get Updates
Get notified of breaking news, exclusive insights, and must-see stories!

ಬಿಜೆಪಿ 40% ಕಮಿಷನ್ ಹಗರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 11: ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಈ ಕುರಿತು ಸರಣಿ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿದ್ದರಾಮಯ್ಯನವರು, ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದಿಂದ ಇಂದು ನಗರದಲ್ಲಿ ಸುದ್ದಿಗೋಷ್ಠಿ ಇದೆ. ಇದಕ್ಕು ಮೊದಲೇ ಸಿದ್ದರಾಮಯ್ಯ ಅವರು ಬಿಜೆಪಿಯ 40% ಕಮಿಷನ್ ಹಗರಣದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದಾರೆ.

Karnataka Govt Has Given BJP 40 Percent commission Scam To Judicial Probe, Says CM Siddaramaiah

ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ಬಿಜೆಪಿಯ

ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡುವ ಭರವಸೆ ನೀಡಿದ್ದೇನೆ. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಲಾಗಿದೆ.

ಬಿಜೆಪಿ ಹಗರಣ ತನಿಖೆಗೆ ಬಗ್ಗೆ ಮೊದಲೇ ಹೇಳಿದ್ದ ಕಾಂಗ್ರೆಸ್

ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು. ಈ ಹಿಂದೆ ಪಿಎಸ್‌ಐ ಹಗರಣ, ಬಿಟ್ ಕಾಯಿನ್, ಚಾಮರಾನಗರ ಆಕ್ಸಿಜನ್ ದುರಂತ ಸೇರಿದಂತೆ ಕೋವಿಡ್ ಹಗರಣಗಳ ತನಿಖೆಗೆ ನೀಡುವುದಾಗಿ ಸರ್ಕಾರ ತಿಳಿಸಿತ್ತು.

Karnataka Govt Has Given BJP 40 Percent commission Scam To Judicial Probe, Says CM Siddaramaiah

ಬಿಜೆಪಿ ಸರ್ಕಾರದ ಕಾಮಗಾರಿಯನ್ನೇ ನಡೆಸಿದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಎಲ್ಲಾ ನ್ಯಾಯಾಂಗ ಸಮಿತಿಯು ಈ ಹಗರಣಗಳ ಕುರಿತು ತನಿಖೆ ನಡೆಸುತ್ತಿದೆ, ತನಿಖೆ ಪೂರ್ಣವಾಗಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣವನ್ನು ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ಗುತ್ತಿಗೆದಾರರಿಗೆ ಸಿಎಂ ಅಭಯ

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವುದೇ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?.

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅವರ ಕಮಿಷನ್ ದರವನ್ನು 40% ರಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ ಎಂದರು.

ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದು ನಮ್ಮದು ಬರೀ ಉತ್ತಮವಲ್ಲದ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ನಾಡಿನ ಜನತೆಯದ್ದಾಗಿದೆ.

ಅವರಿಗೆ ಪ್ರಧಾನಿ ಮೋದಿ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇಲ್ಲ: ಲೇವಡಿ

ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿ ಬಿಲ್ ಹಣವನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಬೇಕಾದ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ. ಇದೆಲ್ಲ ನೋಡಿದರೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪ್ರಧಾನಿ ಮೋದಿ ಅವರ ಕಾರ್ಯದಕ್ಷತೆಯ ಬಗ್ಗೆ ನಂಬಿಕೆ ಇಲ್ಲ ಎಂದು ಅವರು ಲೇವಡಿ ಮಾಡಿದರು.

ಕರ್ನಾಟಕ ಸಣ್ಣ ರಾಜ್ಯ ಮತ್ತು ಮಧ್ಯಮ ಗುತ್ತಿಗೆದಾರರು ಮತ್ತು ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗಾಗಿ ನನ್ನೊಂದಿಗೆ ಚರ್ಚಿಸಿದ್ದಾರೆ, POW ಕಾಮಗಾರಿಗಳ ಬಿಲ್ ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ.

ಕಾಮಗಾರಿಗಳ ಬಿಲ್ ಬಿಡುಗಡೆಗೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಈ ನಡುವೆ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಯೋಜನೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದು ಬಿಜೆಪಿ ನಾಯಕರಿಗೆ ಅವರು ತಿರುಗೇಟು ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+