IPS Transfer: ವಿವಿಧ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ
ಬೆಂಗಳೂರು, ಜುಲೈ 12: ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಐಪಿಎಸ್ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಮೊನ್ನೆಯಷ್ಟೇ ಸರ್ಕಾರ ಕೆಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿತ್ತು. ಅದರ ಬೆನ್ನಲ್ಲೆ ಮತ್ತೊಂದು ವರ್ಗಾವಣೆ ಆದೇಶ ಹೊರ ಬಿದ್ದಿದೆ.
ಪೊಲೀಸ್ ಹೆಡ್ ಕ್ವಾರ್ಟ್‌ರ್ ಐಜಿಪಿಯಾಗಿದ್ದ ಎಸ್.ಎನ್. ಸಿದ್ದರಾಮಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಮೇಲ್ದರ್ಜೆಗೇರಿಸಿದ ಬೆಳಗಾವಿ ನಗರದ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (IGP) ಮತ್ತು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಐಪಿಎಸ್ ನಿಯಮಗಳು 2016ರ ನಿಯಮ 12ರ ಪ್ರಕಾರ ವೇಳಾಪಟ್ಟಿ IIರ ಅಡಿ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಮತ್ತು ಪೊಲೀಸ್ ಆಯುಕ್ತ ಬೆಳಗಾವಿ ನಗರ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್‌ಮೆಂಟ್ ಕೇಡರ್ ಹುದ್ದೆಗೆ ಸಮಾನವಾದ ಸ್ಥಾನಮಾನ ಮತ್ತು ಜವಾಬ್ದಾರಿಗಳನ್ನು ಘೋಷಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಬೆಂಗಳೂರಿನ ರಾಜ್ಯ ಅಪರಾಧ ದಾಖಲೆ ಬ್ಯೂರೋದ ಪೊಲೀಸ್ ಅಧೀಕ್ಷಕರಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಅವರು ಮುಂದಿನ ಆದೇಶದವರೆಗೆ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಇನ್ನೂ ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧೀಕ್ಷಕರಾಗಿದ್ದ ಡಿ.ಆರ್. ಸಿರಿ ಗೌರಿ ಅವರನ್ನು ಸಹ ವರ್ಗಾವಣೆ ಮಾಡಲಾಗಿದೆ. ಇವರು ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಆಡಳಿತ ವಿಭಾಗದ ಉಪ ಆಯುಕ್ತರಾಗಿ ಕೆಲಸ ಮಾಡಲಿದ್ದಾರೆ.

ಬೆಂಗಳೂರು ನಗರ ಆಡಳಿತ ವಿಭಾಗದ ಉಪ ಆಯುಕ್ತರಾಗಿದ್ದ ಡಾ. ಅನೂಪ್ ಎ. ಶೆಟ್ಟಿ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಇವರು ಮುಂದಿನ ಆದೇಶವರೆಗೆ ಸೈಬರ್ ಕ್ರೈಮ್ ವಿಭಾಗದ ಕ್ರಿಮಿನಲ್ ತನಿಖಾ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.












Click it and Unblock the Notifications