ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್; ಕರ್ಫ್ಯೂ ಜಾರಿ

ಬೆಂಗಳೂರು, ಜುಲೈ 26 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಕರ್ನಾಟಕದಲ್ಲಿ ಭಾನುವಾರದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ.

ಶನಿವಾರ ರಾತ್ರಿ 9 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯ ತನಕ ಕರ್ನಾಟಕದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸಾರಿಗೆ ಸಂಚಾರ ಸಂಪೂರ್ಣ ರದ್ದುಗೊಳ್ಳಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ಇರುತ್ತದೆ.

ಜನರು ಅನಗತ್ಯವಾಗಿ ಮನೆಯಿಂದ ಹೊರ ಬಾರಬಾರದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಜನರಲ್ಲಿ ಮನವಿ ಮಾಡಿದ್ದಾರೆ.

Lockdown

ಕರ್ನಾಟಕದಲ್ಲಿ ಕಳೆದ ಮೂರು ದಿನಗಳಿಂದ 5 ಸಾವಿರ ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗುತ್ತಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಕಳೆದ ವಾರ ಲಾಕ್ ಡೌನ್ ಜಾರಿಯಲ್ಲಿತ್ತು. ಈಗ ಲಾಕ್ ಡೌನ್ ತೆರವು ಮಾಡಲಾಗಿದೆ. ಆದರೆ, ಭಾನುವಾರದ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ನಗರದಲ್ಲಿ ಶನಿವಾರ 2036 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ನಗರದ ಒಟ್ಟು ಸೋಂಕಿತರ ಸಂಖ್ಯೆ 43,503ಕ್ಕೆ ಏರಿಕೆಯಾಗಿದೆ.

ಭಾನುವಾರದ ಲಾಕ್ ಡೌನ್ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+