ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಸೇವೆಗೆ ಡೇಟಾ ಎಂಟ್ರಿ ಆಪರೇಟರ್ಸ್ ಬಳಕೆ: ರಾಜ್ಯ ಸರ್ಕಾರ ಸೂಚನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ಕೊರೊನಾ ವೈರಸ್ ಸೋಂಕಿನ ಹೆಚ್ಚುವರಿ ಹೊಣೆಗಾರಿಕೆಯ ಕಾರಣದಿಂದಾಗಿ ಸಿಬ್ಬಂದಿ ಕೊರತೆ ಎದುರಿಸುತ್ತಿರುವ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳವರೆಗಿನ ಸಂಸ್ಥೆಗಳ ಸುಗಮ ಕಾರ್ಯ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಗಳಲ್ಲಿನ ಡೇಟಾ ಎಂಟ್ರಿ ಅಪರೇಟರ್‌ಗಳನ್ನು ಬಳಸಿಕೊಳ್ಳುವಂತೆ ಕರ್ನಾಟಕ ಸರ್ಕಾರ ಸ್ಥಳೀಯ ಆಡಳಿತಗಳಿಗೆ ಸೂಚನೆ ನೀಡಿದೆ.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಬುಧವಾರ ಈ ಸುತ್ತೋಲೆಗೆ ಸಹಿ ಹಾಕಿದ್ದು, ಕೊರೊನಾ ವೈರಸ್ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಸಿಬ್ಬಂದಿಗೆ ನೆರವು ನೀಡಲು ಡೇಟಾ ಎಂಟ್ರಿ ಆಪರೇಟರ್‌ಗಳ ಸೇವೆ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.

ಬೆಕ್ಕುಗಳಿಗೂ ಕೊರೊನಾ ಸೋಂಕು ತಗುಲುವ ಸಾಧ್ಯತೆ ಬೆಕ್ಕುಗಳಿಗೂ ಕೊರೊನಾ ಸೋಂಕು ತಗುಲುವ ಸಾಧ್ಯತೆ

ಈ ಕೇಂದ್ರಗಳಿಗೆ ಆರೋಗ್ಯ ಇಲಾಖೆಯು ಸಿಬ್ಬಂದಿ ವ್ಯವಸ್ಥೆ ಮಾಡುವವರೆಗೂ ಈ ಕ್ರಮವನ್ನು ಅನುಸರಿಸುವಂತೆ ಸರ್ಕಾರವು ನಿರ್ದೇಶನ ನೀಡಿದೆ.

ಗ್ರಾಮ ಪಂಚಾಯಿತಿಗಳಲ್ಲಿನ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಆಯಾ ಪಂಚಾಯ್ತಿ ವ್ಯಾಪ್ತಿಯಲ್ಲಿನ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿನ ಕೆಲಸಗಳಿಗೆ ದಿನಕ್ಕೆ ಒಂದು ಗಂಟೆ ಬಳಸಿಕೊಳ್ಳಬಹುದು ಎಂದು ತಿಳಿಸಿದೆ. ಮುಂದೆ ಓದಿ.

ಸಿಬ್ಬಂದಿ ಕೊರತೆ ನೀಗಿಸಲು ಕ್ರಮ

ಸಿಬ್ಬಂದಿ ಕೊರತೆ ನೀಗಿಸಲು ಕ್ರಮ

'ತಾಲ್ಲೂಕು ಮಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಉಂಟಾಗುತ್ತಿದೆ. ಇದರಿಂದ ದೈನಂದಿನ ಕಾರ್ಯಾಚರಣೆಗಳಿಗೆ ಹಿನ್ನಡೆಯುಂಟಾಗುತ್ತಿದೆ. ಕೋವಿಡ್ 19 ನಿಯಂತ್ರಣ ಕಾರ್ಯಕ್ಕೆ ಮತ್ತು ಆರೋಗ್ಯ ಇಲಾಖೆಯಡಿ ನಡೆಸುವ ವಿವಿಧ ಕಾರ್ಯಕ್ರಮಗಳಿಗೆ ರೋಗಿಗಳನ್ನು ನೋಂದಣಿ ಮಾಡಲು ಸಿಬ್ಬಂದಿ ಕೊರತೆ ಉಂಟಾಗಿದೆ. ಹೀಗಾಗಿ ಕೇಂದ್ರಗಳಿಗೆ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಒದಗಿಸುವುದು ಅಗತ್ಯವಾಗಿದೆ' ಎಂದು ಸುತ್ತೋಲೆ ಹೇಳಿದೆ.

ನೆರೆಯ ಪಂಚಾಯ್ತಿಯಿಂದ ಬಳಸಬೇಕು

ನೆರೆಯ ಪಂಚಾಯ್ತಿಯಿಂದ ಬಳಸಬೇಕು

ಈ ಉದ್ದೇಶದಿಂದಾಗಿ ಪಂಚಾಯತ್‌ಗಳಲ್ಲಿ ಕೆಲಸ ಮಾಡುವ ಆಪರೇಟರ್‌ಗಳು ದಿನಕ್ಕೆ ಒಂದು ಗಂಟೆ ಲಭ್ಯ ಇರುವುದಿಲ್ಲ. ಆರೋಗ್ಯ ಕೇಂದ್ರ ಇರುವ ಸ್ಥಳದಲ್ಲಿ ಯಾವುದೇ ಪಂಚಾಯಿತಿಗಳು ಇಲ್ಲದೇ ಹೋದಲ್ಲಿ ಸಮೀಪದ ಪಂಚಾಯಿತಿಗಳಿಂದ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ!ಬೆಂಗಳೂರಲ್ಲಿ ಅಂಬ್ಯುಲೆನ್ಸ್ ಹತ್ತಿದ ಯುವತಿ ದೆಹಲಿಯಲ್ಲಿ ಪತ್ತೆ!

ತಾಲ್ಲೂಕು ಅಧಿಕಾರಿಗಳಿಂದ ತರಬೇತಿ

ತಾಲ್ಲೂಕು ಅಧಿಕಾರಿಗಳಿಂದ ತರಬೇತಿ

ಈ ಸಂಬಂಧ ಕರ್ತವ್ಯ ನಿಯೋಜನೆಯ ಆದೇಶಗಳನ್ನು ಹೊರಡಿಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ನಿರ್ದೇಶಿಸಲಾಗಿದ್ದು, ತಾಲ್ಲೂಕು ಆರೋಗ್ಯ ಅಧಿಕಾರಿಗಳು ಈ ಹೆಚ್ಚುವರಿ ಡೇಟಾ ಎಂಟ್ರಿ ಆಪರೇಟರ್‌ಗಳಿಗೆ ತರಬೇತಿ ನೀಡಲಿದ್ದಾರೆ.

Recommended Video

IPL ನಲ್ಲಿ ಈ ಟೀಮ್ ಗೆಲ್ಲೋದು ಪಕ್ಕಾ ಅಂತೆ..! | Brett Lee | Oneindia Kannada
ಮಾನವ ಶಕ್ತಿಯ ಕೊರತೆ

ಮಾನವ ಶಕ್ತಿಯ ಕೊರತೆ

ಕರ್ನಾಟಕದ ಅನೇಕ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಮತ್ತು ಅವರ ಸಂಪರ್ಕಗಳ ಮಾಹಿತಿಗಳನ್ನು ದಾಖಲಿಸಲು ಅಗತ್ಯ ಪ್ರಮಾಣದ ಮಾನವ ಶಕ್ತಿಯ ಕೊರತೆ ಉಂಟಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಈ ಕೆಲಸಗಳು ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ. ಇದರಿಂದಾಗಿ ತಾತ್ಕಾಲಿಕ ಕ್ರಮವಾಗಿ ಡೇಟಾ ಎಂಟ್ರಿ ಆಪರೇಟರ್‌ಗಳನ್ನು ಬಳಸಿಕೊಳ್ಳುವಂತೆ ಸುತ್ತೋಲೆ ಹೊರಡಿಸಲಾಗಿದೆ.

English summary
Karnataka govt instructed to rope in data entry operators of gram panchayats to contain Covid-19 in rural areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X