ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಲೈಂಗಿಕ ಅಲ್ಪಸಂಖ್ಯಾತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ!

|
Google Oneindia Kannada News

ಬೆಂಗಳೂರು, ಜು. 07: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡಲು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ. ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್‌ 'ಎ' ನಿಂದ ಗ್ರೂಪ್‌ 'ಡಿ' ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ನೀಡಬೇಕೆಂದು ಆದೇಶ ಮಾಡಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಚಿಂತನೆ ಆರಂಭಿಸಿದ್ದರು. ಇದೀಗ ಹೈಕೋರ್ಟ್ ಆದೇಶದಂತೆ ರಾಜ್ಯ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ನ್ನು ತಿದ್ದುಪಡಿ ಮಾಡಲಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕಳೆದ ವರ್ಷ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಜುಲೈ 6, 2021 ರಂದು ಅಧಿಸೂಚನೆ ಹೊರಡಿಸಿರುವ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ಈಸಲಾತಿ ನಿಗದಿ ಮಾಡಿ ಆದೇಶ ಮಾಡಿದೆ.

ಅಧಿಸೂಚನೆಯ ಪ್ರಕಾರ ಜನರಲ್ ಮೆರಿಟ್‌, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ಲಭ್ಯವಿರುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ಕ್ಕೆ ತಿದ್ದುಪಡಿ ತರಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಂಗಮ ಎಂಬ ಸಂಸ್ಥೆಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅಧಿಸೂಚನೆಯ ಕರಡನ್ನು ಸಲ್ಲಿಸಿತ್ತು.

: Karnataka Govt Issued Notification on 1% Reservation For Transgenders in Govt Jobs

ಸರ್ಕಾರಿ ನೇರ ನೇಮಕಾತಿಯ ಸಂದರ್ಭದಲ್ಲಿ ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಮೀಸಲಿರಿಸಿದ ಶೇಕಡಾ 1ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗದಿದ್ದಲ್ಲಿ ಅಂತಹ ಹುದ್ದೆಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

: Karnataka Govt Issued Notification on 1% Reservation For Transgenders in Govt Jobs

Recommended Video

ಕರ್ನಾಟಕದಿಂದ ಮೋದಿ ಸಂಪುಟ ಸೇರಿದ ರಾಜೀವ್ ಚಂದ್ರಶೇಖರ್ ಯಾರು..? | Oneindia Kannada

ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ 2017ರ ನವೆಂಬರ್ ತಿಂಗಳಿನಲ್ಲಿ 'ಲೈಂಗಿಕ ಅಲ್ಪಸಂಖ್ಯಾತರ ನೀತಿ'ಯನ್ನು ಜಾರಿಗೆ ತಂದಿತ್ತು. ಆಗಿನ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡುವ ಬಗ್ಗೆಯೂ ಚರ್ಚೆ ಆಗಿತ್ತು. ಲೈಂಗಿಕ ಅಲ್ಪಸಂಖ್ಯಾತರಿಗೆ ಅಂವಿಧಾನದಲ್ಲಿನ ಎಲ್ಲ ಸವಲತ್ತುಗಳು ಸಿಗಬೇಕು ಎಂದು 2014ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಮೀಸಲಾತಿ ಕೊಡುವ ಕುರಿತು ಪ್ರಕ್ರಿಯೆ ಮುಂದುವರೆಸಿತ್ತು.

English summary
Karnataka Government Issued Notification on 1% reservation for transgenders in government jobs. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X