ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಸಿರು ಪಟಾಕಿ ಎಂದರೇನು?: ಸರ್ಕಾರದ ಸ್ಪಷ್ಟನೆ ಇಲ್ಲಿದೆ

|
Google Oneindia Kannada News

ಬೆಂಗಳೂರು, ನವೆಂಬರ್ 13: ದೀಪಾವಳಿ ಸನ್ನಿಹಿತವಾಗುತ್ತಿದೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಸಿರು ಪಟಾಕಿಗಳನ್ನು ಸಿಡಿಸಲು ಹಾಗೂ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ.

ಆದರೆ ಈ ಹಸಿರು ಪಟಾಕಿ ಎಂದರೇನು ಎಂಬುದರ ಕುರಿತು ಜನರಿಗೆ ಗೊಂದಲಗಳಿದ್ದವು. ಇದೀಗ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.

ದೆಹಲಿ: ನವೆಂಬರ್ 9ರ ಮಧ್ಯರಾತ್ರಿಯಿಂದ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ ದೆಹಲಿ: ನವೆಂಬರ್ 9ರ ಮಧ್ಯರಾತ್ರಿಯಿಂದ ಎಲ್ಲಾ ರೀತಿಯ ಪಟಾಕಿಗಳಿಗೆ ನಿಷೇಧ

ಹಸಿರು ಪಟಾಕಿಗಳು ಪರಿಸರಕ್ಕೆ ಹಾನಿ ಉಂಟು ಮಾಡುವುದಿಲ್ಲ. ಹೀಗಾಗಿ ಈ ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Karnataka Govt Issues Clarification On Green Crackers Ahead Of Deepavali

ಹಸಿರು ಪಟಾಕಿಯನ್ನು ಕಂಡು ಹಿಡಿಯುವುದು, ಕೊಳ್ಳುವುದು ಹೇಗೆ ಎಂಬುದರ ಕುರಿತು ಕೂಡ ಮಾಹಿತಿ ಇಲ್ಲಿದೆ. ಹಸಿರು ಪಟಾಕಿಯನ್ನು NEERI ಲ್ಯಾಬ್ ಫಾರ್ಮುಲಾದ ಪ್ರಕಾರ ತಯಾರಿಸಲಾಗುತ್ತದೆ. ಇದಕ್ಕೆ ಪೆಟ್ರೋಲಿಯಂ ಆ್ಯಂಡ್​ ಎಕ್ಸ್​ಪ್ಲೋಸಿವ್ ಸೇಫ್ಟಿ ಆರ್ಗನೈಸೇಷನ್ ಪ್ರಮಾಣೀಕರಣ ನೀಡಿದೆ. ಗ್ರಾಹಕರು ಹಸಿರು ಪಟಾಕಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು.

ಹಸಿರು ಪಟಾಕಿ ಬಾಕ್ಸ್‌ಗಳ ಮೇಲೆ‌ NEERI ಮತ್ತು PESO ಲಾಂಛನ ಇರುತ್ತದೆ. ನಿಮ್ಮ ಮೊಬೈಲ್​ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಹಸಿರು ಪಟಾಕಿಯು ಕಡಿಮೆ ಹೊಗೆಯನ್ನು ಹರಡುತ್ತದೆ. ಈ ಪಟಾಕಿ ಸಾಮಾನ್ಯ ಪಟಾಕಿಗಿಂತ ಶೇ. 30ರಷ್ಟು ಮಾತ್ರ ಮಾಲಿನ್ಯ ಮಾಡುತ್ತದೆ. ಹಸಿರು ಪಟಾಕಿಗಳು ಧೂಳೆಬ್ಬಿಸುವುದಿಲ್ಲ, ಇವನ್ನು ಗುರುತಿಸುವುದು ಸುಲಭವಾಗುವಂತೆ ಕ್ಯೂಆರ್ ಕೋಡ್ ನೀಡಲಾಗಿರುತ್ತದೆ.

ಈ ಬಾರಿ ಸಿಎಸ್​ಐಆರ್​-ನೀರಿ ಸಂಸ್ಥೆಗಳಿಂದ ಮಾನ್ಯತೆ ಪಡೆದಿರುವ ಕಂಪನಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಎಂದರೆ ಸಾಮಾನ್ಯ ಪಟಾಕಿಗಿಂತ ಕಡಿಮೆ ಮಾಲಿನ್ಯ ಮಾಡುವ ಪಟಾಕಿ.

Recommended Video

ಪತ್ರಿಕಾ ರಂಗದ ದೊಡ್ಡ ಕೊಂಡಿ ಇಂದು ನಮ್ಮನ್ನು ಬಿಟ್ಟು ಹೋಗಿದ್ದೆ | Oneindia Kannada

CSIR ಮತ್ತು NEERI ಸಂಶೋಧನಾ ಸಂಸ್ಥೆಗಳು ಜಂಟಿಯಾಗಿ ಹಸಿರು ಪಟಾಕಿಯನ್ನು ಅಭಿವೃದ್ದಿ ಪಡಿಸಿವೆ.

English summary
The Karnataka government has issued a order to “bring in more clarity on the concept of green crackers”, which, it had exempted from the statewide ban of crackers ahead of Diwali, last week.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X