ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ
ಬೆಂಗಳೂರು, ಸೆಪ್ಟೆಂಬರ್ 9: ಕರ್ನಾಟಕದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ಅನ್ವಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮದಂತೆ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಸಂಪೂರ್ಣ ಅಧಿಕಾರವನ್ನು ಕೊಡಲಾಗಿದೆ.
ರಾಜ್ಯ ಸರ್ಕಾರವು ಎಸಿಬಿ ರದ್ದುಪಡಿಸುವುದರ ಬಗ್ಗೆ ಹೊರಡಿಸಿರುವ ಆದೇಶದಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ. ಸರ್ಕಾರದ ಆದೇಶ ಪ್ರತಿಯಲ್ಲಿ ಏನೆಲ್ಲಾ ಇದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳಿ.

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಏನೆಲ್ಲಾ ಇದೆ?
* 2022ರ ಆಗಸ್ಟ್ 8ರಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದೆ.
* ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿ, ಹೈಕೋರ್ಟ್ ಹೊರಡಿಸಿದ ಆದೇಶದ ತತ್ಪರಿಣಾಮವನ್ನು ಜಾರಿಗೊಳಿಸಲಾಗಿದೆ.
* ಹೈಕೋರ್ಟ್ ಆದೇಶದ ಅನ್ವಯ ಸರ್ಕಾರದ ಅಧಿಸೂಚನೆ ದಿನಾಂಕ 6.2.1991 ಮತ್ತು 8.5.2022 ಹಾಗೂ 5.12.2002ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್)ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರವನ್ನು ನೀಡಿ ಆದೇಶಿಸಿದ್ದ ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದೆ.
* ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವುದರಿಂದ ಹಾಗೂ ದಿನಾಂಕ 19.3.2016, 30.03.2016 ಹಾಗೂ 21.04.2016ರ ಸರ್ಕಾರದ ಅಧಿಸೂಚನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಲಾಗಿದ್ದ ತನಿಖಾಧಿಕಾರ, ಪೊಲೀಸ್ ಠಾಣೆಗಳೆಂದು ಘೋಷಿಸಿ ರಾಜ್ಯವ್ಯಾಪಿ ಅಧಿಕಾರ ನೀಡಿರುವ ಆದೇಶಗಳನ್ನು ಹಿಂಪಡಿಯುವುದರಿಂದ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು, ವಿಚಾರಣೆಗಳು ಮತ್ತು ಇತರೆ ಶಿಸ್ತಿನ ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವುದು.

ಖಡಕ್ ಅಧಿಕಾರಿಗಳಿಲ್ಲದೇ ಸೊರಗಿರುವ ಲೋಕಾಯುಕ್ತ?
ಎಸಿಬಿ ರಚನೆಯಾದ ಬಳಿಕ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ ಘಟಕವಿದ್ದರೂ ಕೇವಲ ದೂರುಗಳ ವಿಚಾರಣೆ ನಡೆಸಿ ವರದಿ ನೀಡಲು ಸೀಮಿತವಾಗಿತ್ತು. ಹೀಗಾಗಿ ಸಿಕ್ಕ ಸಿಕ್ಕ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ಭ್ರಷ್ಟಾಚಾರ ಅರೋಪ ಇರುವ ಪೊಲೀಸ್ ಅಧಿಕಾರಿಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಇದೀಗ ಲೋಕಾಯುಕ್ತ ಪೊಲೀಸ್ ಘಟಕ ಸಮರ್ಥವಾಗಿ ಕೆಲಸ ಮಾಡಲು ಖಡಕ್ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಅನಿವಾರ್ಯತೆ ಲೋಕಾಯುಕ್ತಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಲೋಕಾಯುಕ್ತರು ಕಾರ್ಯ ಪ್ರವೃತ್ತರಾಗಬೇಕಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಖಡಕ್ ಪೊಲೀಸ್ ಅಧಿಕಾರಿಗಳನ್ನು ವಾಪಸು ಕರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ರಾಜ್ಯದಲ್ಲಿ ಎಸಿಬಿ ರಚನೆ ಹಿಂದಿನ ರಹಸ್ಯ
ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣ ತನಿಖೆಗೆ ಎಸಿಬಿಯನ್ನು ರಚನೆ ಮಾಡಿ 2016ರ ಮಾರ್ಚ್ 14ರಂದು ಅಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 2016ರ ಮಾರ್ಚ್ 19ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಅಪರಾಧ ದಾಖಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದು ಆದೇಶಿಸಲಾಗಿತ್ತು. ಈ ಆದೇಶಗಳನ್ನು ಪ್ರಶ್ನಿಸಿ 2016ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಎಸಿಬಿ, ಕರ್ನಾಟಕ ಪೊಲೀಸ್ ಕಾಯ್ದೆ-1963ಕ್ಕೆ ಅನುಗುಣವಾಗಿ ರಚನೆಯಾಗಿಲ್ಲ. ಪೊಲೀಸ್ ಠಾಣೆ ಸ್ಥಾನಮಾನ ನೀಡಲು ಈ ಕಾಯ್ದೆಯಡಿಯಲ್ಲೇ ಅಧಿಸೂಚನೆ ಹೊರಡಿಸಬೇಕು. ಆದರೆ ರಾಜಕೀಯ ಉದ್ದೇಶಗಳಿಂದ ಇದನ್ನು ರಚನೆ ಮಾಡಲಾಗಿದೆ. ಹಾಗೂ ಎಸಿಬಿಗೆ ಪೊಲೀಸ್ ಠಾಣೆಯ ಅಧಿಕಾರ ವ್ಯಾಪ್ತಿ ಇಲ್ಲ' ಎಂಬುದು ಅರ್ಜಿದಾರರ ಆಕ್ಷೇಪವಾಗಿತ್ತು.

ಲೋಕಾಯುಕ್ತ ಉಲ್ಲೇಖಿಸಿದ ವಾದವೇನು?
ಲೋಕಾಯುಕ್ತ ಪರ ಹಿರಿಯ ವಕೀಲರು, ಎಸಿಬಿ ರಚನೆ ಮಾಡುವ ಮೂಲಕ ಸರ್ಕಾರ ಲೋಕಾಯುಕ್ತಕ್ಕೆ ನೀಡಿದ್ದ ಪೊಲೀಸ್ ತನಿಖಾಧಿಕಾರವನ್ನು ಕಿತ್ತುಕೊಂಡಿದೆ. ಲೋಕಾಯುಕ್ತದ ಅಧಿಕಾರಗಳನ್ನು ದುರ್ಬಲಗೊಳಿಸಲಾಗಿದೆ. ಇದರಿಂದ ಲೋಕಾಯುಕ್ತ ಹಲ್ಲಿಲ್ಲದ ಹಾವಿನಂತಾಗಿದೆ' ಎಂದು ತಿಳಿಸಿದರು.
ಈಗಿನ ಪರಿಸ್ಥಿತಿಯಲ್ಲಿ ಎಡಿಜಿಪಿ ಅವರಿಗೆ ಈ ಮೊದಲು ಇದ್ದ ಪೊಲೀಸ್ ತನಿಖಾ ಅಧಿಕಾರ ಕಿತ್ತುಕೊಳ್ಳಲಾಗಿದೆ. ಇದರಿಂದಾಗಿ ಅವರೀಗ ಕೇವಲ ವಿಚಾರಣಾ ಅಧಿಕಾರಿಗಳಾಗಿದ್ದಾರೆ. ಲೋಕಾಯುಕ್ತ ಎಂಬುದು ಒಂದು ವಿಚಾರಣಾ ಆಯೋಗದಂತಾಗಿದೆ' ಎಂದರು. 'ಸರ್ಕಾರದ ಆದೇಶದ ಪ್ರಕಾರ ಲೋಕಾಯುಕ್ತ ಸ್ವತಂತ್ರ ತನಿಖೆ ನಡೆಸಬೇಕು. ಆದರೆ ಈಗ, ತನಿಖಾಧಿಕಾರಿ ವಿಚಾರಣೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕಿದೆ. ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ಮಾಡುವಂತಿಲ್ಲ. ಇದರಿಂದಾಗಿ ಭ್ರಷ್ಟಾಚಾರ ತಡೆ ಅಸಾಧ್ಯವಾಗಿದೆ. ಲೋಕಾಯುಕ್ತದ ಮೂಲ ಉದ್ದೇಶವೇ ಸೋತು ಹೋಗಿದೆ' ಎಂದು ವಿವರಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications