ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈಕೋರ್ಟ್ ಆದೇಶದಂತೆ ಎಸಿಬಿ ರದ್ದುಗೊಳಿಸಿದ ಕರ್ನಾಟಕ ಸರ್ಕಾರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 9: ಕರ್ನಾಟಕದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ಅನ್ವಯ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತಡೆ ಅಧಿನಿಯಮದಂತೆ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಸಂಪೂರ್ಣ ಅಧಿಕಾರವನ್ನು ಕೊಡಲಾಗಿದೆ.

ರಾಜ್ಯ ಸರ್ಕಾರವು ಎಸಿಬಿ ರದ್ದುಪಡಿಸುವುದರ ಬಗ್ಗೆ ಹೊರಡಿಸಿರುವ ಆದೇಶದಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ. ಸರ್ಕಾರದ ಆದೇಶ ಪ್ರತಿಯಲ್ಲಿ ಏನೆಲ್ಲಾ ಇದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳಿ.

ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಜ್ಜು!ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಜ್ಜು!

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಏನೆಲ್ಲಾ ಇದೆ?

ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಏನೆಲ್ಲಾ ಇದೆ?

* 2022ರ ಆಗಸ್ಟ್ 8ರಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವ ಆದೇಶವನ್ನು ಅನುಷ್ಠಾನಗೊಳಿಸಿದೆ.

* ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರವನ್ನು ರದ್ದುಗೊಳಿಸಿ, ಹೈಕೋರ್ಟ್ ಹೊರಡಿಸಿದ ಆದೇಶದ ತತ್ಪರಿಣಾಮವನ್ನು ಜಾರಿಗೊಳಿಸಲಾಗಿದೆ.

* ಹೈಕೋರ್ಟ್ ಆದೇಶದ ಅನ್ವಯ ಸರ್ಕಾರದ ಅಧಿಸೂಚನೆ ದಿನಾಂಕ 6.2.1991 ಮತ್ತು 8.5.2022 ಹಾಗೂ 5.12.2002ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ತಡೆ ಅಧಿನಿಯಮ 1988ರ ಉಪಬಂಧಗಳಡಿ ನೀಡಲಾಗಿದ್ದ ತನಿಖಾಧಿಕಾರವನ್ನು ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973ರ ಉಪಬಂಧ 2(ಎಸ್)ರನ್ವಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಪೊಲೀಸ್ ಠಾಣಾಧಿಕಾರವನ್ನು ನೀಡಿ ಆದೇಶಿಸಿದ್ದ ಸರ್ಕಾರದ ಅಧಿಸೂಚನೆಗಳನ್ನು ಪುನರುಜ್ಜೀವನಗೊಳಿಸಿ ಆದೇಶಿಸಿದೆ.

* ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿರುವುದರಿಂದ ಹಾಗೂ ದಿನಾಂಕ 19.3.2016, 30.03.2016 ಹಾಗೂ 21.04.2016ರ ಸರ್ಕಾರದ ಅಧಿಸೂಚನೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನೀಡಲಾಗಿದ್ದ ತನಿಖಾಧಿಕಾರ, ಪೊಲೀಸ್ ಠಾಣೆಗಳೆಂದು ಘೋಷಿಸಿ ರಾಜ್ಯವ್ಯಾಪಿ ಅಧಿಕಾರ ನೀಡಿರುವ ಆದೇಶಗಳನ್ನು ಹಿಂಪಡಿಯುವುದರಿಂದ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪ್ರಸ್ತುತ ಬಾಕಿಯಿರುವ ತನಿಖೆಗಳು, ವಿಚಾರಣೆಗಳು ಮತ್ತು ಇತರೆ ಶಿಸ್ತಿನ ಪ್ರಕರಣಗಳು ಹಾಗೂ ಖಾಸಗಿ ದೂರುದಾರರ ಪ್ರಕರಣಗಳನ್ನು ಸಂಪೂರ್ಣವಾಗಿ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸುವುದು.

ಖಡಕ್ ಅಧಿಕಾರಿಗಳಿಲ್ಲದೇ ಸೊರಗಿರುವ ಲೋಕಾಯುಕ್ತ?

ಖಡಕ್ ಅಧಿಕಾರಿಗಳಿಲ್ಲದೇ ಸೊರಗಿರುವ ಲೋಕಾಯುಕ್ತ?

ಎಸಿಬಿ ರಚನೆಯಾದ ಬಳಿಕ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಪೊಲೀಸ್ ಘಟಕವಿದ್ದರೂ ಕೇವಲ ದೂರುಗಳ ವಿಚಾರಣೆ ನಡೆಸಿ ವರದಿ ನೀಡಲು ಸೀಮಿತವಾಗಿತ್ತು. ಹೀಗಾಗಿ ಸಿಕ್ಕ ಸಿಕ್ಕ ಪೊಲೀಸ್ ಅಧಿಕಾರಿಗಳನ್ನು ಲೋಕಾಯುಕ್ತ ಸಂಸ್ಥೆಗೆ ವರ್ಗಾವಣೆ ಮಾಡಲಾಗಿತ್ತು. ಭ್ರಷ್ಟಾಚಾರ ಅರೋಪ ಇರುವ ಪೊಲೀಸ್ ಅಧಿಕಾರಿಗಳು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿದ್ದಾರೆ. ಇದೀಗ ಲೋಕಾಯುಕ್ತ ಪೊಲೀಸ್ ಘಟಕ ಸಮರ್ಥವಾಗಿ ಕೆಲಸ ಮಾಡಲು ಖಡಕ್ ಪೊಲೀಸ್ ಅಧಿಕಾರಿಗಳನ್ನು ನೇಮಿಸಿಕೊಳ್ಳುವ ಅನಿವಾರ್ಯತೆ ಲೋಕಾಯುಕ್ತಕ್ಕೆ ಎದುರಾಗಿದೆ. ಈ ನಿಟ್ಟಿನಲ್ಲಿ ಲೋಕಾಯುಕ್ತರು ಕಾರ್ಯ ಪ್ರವೃತ್ತರಾಗಬೇಕಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಖಡಕ್ ಪೊಲೀಸ್ ಅಧಿಕಾರಿಗಳನ್ನು ವಾಪಸು ಕರಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ.

ರಾಜ್ಯದಲ್ಲಿ ಎಸಿಬಿ ರಚನೆ ಹಿಂದಿನ ರಹಸ್ಯ

ರಾಜ್ಯದಲ್ಲಿ ಎಸಿಬಿ ರಚನೆ ಹಿಂದಿನ ರಹಸ್ಯ

ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದಾಖಲಾಗುವ ಪ್ರಕರಣ ತನಿಖೆಗೆ ಎಸಿಬಿಯನ್ನು ರಚನೆ ಮಾಡಿ 2016ರ ಮಾರ್ಚ್ 14ರಂದು ಅಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 2016ರ ಮಾರ್ಚ್ 19ರಂದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಅಪರಾಧ ದಾಖಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದು ಆದೇಶಿಸಲಾಗಿತ್ತು. ಈ ಆದೇಶಗಳನ್ನು ಪ್ರಶ್ನಿಸಿ 2016ರಲ್ಲಿ‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಎಸಿಬಿ, ಕರ್ನಾಟಕ ಪೊಲೀಸ್‌ ಕಾಯ್ದೆ-1963ಕ್ಕೆ ಅನುಗುಣವಾಗಿ ರಚನೆಯಾಗಿಲ್ಲ. ಪೊಲೀಸ್ ಠಾಣೆ ಸ್ಥಾನಮಾನ ನೀಡಲು ಈ ಕಾಯ್ದೆಯಡಿಯಲ್ಲೇ ಅಧಿಸೂಚನೆ ಹೊರಡಿಸಬೇಕು. ಆದರೆ ರಾಜಕೀಯ ಉದ್ದೇಶಗಳಿಂದ ಇದನ್ನು ರಚನೆ ಮಾಡಲಾಗಿದೆ. ಹಾಗೂ ಎಸಿಬಿಗೆ ಪೊಲೀಸ್ ಠಾಣೆಯ ಅಧಿಕಾರ ವ್ಯಾಪ್ತಿ ಇಲ್ಲ' ಎಂಬುದು ಅರ್ಜಿದಾರರ ಆಕ್ಷೇಪವಾಗಿತ್ತು.

ಲೋಕಾಯುಕ್ತ ಉಲ್ಲೇಖಿಸಿದ ವಾದವೇನು?

ಲೋಕಾಯುಕ್ತ ಉಲ್ಲೇಖಿಸಿದ ವಾದವೇನು?

ಲೋಕಾಯುಕ್ತ ಪರ ಹಿರಿಯ ವಕೀಲರು, ಎಸಿಬಿ ರಚನೆ ಮಾಡುವ ಮೂಲಕ ಸರ್ಕಾರ ಲೋಕಾಯುಕ್ತಕ್ಕೆ ನೀಡಿದ್ದ ಪೊಲೀಸ್‌ ತನಿಖಾಧಿಕಾರವನ್ನು ಕಿತ್ತುಕೊಂಡಿದೆ. ಲೋಕಾಯುಕ್ತದ ಅಧಿಕಾರಗಳನ್ನು ದುರ್ಬಲಗೊಳಿಸಲಾಗಿದೆ. ಇದರಿಂದ ‌ಲೋಕಾಯುಕ್ತ ಹಲ್ಲಿಲ್ಲದ ಹಾವಿನಂತಾಗಿದೆ' ಎಂದು ತಿಳಿಸಿದರು.

ಈಗಿನ ಪರಿಸ್ಥಿತಿಯಲ್ಲಿ ಎಡಿಜಿಪಿ ಅವರಿಗೆ ಈ ಮೊದಲು ಇದ್ದ ಪೊಲೀಸ್ ತನಿಖಾ ಅಧಿಕಾರ ಕಿತ್ತುಕೊಳ್ಳಲಾಗಿದೆ. ಇದರಿಂದಾಗಿ ಅವರೀಗ ಕೇವಲ ವಿಚಾರಣಾ ಅಧಿಕಾರಿಗಳಾಗಿದ್ದಾರೆ. ಲೋಕಾಯುಕ್ತ ಎಂಬುದು ಒಂದು ವಿಚಾರಣಾ ಆಯೋಗದಂತಾಗಿದೆ' ಎಂದರು. 'ಸರ್ಕಾರದ ಆದೇಶದ ಪ್ರಕಾರ ಲೋಕಾಯುಕ್ತ ಸ್ವತಂತ್ರ ತನಿಖೆ ನಡೆಸಬೇಕು. ಆದರೆ ಈಗ, ತನಿಖಾಧಿಕಾರಿ ವಿಚಾರಣೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕಿದೆ. ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ಮಾಡುವಂತಿಲ್ಲ. ಇದರಿಂದಾಗಿ ಭ್ರಷ್ಟಾಚಾರ ತಡೆ ಅಸಾಧ್ಯವಾಗಿದೆ. ಲೋಕಾಯುಕ್ತದ ಮೂಲ ಉದ್ದೇಶವೇ ಸೋತು ಹೋಗಿದೆ' ಎಂದು ವಿವರಿಸಿದರು.

English summary
Karnataka Govt abolishes Anti-Corruption Bureau(ACB) implements High court Order. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X