ಸಿದ್ದರಾಮಯ್ಯ ಘೋಷಿಸಿದ ಈ ಯೋಜನೆ ಮುಂದುವರೆಸಲಿದ್ದಾರೆ ಎಚ್ಡಿಕೆ
Recommended Video

ಬೆಂಗಳೂರು, ಜುಲೈ 03 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜುಲೈ 5ರಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಹಿಂದಿನ ಸಿದ್ದರಾಮಯ್ಯ ಸರ್ಕಾರದ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಮುಂದುವರೆಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಸೋಮವಾರ, 'ನನ್ನ ಸರ್ಕಾರ 2018ರಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಿದೆ' ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿಯಲ್ಲಿ ಮಂಡಿಸಿದ ಬಜೆಟ್‌ನಲ್ಲಿ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಘೋಷಣೆ ಮಾಡಿದ್ದರು. ಮಾರ್ಚ್‌ನಲ್ಲಿ ಯೋಜನೆಗೆ ಚಾಲನೆಯನ್ನು ನೀಡಿದ್ದರು. ಆದರೆ, ನಂತರ ನೀತಿ ಸಂಹಿತಿ ಬಂದು ಯೋಜನೆ ಅನುಷ್ಠಾನಕ್ಕೆ ಬಂದಿಲ್ಲ.

ಈಗ ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಘೋಷಣೆ ಮಾಡಿದ ಆರೋಗ್ಯ ಕರ್ನಾಟಕ ಯೋಜನೆಯನ್ನು ಅನಿಷ್ಠಾನಗೊಳಿಸುವ ಕುರಿತು ಘೋಷಣೆ ಮಾಡಲಿದ್ದಾರೆ.
ಎಲ್ಲಾ ಕುಟುಂಬಗಳಿಗೆ 1.5 ಲಕ್ಷದ ವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವ ಮಹತ್ವದ ಯೋಜನೆಯಾಗಿದೆ ಆರೋಗ್ಯ ಕರ್ನಾಟಕ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 1.5 ಲಕ್ಷದ ತನಕದ ಚಿಕಿತ್ಸೆ ಮತ್ತು 50 ಸಾವಿರ ರೂ.ಗಳ ತನಕ ಹೆಚ್ಚಿನ ಚಿಕಿತ್ಸೆ ಸಿಗಲಿದೆ.
ಈ ಯೋಜನೆಯಡಿ ಲಾಭ ಪಡೆಯಲು ಎಲ್ಲಾ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಆರೋಗ್ಯ ಸೇವೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬೇಕಾಗುತ್ತದೆ. ಆ ಸೌಲಭ್ಯಗಳು ಆಸ್ಪತ್ರೆಗಳಲ್ಲಿ ಲಭ್ಯವಿಲ್ಲದಿದ್ದರೆ ನೆಟ್‌ವರ್ಕ್‌ನಲ್ಲಿ ನೋಂದಣಿ ಆಗಿರುವ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತದೆ.
ಈ ಯೋಜನೆಯಡಿ ತಾಯಿ ಮತ್ತು ಮಕ್ಕಳ ಆರೋಗ್ಯ, ಜ್ವರ, ಕೆಮ್ಮು, ವಾಂತಿ ಇತ್ಯಾದಿ ಪ್ರಾಥಮಿಕ ಹಂತದ ಆರೋಗ್ಯ ಸೇವೆಗಳು ಲಭ್ಯವಿದೆ. ಹೆರಿಗೆ, ಡೆಂಗ್ಯೂ, ಮಲೇರಿಯಾ, ಮೂಳೆ ಮುರಿತ, ಸಾಮಾನ್ಯ ಶಸ್ತ್ರ ಚಿಕಿತ್ಸೆ ಸೇರಿ ವಿವಿಧ ಸೇವೆಗಳು ಸಿಗಲಿವೆ.
ಹೃದ್ರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆ ಇತ್ಯಾದಿ ತೃತೀಯ ಹಂತದ ಆರೋಗ್ಯ ಸೇವೆಗಳಿಗಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಲಭ್ಯವಿಲ್ಲದಿದ್ದರೆ ನೋಂದಾಯಿತ ನೆಟ್‌ವರ್ಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗುತ್ತದೆ.












Click it and Unblock the Notifications