ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ 31ರ ತನಕ ಬಂದ್ ವಿಸ್ತರಣೆ; ಏನಿರುತ್ತೆ ಎಂದು ತಿಳಿಯಿರಿ

|
Google Oneindia Kannada News

ಬೆಂಗಳೂರು, ಮಾರ್ಚ್ 18 : ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಸರ್ಕಾರ ಮಾರ್ಚ್ 14ರ ಆದೇಶವನ್ನು ಮಾರ್ಚ್ 31ರ ತನಕ ವಿಸ್ತರಣೆ ಮಾಡಲು ತೀರ್ಮಾನ ಕೈಗೊಂಡಿದೆ. ಕೊರೊನಾ ಹರಡದಂತೆ ತಡೆಯಲು ಜನರು ನೀಡುತ್ತಿರುವ ಸಹಕಾರಕ್ಕೆ ಸರ್ಕಾರ ಕೃತಜ್ಞತೆ ಸಲ್ಲಿಸಿದೆ.

ಬುಧವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಕೊರೊನಾ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಲಾಯಿತು. ಮುಂದಿನ ಕ್ರಮಗಳ ಬಗ್ಗೆ ರೂಪುರೇಷೆ ತಯಾರು ಮಾಡಲಾಯಿತು.

ಕೊರೊನಾ ಸೋಂಕಿನ ರೋಗಿಗಳಿಗೆ ನೀಡುವ ಆಹಾರಗಳೇನು? ಕೊರೊನಾ ಸೋಂಕಿನ ರೋಗಿಗಳಿಗೆ ನೀಡುವ ಆಹಾರಗಳೇನು?

ಸರ್ಕಾರ ಮಾರ್ಚ್ 14ರಿಂದ 21ರ ತನಕ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಚಿತ್ರಮಂದಿರ, ಪಬ್, ಮಾಲ್ ಬಂದ್ ಮಾಡುವಂತೆ ಆದೇಶ ನೀಡಿತ್ತು. ಕ್ರೀಡಾ ಚಟುವಟಿಕೆ, ಸೆಮಿನಾರ್, ವಿವಾಹ ಕಾರ್ಯಕ್ರಮ ನಡೆಸದಂತೆ ಸೂಚಿಸಲಾಗಿತ್ತು.

ಪಟ್ಟಣಗಳು ಖಾಲಿ ಖಾಲಿ.. ಯುವಕರನ್ನು ಹಳ್ಳಿಗೆ ಕರೆತಂದ ಕೊರೊನಾಪಟ್ಟಣಗಳು ಖಾಲಿ ಖಾಲಿ.. ಯುವಕರನ್ನು ಹಳ್ಳಿಗೆ ಕರೆತಂದ ಕೊರೊನಾ

ಸಚಿವ ಸಂಪುಟ ಸಭೆಯಲ್ಲಿ ಇದನ್ನು ಮಾರ್ಚ್ 31ರ ತನಕ ವಿಸ್ತರಣೆ ಮಾಡಲು ತೀರ್ಮಾನ ಕೈಗೊಳ್ಳಲಾಯಿತು. ಸಭೆಯ ಬಳಿಕ ವಿಧಾನಸಭೆಯಲ್ಲಿ ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿಕೆಯನ್ನು ನೀಡಿದರು.

ಕಲಬುರಗಿ ವೃದ್ಧನಿಗೆ ಕೊರೊನಾ ಬಂದಿದ್ದು ಹೇಗೆ? ಕಲಬುರಗಿ ವೃದ್ಧನಿಗೆ ಕೊರೊನಾ ಬಂದಿದ್ದು ಹೇಗೆ?

ಪಬ್, ಮಾಲ್‌ಗಳು ಬಂದ್

ಪಬ್, ಮಾಲ್‌ಗಳು ಬಂದ್

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಬ್, ನೈಟ್ ಕ್ಲಬ್, ಮಾಲ್‌ಗಳು ಮಾರ್ಚ್ 31ರ ತನಕ ಬಾಗಿಲು ಮುಚ್ಚಿರಲಿವೆ. ಒಂದು ಕಡೆ ಹೆಚ್ಚಿನ ಜನಸಂದಣಿ ಸೇರುವುದನ್ನು ತಡೆಯಲು ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಚಿತ್ರ ಪ್ರದರ್ಶನವಿಲ್ಲ

ಚಿತ್ರ ಪ್ರದರ್ಶನವಿಲ್ಲ

ಕರ್ನಾಟಕ ಸರ್ಕಾರದ ಆದೇಶದಂತೆ ಮಾರ್ಚ್ 31ರ ತನಕ ಚಿತ್ರಮಂದಿರಗಳು ಬಂದ್ ಆಗಿರಲಿವೆ. ಮಾಲ್‌ಗಳು ಮುಚ್ಚಿರುವುದರಿಂದ ಅದರಲ್ಲಿರುವ ಥಿಯೇಟರ್‌ಗಳು ಸಹ ಬಾಗಿಲು ತೆರೆಯುವುದಿಲ್ಲ. ಇದರಿಂದಾಗಿ ನಿರ್ಮಾಪಕರಿಗೆ ಭಾರಿ ನಷ್ಟ ಉಂಟಾಗಲಿದೆ.

ಮದುವೆ, ಸಮಾವೇಶವಿಲ್ಲ

ಮದುವೆ, ಸಮಾವೇಶವಿಲ್ಲ

ಸರ್ಕಾರದ ಹಿಂದಿನ ಮಾರ್ಗಸೂಚಿಯೇ ಒಂದು ವಾರಗಳ ಕಾಲ ಮುಂದುವರೆಯಲಿದೆ. ಮದುವೆ, ಸಮಾವೇಶ, ನಿಶ್ಚಿತಾರ್ಥ, ಸಂತೆ, ಜಾತ್ರೆ ಮುಂತಾದ ಕಾರ್ಯಕ್ರಮಗಳನ್ನು ಮಾರ್ಚ್ 31ರ ತನಕ ನಡೆಸುವಂತಿಲ್ಲ.

ಬೇಸಿಗೆ ಶಿಬಿರ, ವಸ್ತು ಪ್ರದರ್ಶನಗಳಿಲ್ಲ

ಬೇಸಿಗೆ ಶಿಬಿರ, ವಸ್ತು ಪ್ರದರ್ಶನಗಳಿಲ್ಲ

ಇದು ಬೇಸಿಗೆ ಕಾಲ ಶಾಲಾ ಮಕ್ಕಳಿಗೆ ರಜೆ ಇದೆ ಎಂದು ಬೇಸಿಗೆ ಶಿಬಿರಗಳನ್ನು ಆಯೋಜನೆ ಮಾಡುವಂತಿಲ್ಲ. ಯಾವುದೇ ವಸ್ತು ಪ್ರದರ್ಶನ, ಕೃಷಿ ಮೇಳ ಮುಂತಾದವುಗಳನ್ನು ನಡೆಸುವಂತಿಲ್ಲ, ಸಂಗೀತ ಗೋಷ್ಠಿಗಳು, ಕ್ರೀಡಾ ಚಟುವಟಿಕೆಗಳನ್ನು ಆಯೋಜನೆ ಮಾಡುವಂತಿಲ್ಲ.

English summary
Due to coronavirus scare Karnataka government on March 18, 2020, decided to extend the order of shut down of malls, theater, all educational institutes and commercial establishments for a week. Order will in effect till March 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X