ಕರ್ನಾಟಕ ಹಡಪದ ಅಭಿವೃದ್ದಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಹಡಪದ ಸಮುದಾಯಕ್ಕೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ನೀಡುವುದಾಗಿ ಈ ಆದೇಶದಲ್ಲಿ ತಿಳಿಸಲಾಗಿದೆ.

ಬೆಂಗಳೂರು,ಫೆಬ್ರವರಿ21: ಹಡಪದ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಹಡಪದ ಅಭಿವೃದ್ದಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಹಡಪದ ಸಮುದಾಯಕ್ಕೆ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯನ್ನು ನೀಡುವುದಾಗಿ ಈ ಆದೇಶದಲ್ಲಿ ತಿಳಿಸಲಾಗಿದೆ.

ಇನ್ನೂ ಹಡಪದ ಸರ್ವತೋಮುಖ ಅಭಿವೃದ್ದಿಗಾಗಿ ಕರ್ನಾಟಕ ಹಡಪದ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಹಡಪದ ಸಮುದಾಯದ ಮುಖಂಡರು ಸೋಮವಾರ ವಿಧಾನಸೌಧದಲ್ಲಿ ಭೇಟಿ ಮಾಡಿ ಹೂಗುಚ್ಚ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

Karnataka Govt Ordered to Set up Hadapada Development Corporation

ಇನ್ನೂ ವೇಳೆ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಮತ್ತಿತರ ಮುಖಂಡರು ಭಾಗಿಯಾಗಿದ್ದರು.

ಹಡಪದ ಅಭಿವೃದ್ದಿ ನಿಗಮ‌ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಹಡಪದ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಜರಿದ್ದರು

ಶ್ರೀನಾರಾಯಣಗುರು ಹಾಗೂ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ

ಗಾಣಿಗ ಅಭಿವೃದ್ಧಿನಿಗಮ ಹಾಗೂ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಂದು ಹೊಸ ನಿಗಮವನ್ನು ಸ್ಥಾಪಿಸಲು ಹಾಗೂ ಈಡಿಗ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಲಾಗಿದೆ.

Karnataka Govt Ordered to Set up Hadapada Development Corporation

ಬಿಲ್ಲವ ಹಾಗೂ ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ ಹಾಗೂ ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಫೋಸ್ಟ್ ಮಾಡಿದ್ದಾರೆ.

ಇನ್ನೂ ರಾಜ್ಯದ ಹಿಂದುಳಿದ ಜಾತಿಗಳ ಪೈಕಿ‌ ಒಂದಾಗಿರುವ ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿ ಹಾಗೂ ಬ್ರಹ್ಮರ್ಷಿ ನಾರಾಯಣ ಗುರುಗಳ ತತ್ವಾದರ್ಶಗಳ ಪ್ರಸಾರಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ಬಹುಕಾಲದ ಬೇಡಿಕೆಯಾಗಿದ್ದು, ಈ ಸಮುದಾಯದ ಅಭಿವೃದ್ದಿಗೆ ಕೆಲ ದಿನಗಳ ಹಿಂದೆಯಷ್ಟೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಬೇಡಿಕೆ ಸಲ್ಲಿಸಿದ್ದು, ಸೋಮವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸುನೀಲ್ ಕುಮಾರ್ ಅಭಿನಂಧನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+