ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಕಲ ಸರ್ಕಾರಿ ಗೌರವಗಳೊಂದಿಗೆ ದೊರೆಸ್ವಾಮಿ ಅಂತ್ಯಕ್ರಿಯೆ ನಡೆಸಲು ಸರ್ಕಾರದ ಆದೇಶ

|
Google Oneindia Kannada News

ಬೆಂಗಳೂರು, ಮೇ 26: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಎಚ್.ಎಸ್. ದೊರೆಸ್ವಾಮಿಯವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ದೊರೆಸ್ವಾಮಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶಿಸಿದೆ.

ವ್ಯಕ್ತಿಚಿತ್ರ: ದಶಕಗಳ ಕಾಲ ರಾಜ್ಯದ ಹೋರಾಟಗಳಿಗೆ ಧ್ವನಿಯಾಗಿದ್ದ ಎಚ್‌ಎಸ್ ದೊರೆಸ್ವಾಮಿವ್ಯಕ್ತಿಚಿತ್ರ: ದಶಕಗಳ ಕಾಲ ರಾಜ್ಯದ ಹೋರಾಟಗಳಿಗೆ ಧ್ವನಿಯಾಗಿದ್ದ ಎಚ್‌ಎಸ್ ದೊರೆಸ್ವಾಮಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರು ಬುಧವಾರ ಮಧ್ಯಾಹ್ನ ನಿಧನರಾಗಿದ್ದಾರೆ. ದೊರೆಸ್ವಾಮಿಯವರ ನಿಧನಕ್ಕೆ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಆದೇಶಿಸಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Karnataka Govt Orders Funeral Of Freedom Fighter HS Doreswamy With All Government Honors

ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಪೊಲೀಸ್ ಆಯುಕ್ತರು ಹಾಗೂ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಗಳಿಗೆ ಈ ಆದೇಶ ನೀಡಲಾಗಿದೆ.

Recommended Video

ಕೊರೊನದಿಂದ ಚೇತರಿಸಿಕೊಂಡರು ಉಳಿಯಲಿಲ್ಲ ಜೀವ | Oneindia Kannada

104 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಈಚೆಗಷ್ಟೆ ಅವರು ಕೊರೊನಾದಿಂದ ಗುಣಮುಖರಾಗಿದ್ದರು. ಆನಂತರ ಅವರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

English summary
Karnataka govt orders funeral of freedom fighter HS Doreswamy with all government honors with limited police staff
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X