ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ ಮಂಜೂರು ಮಾಡಿ ಸರ್ಕಾರ ಆದೇಶ: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಡಿಸೆಂಬರ್ 05: ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ವೇಳೆ ಮೃತಪಟ್ಟ ಕರ್ನಾಟಕದ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ ಪರಿಹಾರ ಧನ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬಂದಾಗ ಅವರಿಗೆ ನಮನ ಸಲ್ಲಿಸಿದ ಸಂದರ್ಭದಲ್ಲಿ 50 ಲಕ್ಷ ರಾಜ್ಯ ಸರ್ಕಾರದ ಪರಿಹಾರ ಧನ ಘೋಷಣೆಯನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದರು. ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಿದ್ದರಾಮಯ್ಯ ಅವರು, ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ. ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ನಾಳೆ ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಾವಾಗ ಪರಿಹಾರ ನೀಡುತ್ತೇವೆ ಅಂತಾ ಘೋಷಿಸಿದ್ವಿ?
ಹುತಾತ್ಮ ಯೋಧರ ಕುಟುಂಬಕ್ಕೆ ಅಗೌರವ ತೋರಿಸುವ ಈ ನಿಮ್ಮ ಉಡಾಫೆಯ ಮಾತುಗಳು ನಿಜಕ್ಕೂ ಖಂಡನಾರ್ಹ. ಕೂಡಲೇ ನಾಡಿನ ಜನತೆಯ ಕ್ಷಮೆ ಯಾಚಿಸಿ, ಅವರ ಕುಟುಂಬಕ್ಕೆ ಸಿಗಬೇಕಾದ ಪರಿಹಾರ ಒದಗಿಸಲು ಶೀಘ್ರಕ್ರಮ ಕೈಗೊಳ್ಳುವಂತೆ ನಾನು ಆಗ್ರಹಿಸುತ್ತೇನೆ ಎಂದು ಟ್ವೀಟ್ ಮೂಲಕ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದರು. ಹುತಾತ್ಮ ಯೋಧರ ಕುಟುಂಬಗಳಿಗೆ ನೀಡುವ ಪರಿಹಾರ, ಸರಕಾರದ ವತಿಯಿಂದ ಸಿಗಲೇಬೇಕಾಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಯಾವುದೇ ವಿಳಂಬ ಮಾಡದಂತೆ ನಾನು ರಾಜ್ಯ ಸರ್ಕಾರಕ್ಕೆ ವಿನಂತಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದರು.












Click it and Unblock the Notifications