ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾದರಾಯನಪುರ ಘಟನೆ ಎಫೆಕ್ಟ್: ರಾಜ್ಯದಲ್ಲಿಯೂ ಸುಗ್ರಿವಾಜ್ಞೆ ಜಾರಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 22: ಕೊರೊನಾ ಮಹಾಮಾರಿ ತಡೆಗಟ್ಟಲು ವಿವಿಧ ರೀತಿಯಲ್ಲಿ ಹೆಣಗಾಡುತ್ತಿರುವ ರಾಜ್ಯ ಸರ್ಕಾರ ಈಗ ಸುಗ್ರಿವಾಜ್ಞೆಯ ಮೊರೆ ಹೋಗಿದೆ. ಪಾದರಾಯನಪುರ ಘಟನೆ ನಂತರ ಎಚ್ಚೆತ್ತಿರುವ ಸರ್ಕಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.

Recommended Video

ಈ ಪುಟ್ಟ ಹುಡುಗಿಗೆ ಕೊರೊನಾ ಬಗ್ಗೆ ಎಷ್ಟು ತಿಳುವಳಿಕೆ ಇದೆ ನೋಡಿ | Little Speaks About Corona

ಜನರು ಲಾಕ್ ಡೌನ್ ನಿಯಮ ಮುರಿದರೆ, ಆರೋಗ್ಯ ಸಂಬಂಧಿ ಸೇವೆಯಲ್ಲಿರುವ, ಸರ್ಕಾರಿ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಯನ್ನುಂಟು ಮಾಡಿದರೆ ಶಿಕ್ಷೆ ವಿಧಿಸುವ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಇಂದು ಜಾರಿಗೊಳಿಸಿದೆ. ರಾಜ್ಯಪತ್ರದಲ್ಲಿ (ಗೆಜೆಟ್ ನೋಟಿಪಿಕೇಶನ್) ಈ ಬಗ್ಗೆ ವಿವರಣೆ ನೀಡಲಾಗಿದೆ.

ವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರುವಾವ್! ಕ್ವಾರಂಟೈನ್ ಕೇಂದ್ರದಲ್ಲಿ ಸುಮ್ಮನೆ ಕೂರಲಿಲ್ಲ ಈ ಕಾರ್ಮಿಕರು

ಕೊರೊನಾ ವೈರಸ್ ಸಾಂಕ್ರಾಮಿಕ ರೋಗವಾಗಿದ್ದು ಸೋಂಕು ಹರಡದಂತೆ ತಡೆಯಲು ಸುಗ್ರೀವಾಜ್ಞೆ ಹೊರಡಿಸಲಾಗಿದೆ. ಈ ಪ್ರಕಾರ, ಲಾಕ್‌ಡೌನ್ ನಿಯಮಾವಳಿ ಉಲ್ಲಂಘನೆ ಹಾಗೂ ಆರೋಗ್ಯ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಹಲ್ಲೆ ಮಾಡುವುದು ಮಾಡಿದರೆ 3 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ.ಗಳ ವರೆಗೆ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ಸುಗ್ರಿವಾಜ್ಞೆ ತಿಳಿಸುತ್ತದೆ.

Karnataka Government Imposes Ordinance Against Who Violation The Lockdown Rules

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಇಂದು ಕೊರೊನಾ ವಾರಿಯರ್ಸ್ ರಕ್ಷಣೆಗಾಗಿ ಸುಗ್ರಿವಾಜ್ಞೆಯನ್ನು ಜಾರಿ ಮಾಡಿದೆ. ಎರಡು ಲಕ್ಷದವರೆಗೆ ದಂಡ ಹಾಗೂ ಏಳು ವರ್ಷದವರೆಗೆ ಕಾರಾಗೃಹ ವಾಸವನ್ನು ಕೇಂದ್ರ ಸರ್ಕಾರದ ಸುಗ್ರಿವಾಜ್ಞೆ ವಿಧಿಸುತ್ತದೆ. ಇನ್ನುಂದೆ ಲಾಕ್‌ಡೌನ್ ನಿಯಮ ಉಲ್ಲಂಘಿಸುವವರು, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸುವವರು ಇನ್ಮುಂದೆ ಬಹಳ ಎಚ್ಚರದಿಂದ ಇರಬೇಕಾಗುತ್ತದೆ.

English summary
Karnataka Government Imposes Ordinance Against Who Violation The Lockdown Rules. Governor sign it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X