Farmers Protest: ಕಬ್ಬು ಬೆಳೆಗಾರರಿಗೆ ₹500 ಸಹಾಯಧನ, ಟನ್ ಕಬ್ಬಿಗೆ ₹3,500 ದರ ನಿಗದಿಗೆ ಒತ್ತಾಯ
ಬೆಂಗಳೂರು, ನವೆಂಬರ್ 06: ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಬದುಕಿನೊಂದಿಗೆ ಆಟವಾಡುತ್ತಿದೆ. ಇದೇ ರೀತಿಯ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳುತ್ತದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ರಾಜ್ಯ ಸರ್ಕಾರ ನೆರವಿನ ಹಸ್ತ ಚಾಚಿದ್ದರೆ ರೈತರು ಬೀದಿಯಲ್ಲಿ ದಿನ ಕಳೆಯುವ ದುಸ್ಥಿತಿ ಬರುತ್ತಿರಲಿಲ್ಲ ಎಂದಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು, ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿದ್ದಾರೆ.
ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಎಂಟು ದಿನಗಳಿಂದ ಕಬ್ಬು ಬೆಳೆಗಾರರು ನ್ಯಾಯಯುತ ಬೆಲೆಯ ಬೇಡಿಕೆಯಿಂದ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಚಳವಳಿ ರಾಜ್ಯದ ಇತರ ಭಾಗಗಳಿಗೂ ಹರಡುತ್ತಿದೆ. ಅನೇಕ ಮಠಾಧೀಶರು ಸಹ ಬೆಂಬಲ ಸೂಚಿಸಿದ್ದಾರೆ. ಆದರೂ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಇಲ್ಲದಿರುವುದು ವಿಷಾದನೀಯ ಎಂದು ಅವರು ಆಕ್ರೋಶ ಹೊರ ಹಾಕಿದರು.

ಸರ್ಕಾರ ರೈತರನ್ನು ಬೀದಿಗೆ ಕೂರಿಸಿದೆ. ಕಾರ್ಖಾನೆ ಮಾಲೀಕರ ಜೊತೆ ಮಾತುಕತೆ ನಡೆಸುತ್ತಿರುವ ನಾಟಕ ಆಡುತ್ತಿದೆ. ಬೆಳೆಗಾರರು ಮತ್ತು ಕಾರ್ಖಾನೆ ಮಾಲೀಕರ ಜೊತೆ ಮುಂಚಿತ ಸಮಾಲೋಚನೆ ಮಾಡಿ ಬೆಲೆ ನಿಗದಿ ಮಾಡಬೇಕಿತ್ತು. ಪ್ರತಿ ಟನ್‌ಗೆ ₹500 ಸಹಾಯಧನ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಅಶೋಕ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಕಬ್ಬು ಮತ್ತು ಅದರ ಉಪ ಉತ್ಪನ್ನಗಳಿಂದ ಸರ್ಕಾರಕ್ಕೆ ದೊಡ್ಡ ಆದಾಯ ಬರುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆರೋಪ ಮಾಡುವ ಕೀಳು ರಾಜಕಾರಣದ ಮಟ್ಟಕ್ಕೆ ಇಳಿದಿದ್ದಾರೆ. ಎಫ್‌ಆರ್‌ಪಿ, ರಿಕವರಿ ಆಧರಿತ ದರ, ಸಾಗಾಟ ವೆಚ್ಚ ಮೊದಲಾದ ವಿಷಯಗಳನ್ನು ತಿಳಿಸಿ ಜನರನ್ನು ತಪ್ಪು ದಾರಿಯಲ್ಲಿ ನಡೆಸುವ ಪ್ರಯತ್ನ ನಡೆದಿದೆ ಎಂದು ಟೀಕಿಸಿದರು.
ರೈತರ ಆತ್ಮಹತ್ಯೆ, ಸರ್ಕಾರದ ನಿರ್ಲಕ್ಷ್ಯ
ಅಧಿಕಾರಕ್ಕೆ ಬಂದ ದಿನದಿಂದ ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ನಿಲುವು ತಾಳಿದೆ. ಇದರಿಂದ 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಸಾವಿನ ಸಮಾಧಿ ಮೇಲೆ ಇವರು ಅಧಿಕಾರದ ಮೋಜು ಮಾಡುತ್ತಿದ್ದಾರೆ. ಇಂತಹ ಜನವಿರೋಧಿ ಸರ್ಕಾರವನ್ನು ಕರ್ನಾಟಕದ ಜನತೆ ಹಿಂದೆಂದೂ ಕಂಡಿಲ್ಲ ಎಂದು ಆರೋಪಿಸಿದರು.

ಮಹಾರಾಷ್ಟ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿ ಟನ್ ಕಬ್ಬಿಗೆ ₹3,500 ದರ ನಿಗದಿ ಮಾಡಿ ತಕ್ಷಣ ಪಾವತಿ ಮಾಡಲಾಗುತ್ತಿದೆ. ಅಲ್ಲಿ ಸಾಧ್ಯವಾಗುತ್ತಿದ್ದರೆ ಇಲ್ಲಿ ಸಾಧ್ಯವಿಲ್ಲವೇ? ಈ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇದಿದ್ದರೆ, ಹೋರಾಟ ಶುರುವಾಗುವ ಮೊದಲು ಕ್ರಮ ಕೈಗೊಳ್ಳಬೇಕಿತ್ತು ಎಂದರು.
ಕೇಂದ್ರದತ್ತ ಬೆಟ್ಟು ಮಾಡುವ ಸರ್ಕಾರ
ಕೇಂದ್ರ ಸರ್ಕಾರ ಎಫ್‌ಆರ್‌ಪಿ ನಿಗದಿ ಮಾಡುತ್ತದೆ ಎಂದು ಹೇಳಿ ಸಿದ್ದರಾಮಯ್ಯ ಹೊಣೆ ತಪ್ಪಿಸುತ್ತಿದ್ದಾರೆ. ಆದರೆ ಉಪ ಉತ್ಪನ್ನಗಳ ವಹಿವಾಟಿನಲ್ಲಿ ರೈತರಿಗೆ ಪಾಲು ಕೊಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೇ ಇದೆ. ಆದರೆ ಅವರು ಸತ್ಯವನ್ನು ಮರೆಮಾಚಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಬೆಳೆಗಾರರಿಗೆ ನ್ಯಾಯಯುತ ದರ ಕೊಡಿಸುವ ಕೆಲಸ ಮಾಡಿದ್ದವು. "ಸಿದ್ದರಾಮಯ್ಯ ಸರ್ಕಾರ ಈಗಾದರೂ ರೈತ ಪರ ನೀತಿ ಅನುಸರಿಸಲಿ, ಕಾರ್ಖಾನೆಗಳ ಜೊತೆಗೆ ಸರ್ಕಾರವೂ ಕೊಂಚ ಹಣ ನೀಡಿ ಬೆಳೆಗಾರರ ನೆರವಿಗೆ ಬರಲಿ," ಎಂದು ಆಗ್ರಹಿಸಿದರು.
ನ್ಯಾಯಯುತ ದರ, ಪಾವತಿಗೆ ಒತ್ತಾಯ
ಪ್ರತಿ ಟನ್ ಕಬ್ಬಿಗೆ ₹3,500 ಪಾವತಿಸಬೇಕು. ತೂಕದಲ್ಲಿ ಮೋಸ ತಪ್ಪಿಸಲು ತಕ್ಷಣ ಪೇಮೆಂಟ್ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. 11 ಕಡೆ ತೂಕದ ಯಂತ್ರ ಅಳವಡಿಸುವ ಬದಲು ಮೊದಲು ಅವು ಸ್ಥಾಪಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications