ಮಾನಸಿಕ ಒತ್ತಡದಲ್ಲಿದ್ದ ಗ್ರೇಡ್-2 ತಹಶೀಲ್ದಾರ್‌ಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್

ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರೇಡ್-2 ತಹಶೀಲ್ದಾರ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ ನ್ಯೂಸ್ ನೀಡಿದೆ. ಇವರಿಗೆ ಹುದ್ದೆಯಲ್ಲಿ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆಯನ್ನು ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಡೇರಿಸಿದೆ.

ಕಂದಾಯ ಸಚಿವರು ಆದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಗ್ರೇಡ್-2 ತಹಶೀಲ್ದಾರ್ ವಿಚಾರದಲ್ಲಿ ಕೈಗೊಂಡ ನಿರ್ಧಾರ ಕೇವಲ ಆಡಳಿತಾತ್ಮಕ ಮೈಲುಗಲ್ಲಷ್ಟೇ ಅಲ್ಲ. ಬದಲಿಗೆ ನ್ಯಾಯಬದ್ಧ, ಪಾರದರ್ಶಕ ಹಾಗೂ ಸಮಯೋಚಿತ ನಿರ್ಧಾರಗಳ ಮೂಲಕ ಆಡಳಿತ ಯಂತ್ರವನ್ನು ಬಲಪಡಿಸುವ ಸರ್ಕಾರದ ದೃಢ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಬಣ್ಣಿಸಿದ್ದಾರೆ.

Grade-2 Tahsildars

ಗ್ರೇಡ್-2 ತಹಶೀಲ್ದಾರ್ ಅಧಿಕಾರಿಗಳಿಗೆ ಸಿಹಿ ಸುದ್ದಿ

ರಾಜ್ಯದಲ್ಲಿ ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ರಾಜ್ಯ ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಇದೀಗ ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಿದೆ. ಈ ಮೂಲಕ ಕಂದಾಯ ಅಧಿಕಾರಿಗಳ ದೀರ್ಘಕಾಲದ ಕಾಯುವಿಕೆಗೆ ಅಂತ್ಯವಾಗಿದೆ ಎಂದು ಹೇಳಿದರು.

ನಾಡಪ್ರಭು ಕೆಂಪೇಗೌಡರ ಜಯಂತಿಗೆ ಸರ್ಕಾರಿ ರಜೆ? ಡಿಕೆಶಿ ಮುಂದೆ ಹೊಸ ಬೇಡಿಕೆ!
ನಾಡಪ್ರಭು ಕೆಂಪೇಗೌಡರ ಜಯಂತಿಗೆ ಸರ್ಕಾರಿ ರಜೆ? ಡಿಕೆಶಿ ಮುಂದೆ ಹೊಸ ಬೇಡಿಕೆ!

232 ಅಧಿಕಾರಿಗಳಿಗೆ ಗ್ರೇಡ್ 1ಗೆ ಬಡ್ತಿ

ರಾಜ್ಯದಲ್ಲಿ ಕಳೆದ 5 ವರ್ಷಗಳಿಗೂ ಹೆಚ್ಚು ಕಾಲದಿಂದ ನಮ್ಮ ಅನೇಕ ಸಮರ್ಥ ಹಾಗೂ ಪ್ರತಿಭಾವಂತ ಅಧಿಕಾರಿಗಳು, ತಮ್ಮ ಕಠಿಣ ಶ್ರಮ ಮತ್ತು ಸೇವಾ ನಿಷ್ಠೆಯ ಹೊರತಾಗಿಯೂ ವೃತ್ತಿಜೀವನದಲ್ಲಿ ಪ್ರಗತಿ ಕಾಣದೆ ಮಾನಸಿಕ ಒತ್ತಡಕ್ಕೆ ಸಿಲುಕಿದ್ದರು. ಇದೀಗ ಒಟ್ಟು 232 ಗ್ರೇಡ್-2 ತಹಶೀಲ್ದಾರ್‌ಗಳಿಗೆ ಗ್ರೇಡ್-1 ಹುದ್ದೆಗೆ ಬಡ್ತಿ ಕೊಟ್ಟಿದ್ದೇವೆ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಮೂಲಕ, "ಸರ್ಕಾರವು ಅರ್ಹತೆ, ಬದ್ಧತೆ ಮತ್ತು ಪ್ರಾಮಾಣಿಕತೆಯನ್ನು ಸದಾ ಗುರುತಿಸಿ ಪ್ರೋತ್ಸಾಹಿಸುತ್ತದೆ" ಎಂಬ ವಿಶ್ವಾಸವನ್ನು ನೌಕರ ವರ್ಗದಲ್ಲಿ ಮೂಡಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಬಲಿಷ್ಠ ಮತ್ತು ಸ್ಫೂರ್ತಿದಾಯಕ ಆಡಳಿತ ಯಂತ್ರವೇ ಪರಿಣಾಮಕಾರಿ ಆಡಳಿತದ ಬುನಾದಿ. ಕಂದಾಯ ಇಲಾಖೆಯು ಪ್ರತಿಯೊಬ್ಬ ನಾಗರಿಕನಿಗೂ ಪಾರದರ್ಶಕ, ಉತ್ತರದಾಯಿ ಹಾಗೂ ಕಾಳಜಿಯುಕ್ತ ಸೇವೆಯನ್ನು ಒದಗಿಸಬೇಕೆಂಬ ರಾಜ್ಯ ಸರ್ಕಾರದ ಸಂಕಲ್ಪದ ಭಾಗವೇ ಈ ಮಹತ್ವದ ನಿರ್ಧಾರವಾಗಿದೆ. ಈ ಕಾರ್ಯವನ್ನು ಸುಗಮವಾಗಿ ಸಾಕಾರಗೊಳಿಸಿದ ಎಲ್ಲಾ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ನಿರಂತರ ಪ್ರಯತ್ನಗಳಿಗೆ ಅವರು ಕೃತಜ್ಞತೆ ತಿಳಿಸಿದ್ದಾರೆ.

ದಕ್ಷ ಆಡಳಿತ ನೀಡಲು ಬದ್ಧ

ದೀರ್ಘಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಅವರೆಲ್ಲರ ಶ್ರಮ ಮತ್ತು ಸಹಕಾರವು ಮುಂಬರುವ ದಿನಗಳಲ್ಲಿ ಇಂತಹ ಮತ್ತಷ್ಟು ನಿರ್ಧಾರಗಳನ್ನು ಕೈಗೊಳ್ಳಲು ನಮಗೆ ಸ್ಫೂರ್ತಿದಾಯಕವಾಗಿದೆ. ವರ್ಷಗಳ ನಿರಂತರ ಪರಿಶ್ರಮ ಮತ್ತು ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿ ಇದೀಗ ಬಡ್ತಿ ಪಡೆದಿರುವ ಪ್ರತಿಯೊಬ್ಬ ಅಧಿಕಾರಿಗೂ ನನ್ನ ಆತ್ಮೀಯ ಅಭಿನಂದನೆಗಳು. ಈ ಬಡ್ತಿಯು ತರುವ ಹೆಚ್ಚಿನ ಜವಾಬ್ದಾರಿಯೊಂದಿಗೆ, ನಾಡಿನ ಜನತೆಗೆ ಇನ್ನಷ್ಟು ದಕ್ಷತೆ, ಕಾಳಜಿ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುವ ಅವಕಾಶವನ್ನು ನೀವು ಸದುಪಯೋಗಪಡಿಸಿಕೊಳ್ಳುತ್ತೀರಿ ಎಂಬ ಸಂಪೂರ್ಣ ವಿಶ್ವಾಸ ನನಗಿದೆ.

ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ: ಬದಲಾಗುತ್ತಾ ನಗರದ ಚಿತ್ರಣ?
ರಸ್ತೆ ಗುಂಡಿ ಮುಚ್ಚೋದು ರಾಕೆಟ್ ಸೈನ್ಸಾ? ಜಿಬಿಎ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ತರಾಟೆ: ಬದಲಾಗುತ್ತಾ ನಗರದ ಚಿತ್ರಣ?

ಕಂದಾಯ ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯ ಗಮನಕ್ಕೆ ನಾನು ತರಬಯಸುವ ಪ್ರಮುಖ ವಿಚಾರವೆಂದರೆ - ಸರ್ಕಾರವು ನಿಮ್ಮ ಸೇವಾ ಬದ್ಧತೆಯನ್ನು ಗುರುತಿಸುತ್ತದೆ, ನಿಮ್ಮ ಕಳಕಳಿಯನ್ನು ಆಲಿಸುತ್ತದೆ ಹಾಗೂ ನಿಮ್ಮ ಆಕಾಂಕ್ಷೆಗಳನ್ನು ಸಹ ಪರಿಗಣಿಸುತ್ತದೆ. ಸ್ವಯಂಸ್ಫೂರ್ತಿಯಿಂದ ಕಾರ್ಯನಿರ್ವಹಿಸುವ ಅಧಿಕಾರಿ ವರ್ಗವು ಯಾವುದೇ ಸರ್ಕಾರಕ್ಕೆ ಅತಿ ದೊಡ್ಡ ಆಸ್ತಿ ಎಂದರು.

ಕಂದಾಯ ಇಲಾಖೆಯು ಮುಂಬರುವ ದಿನಗಳಲ್ಲಿ ಮತ್ತಷ್ಟು ವೇಗ, ಪಾರದರ್ಶಕತೆ ಮತ್ತು ಜವಾಬ್ದಾರಿಯುತವಾಗಿ ಸೇವೆ ಒದಗಿಸುವ 'ಜನಕೇಂದ್ರಿತ' ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂದು ಅವರು ಭರವಸೆ ನೀಡಿದರು.

ಕಾಂದಾಯ ಇಲಾಖೆಯ ಅಧಿಕಾರಿ ವರ್ಗದ ಸಬಲೀಕರಣದ ಮೂಲಕ ಪ್ರತಿಯೊಬ್ಬ ನಾಗರಿಕನ ಅಗತ್ಯಗಳಿಗೂ ಸ್ಪಂದಿಸುವ ಸರ್ಕಾರದ ಕಾರ್ಯವಿಧಾನವನ್ನು ಇನ್ನಷ್ಟು ಪರಿಣಾಮಕಾರಿ ಆಗಿಸಲಿದ್ದೇವೆ. ಅಧಿಕಾರಿಗಳಲ್ಲಿ ವಿಶ್ವಾಸ ಹಾಗೂ ಜನಸಾಮಾನ್ಯರಲ್ಲಿ ಭರವಸೆ ಮೂಡಿಸುವ ಅತ್ಯುತ್ತಮ ಕಂದಾಯ ಆಡಳಿತವನ್ನು ನಾವೆಲ್ಲರೂ ಒಟ್ಟಾಗಿ ನಿರ್ಮಿಸೋಣ. ಉತ್ತರದಾಯಿ, ಪಾರದರ್ಶಕ, ಸಂವೇದನಾಶೀಲ ಮತ್ತು ಸರ್ವರಿಗೂ ಸುಲಭವಾಗಿ ಲಭ್ಯವಾಗುವ ಸೇವಾ ಮಾದರಿಯ ಮೂಲಕ 'ನವ ಕರ್ನಾಟಕ'ವನ್ನು ಕಟ್ಟೋಣ ಎಂದು ಅವರು ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+