ತಂಬಾಕು ಉತ್ಪನ್ನಗಳನ್ನು ಖರೀದಿಸುವ ವಯಸ್ಸ ಹೆಚ್ಚಳ: ಕರ್ನಾಟಕ ಸರ್ಕಾರ ಆದೇಶ

ಬೆಂಗಳೂರು, ಮೇ 31: ವಿಶ್ವ ತಂಬಾಕು ರಹಿತ ದಿನದಂದು ಸಾರ್ವಜನಿಕ ಆರೋಗ್ಯ ರಕ್ಷಣೆಯತ್ತ ಕರ್ನಾಟಕ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಮುಖ ಬದಲಾವಣೆಗಳಲ್ಲಿ, ಕರ್ನಾಟಕದಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳನ್ನು ಖರೀದಿಸುವ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಗೆ 200 ರೂ. ಇದ್ದ ದಂಡವನ್ನು 1000 ರೂಪಾಯಿ ವರೆಗೆ ಹೆಚ್ಚಿಸಲಾಗಿದೆ. 21 ವರ್ಷದ ಒಳಗಿನವರು ತಂಬಾಕು ಪದಾರ್ಥಗಳನ್ನ ಮಾರಾಟ ಮಾಡದಂತೆ ನಿಷೇಧ ಹೇರಲಾಗಿದೆ. ಉಪಹಾರ ಗೃಹ, ಪಬ್, ಬಾರ್, ರೇಸ್ಟೋರೆಂಟ್ ಗಳಲ್ಲಿ ಹುಕ್ಕಾ ಬ್ಯಾನ್ ಮಾಡಲಾಗಿದ್ದು, ಹುಕ್ಕಾ ಬಾರ್ ವಿರುದ್ಧ ಕನಿಷ್ಠ 50 ಸಾವಿರದಿಂದ 1 ಲಕ್ಷ ದಂಡ, ಮೂರು ವರ್ಷ ಜೈಲು ಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

Karnataka Govt Raises Minimum Age To Buy Tobacco Products To 21

ವಿಶ್ವ ತಂಬಾಕು ರಹಿತ ದಿನದಂದು 'ಸಾರ್ವಜನಿಕ ಆರೋಗ್ಯ' ರಕ್ಷಣೆಯತ್ತ ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ. COTPA ಕಾಯ್ದೆಗೆ ತಿದ್ದುಪಡಿ ತಂದು ಹೊಗೆ ರಹಿತ ತಂಬಾಕು ಪದಾರ್ಥಗಳಿಗೆ ಕಡಿವಾಣ ಹಾಕುವುದರೊಂದಿಗೆ ಹುಕ್ಕಾ ಬ್ಯಾನ್ ಮಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕ್ರಮಕ್ಕೆ ಇದೀಗ ರಾಷ್ಟ್ರಪತಿಗಳಿಂದ ಕೂಡ ಮನ್ನಣೆ ದೊರೆತಿದ್ದು, ಇಂದು ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ.

ರಾಜ್ಯದಲ್ಲಿ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನವಷ್ಟೇ ಅಲ್ಲದೇ ಹೊಗೆ ರಹಿತ ತಂಬಾಕು ಪದಾರ್ಥಗಳನ್ನ ಸೇವಿಸಿ ಉಗಿಯುವಂತಿಲ್ಲ. ಸಿಗರೇಟ್ ಹೊರತಾಗಿಯೂ ಹೊಗೆ ರಹಿತ ತಂಬಾಕು ಪದಾರ್ಥಗಳು ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತಿದ್ದವು. ತಂಬಾಕು ಪದಾರ್ಥಗಳನ್ನ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ಏಲ್ಲಿ ಬೇಕಂದರಲ್ಲಿ ಉಗಿಯುವುದರಿಂದ ಗಾಳಿಯಲ್ಲಿ ಒಬ್ಬರಿಂದ ಒಬ್ಬರಿಗೆ ವೈರಸ್ ಹರಡಬಹುದು. ವಿಶೇಷವಾಗಿ ಕೋವಿಡ್ 19 ವೈರಸ್ ನಿಂದ ಸಾರ್ವಜನಿಕರು ತಮ್ಮನ್ನ ತಾವು ರಕ್ಷಿಸಿಕೊಕೊಳ್ಳುವುದು ಸವಾಲಾಗಿತ್ತು. ಅಲ್ಲದೇ ಟಿ.ಬಿ ಹೊಂದಿರುವ ರೋಗಿಗಳಿಗು ತೊಂದರೆ ಉಂಟಾಗಿತ್ತು.

ಈ ಸಮಸ್ಯೆಗಳನ್ನ ಸೂಕ್ಷ್ಮವಾಗಿ ಗಮನಿಸಿದ್ದ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಈ ಹಿಂದೆ ಇದ್ದ COPTA ಕಾಯ್ದೆಗೆ ತಿದ್ದುಪಡಿ ತಂದು ರಾಜ್ಯದ ಎರಡು ಸದನದಲ್ಲಿ ಅನುಮೋದನೆ ಪಡೆದಿದ್ದರು. ಇದು ಕೇಂದ್ರದ ಕಾಯ್ದೆಯಾಗಿದ್ದರಿಂದ ರಾಷ್ಟ್ರಪತಿಯವರ ಅನುಮೋದನೆಗೆ ಕಳಿಸಲಾಗಿತ್ತು. ರಾಜ್ಯ ಸರ್ಕಾರದ ಈ ಮಹತ್ವದ ಹೆಜ್ಜೆಗೆ ರಾಷ್ಟ್ರಪತಿಗಳಿಂದ ಅನುಮೋದನೆ ದೊರೆತಿದ್ದು, ರಾಜ್ಯ ಸರ್ಕಾರಿಂದ ಇಂದು ಅಧಿಸೂಚನೆ ಹೊರಡಿಸಲಾಗಿದೆ.

ಕರ್ನಾಟಕ ಮಾದಕ ವಸ್ತು ಮುಕ್ತ ರಾಜ್ಯವಾಗಬೇಕು: ಸಿಎಂ

ರಾಜ್ಯವನ್ನು ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನಮ್ಮ ಗುರಿ. ಮಾದಕ ವಸ್ತು ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ವರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಪೋಲಿಸ್ ಇಲಾಖೆ, ಶಿಕ್ಷಣ ಇಲಾಖೆ ಇತರ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದರು.

ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಮಾಡಿ 91 ಅಸಂಘಟಿತ ಕಾರ್ಮಿಕ ವರ್ಗಗಳನ್ನು ಗುರುತಿಸಲಾಗಿದೆ . ಈವರೆಗೂ 25,61,105 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲಾಗಿರುತ್ತದೆ. ಅವರಿಗೆ ಅಪಘಾತ ಪರಿಹಾರ, ಸ್ಮಾರ್ಟ್ ಕಾರ್ಡ್ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಜ್ಯ ಗಿಗ್ ಕಾರ್ಮಿಕರ ಯೋಜನೆಯಡಿ ಇ ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಅಪಘಾತ ಹಾಗೂ ಜೀವ ವಿಮಾ ಸೌಲಭ್ಯ ನೀಡಲಾಗುತ್ತಿದ್ದು, ಬಾಲಕಾರ್ಮಿಕ ಪ್ರಕರಣಗಳಲ್ಲಿ 577 ದೂರು ದಾಖಲಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+