ಫ್ಲಾಟ್ ಖರೀದಿದಾರರಿಗೆ ಶುಭ ಸುದ್ದಿ ಕೊಡುವ ಗೆಜೆಟ್ ಅಧಿಸೂಚನೆ
ಬೆಂಗಳೂರು, ಅಕ್ಟೋಬರ್ 06: ಬೆಂಗಳೂರಿನಲ್ಲಿ ಫ್ಲಾಟ್ ಖರೀದಿದಾರರಿಗೆ ಬಸವರಾಜ ಬೊಮ್ಮಾಯಿ ಸರ್ಕಾರ ಶುಭ ಸುದ್ದಿ ಕೊಟ್ಟಿದೆ. ಮುದ್ರಾಂಕ ಶುಲ್ಕ ಕಾಯ್ದೆ 1957ಕ್ಕೆ ತಿದ್ದುಪಡಿ ತರಲಾಗಿದ್ದು, ವಿಧಾನಸಭೆ ಅಧಿವೇಶನದಲ್ಲಿ ವಿಧೇಯಕ ಮಂಡನೆಯಾಗಿ, ಸಮ್ಮತಿ ಸಿಕ್ಕಿತ್ತು. ಈಗ ಈ ಕುರಿತಂತೆ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
''ಬಿ.ಎಸ್ ಯಡಿಯೂರಪ್ಪ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಮುದ್ರಾಂಕ ಶುಲ್ಕ ತಗ್ಗಿಸಲಾಗಿದೆ, 2021-22ನೇ ಸಾಲಿನ ಬಜೆಟ್ ವೇಳೆ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ವೇಳೆಯೂ ಮುದ್ರಾಂಕ ಶುಲ್ಕವನ್ನು 5ರಿಂದ ಶೇ.3ಕ್ಕೆ ಇಳಿಕೆ ಮಾಡುವ ಬಗ್ಗೆ ಘೋಷಿಸಲಾಗಿತ್ತು. ಅದರಂತೆ, ಮೊದಲ ಬಾರಿ ನೋಂದಣಿಯ ಮುದ್ರಾಂಕ ಶುಲ್ಕ ಕಡಿತಗೊಳಿಸಲಾಗಿದೆ,'' ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ನಗರದ ಹೊರ ವಲಯದಲ್ಲಿ ವಸತಿ ಸಮುಚ್ಚಯ, ಫ್ಲಾಟ್, ಅಪಾರ್ಟ್ಮೆಂಟ್ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ನಿಂದ ಉಂಟಾಗಿರುವ ಆರ್ಥಿಕ ಮುಗ್ಗಟ್ಟಿನ ನಡುವೆಯೂ ಕೈಗೆಟುಕುವ ದರದಲ್ಲಿ ಮನೆ ಖರೀದಿ ಮಾಡಲು ಗ್ರಾಹಕರು ಮುಂದಾಗುತ್ತಿದ್ದಾರೆ. ಕೇಂದ್ರ/ರಾಜ್ಯ ಆವಾಸ್ ಯೋಜನೆಯಡಿ ಸಾವಿರಾರು ಫ್ಲಾಟ್ ಗಳನ್ನು ಕೆಳ ಮಧ್ಯಮ, ಆರ್ಥಿಕವಾಗಿ ಹಿಂದುಳಿದವರಿಗೆ ಹಂಚಲಾಗುತ್ತಿದೆ. ಈಗ ರಾಜ್ಯ ಸರ್ಕಾರದ ಸದರಿ ಅಧಿಸೂಚನೆಯಂತೆ ಬಿಲ್ಡರ್ ನಿಂದ ನೇರವಾಗಿ ಖರೀದಿ ಮಾಡುವ ಮೊದಲ ನೋಂದಣಿ ವೇಳೆಯಲ್ಲಿ ಮುದ್ರಾಂಕ ಶುಲ್ಕ ತಗ್ಗಲಿದೆ.

ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡು 20 ಲಕ್ಷ ರು.ವರೆಗಿನ ಮೌಲ್ಯದ ಫ್ಲ್ಯಾಟ್‌ಗಳ ಮೊದಲನೇ ನೋಂದಣಿ ವೇಳೆ ಶೇ.5ರಷ್ಟಿರುವ ಮುದ್ರಾಂಕ ಶುಲ್ಕವನ್ನು ಶೇ.2ಕ್ಕೆ ಹಾಗೂ 20ರಿಂದ 35 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಿತ್ತು. ಕಳೆದ ಮಾರ್ಚಲ್ಲಿ ಮಂಡಿಸಿದ 2021-22ನೇ ಸಾಲಿನ ಬಜೆಟ್ ವೇಳೆ 35ರಿಂದ 45 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ನೋಂದಣಿ ವೇಳೆಯೂ ಮುದ್ರಾಂಕ ಶುಲ್ಕವನ್ನು 5ರಿಂದ ಶೇ.3ಕ್ಕೆ ಇಳಿಕೆ ಮಾಡುವುದಾಗಿ ಘೋಷಿಸಿತ್ತು. ಈಗ ಅದನ್ನು ಅನುಷ್ಠಾನಕ್ಕೆ ತಂದಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಮಾರಾಟವಾಗದೆ ಉಳಿದ ಫ್ಲಾಟ್‌ಗಳು
ಕೊರೊನಾ ಸಾಂಕ್ರಾಮಿಕದ ದೆಸೆಯಿಂದ ಬೆಂಗಳೂರಿನಲ್ಲಿ ಲಕ್ಷಾಂತರ ಫ್ಲಾಟ್‌ಗಳು ಮಾರಾಟವಾಗದೆ ಉಳಿದಿವೆ. ಮುದ್ರಾಂಕ ಶುಲ್ಕ ತಗ್ಗಿಸಿರುವುದರಿಂದ, ಮಧ್ಯಮ ವರ್ಗ ಹಾಗೂ ಕೆಳ ಮಧ್ಯಮ ವರ್ಗದ ಜನತೆ ಕಡಿಮೆ ಬಜೆಟ್‌ನಲ್ಲಿ ಫ್ಲಾಟ್ ಖರೀದಿಸಲು ಮುಂದಾಗುವ ಅವಕಾಶ ಹೆಚ್ಚಾಗುವ ಸಾಧ್ಯತೆಯಿದೆ.
ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ 20 ಲಕ್ಷ ರು. ವರೆಗಿನ ಮೌಲ್ಯದ ಫ್ಲ್ಯಾಟ್‌ಗಳ ಮೊದಲನೇ ನೋಂದಣಿ ವೇಳೆ ಶೇ.5ರಷ್ಟಿರುವ ಮುದ್ರಾಂಕ ಶುಲ್ಕವನ್ನು ಶೇ.2ಕ್ಕೆ ಹಾಗೂ 20 ರಿಂದ 35 ಲಕ್ಷ ರು. ಮೌಲ್ಯದ ಫ್ಲ್ಯಾಟ್‌ಗಳ ಮುದ್ರಾಂಕ ಶುಲ್ಕವನ್ನು ಶೇ.5ರಿಂದ 3ಕ್ಕೆ ಇಳಿಕೆ ಮಾಡಲು ನಿರ್ಧರಿಸಲಾಗಿತ್ತು.

ಕ್ರೆಡಾಯ್ ಪ್ರತಿಕ್ರಿಯೆ
ಆಸ್ತಿ ನೋಂದಣಿಯ ಸ್ಟಾಂಪ್ ಡ್ಯೂಟಿ ಈಗಿರುವ ಶೇ.5ರಿಂದ ಶೇ. 2-1ಕ್ಕೆ ಇಳಿದರೆ ಖರೀದಿದಾರರಿಗೆ ಅನುಕೂಲ ಎಂದು ಕ್ರೆಡಾಯ್, ಬೆಂಗಳೂರಿನ ಕಾರ್ಯದರ್ಶಿ ಸುರೇಶ್ ಹರಿ ಪ್ರತಿಪಾದಿಸಿದ್ದಾರೆ.
ಸಾಮಾನ್ಯವಾಗಿ ಶೇ.70ರಷ್ಟು ಮಾರುಕಟ್ಟೆ ಮೌಲ್ಯದಲ್ಲಿ ಮಾರ್ಗದರ್ಶಿ ಮೌಲ್ಯವನ್ನು ಥಂಬ್ ರೂಲ್‍ನಡಿ ಲೆಕ್ಕಾಚಾರ ಹಾಕಲಾಗುತ್ತದೆ. ಈ ಲೆಕ್ಕಾಚಾರದಲ್ಲೇ ಕೆಲವು ಅಸಮಂಜಸ ಸಂಗತಿಗಳಿವೆ. ಇದು ಕೃತಕ ಭ್ರಾಂತಿ ಹುಟ್ಟಿಸುತ್ತದೆ ಮತ್ತು ಹಾಗಾಗಿ ರಿಯಲ್ ಎಸ್ಟೇಲ್ ಮಾರುಕಟ್ಟೆಯಲ್ಲಿ ಹಣದುಬ್ಬರದ ಒಂದು ಟ್ರೆಂಡ್ ಇರುತ್ತದೆ.
ಹಣದುಬ್ಬರದ ಟ್ರೆಂಡ್ ಮತ್ತು ಹೆಚ್ಚಿನ ಸ್ಟಾಂಪ್ ಡ್ಯೂಟಿ ಶುಲ್ಕ ಇದೆಲ್ಲದರ ಪರಿಣಾಮವಾಗಿ ಖರೀದಿದಾರರು ರಿಜಿಸ್ಟ್ರೇಶನ್ ಗೆ ಮುಂದೆ ಬರುವುದಿಲ್ಲ.

ಆಸ್ತಿಯ ಮೌಲ್ಯದೊಂದಿಗೆ ನೋಂದಣಿ ಶುಲ್ಕ ಜೋಡಣೆ ಏಕೆ?
ಆಸ್ತಿಯ ಮೌಲ್ಯದೊಂದಿಗೆ ನೋಂದಣಿ ಶುಲ್ಕ ಜೋಡಿಸುವುದನ್ನು ತಪ್ಪಿಸಬೇಕು. ನೋಂದಣಿ ಶುಲ್ಕವನ್ನು ಸಾಮಾನ್ಯವಾಗಿ ಡಾಕ್ಯುಮೆಂಟೇಶಶನ್ ಗಾಗಿ ವಿಧಿಸಲಾಗುತ್ತದೆ. ಇದು ಎಲ್ಲಾ ರೀತಿಯ ಆಸ್ತಿಯ ವಿಧ, ಮೌಲ್ಯ ಹಾಗೂ ಗಾತ್ರಕ್ಕೂ ಒಂದೇ ಆಗಿರುತ್ತದೆ. ಹಾಗಿದ್ದ ಮೇಲೆ ಯಾಕಾಗಿ ನೋಂದಣಿ ಶುಲ್ಕವನ್ನು ಆಸ್ತಿಯ ಮೌಲ್ಯದ ಶೇಕಡಾವಾರು ಲೆಕ್ಕಾಚಾರ ಹಾಕಲಾಗುತ್ತದೆ'' ಎಂದು ಸುರೇಶ್ ಹರಿ ಪ್ರಶ್ನಿಸಿದ್ದಾರೆ.
Recommended Video

ಮಹಾರಾಷ್ಟ್ರ ಮಾದರಿ ಅನುಸರಿಸಲು ಕಾಂಗ್ರೆಸ್ಸಿಗರ ಒತ್ತಾಯ
ಮುದ್ರಾಂಕ ಶುಲ್ಕ ಕಾಯ್ದೆ ತಿದ್ದುಪಡಿ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಂಬಿ ಪಾಟೀಲ್, ಇದಕ್ಕಿಂತ ಇನ್ನೂ ಹೆಚ್ಚಿನ ಕೊಡುಗೆ ಜನತೆಗೆ ಸಿಗಬೇಕಿದೆ. ಈ ನಿಟ್ಟಿನಲ್ಲಿ ಮಹಾರಾಷ್ಟ್ರ ಮಾದರಿ ಅನುಸರಿಸುವುದು ಉತ್ತಮ, ಬೆಲೆ ಸಮರದ ನಡುವೆ ಮುದ್ರಾಂಕ ಶುಲ್ಕ ತಗ್ಗಿಸಿ, ಖರೀದಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದಿದ್ದಾರೆ.
''ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮಾರ್ಗದರ್ಶಿ ಮೌಲ್ಯಕ್ಕನುಗುಣವಾಗಿ ಮುದ್ರಾಂಕ ಶುಲ್ಕ ತಗ್ಗಿಸಲಾಗಿದೆ'' ಎಂದು ಸಚಿವ ಅಶೋಕ್ ಹೇಳಿದರು. ಜನರು ತಮ್ಮದೇ ಸ್ವಂತ ಜಮೀನಿನಲ್ಲಿ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿಕೊಳ್ಳಲು ಬೇಕಾದ ಅನುಕೂಲವನ್ನು ಕಲ್ಪಿಸುವಂತೆ ಕಾಂಗ್ರೆಸ್ ಮುಖಂಡರಾದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಕುಮಾರ್ ಆಗ್ರಹಿಸಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications