ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮವಾರದಿಂದ ಕೇರಳ, ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್ ಸೇವೆ

|
Google Oneindia Kannada News

ಬೆಂಗಳೂರು, ಆಗಸ್ಟ್ 22: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಕೆ ಭೀತಿ ನಡುವೆ ಸೋಮವಾರದಿಂದ ಕೇರಳ ಮತ್ತು ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸೇವೆ ಪುನಾರಂಭಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೇರಳ ಮತ್ತು ತಮಿಳುನಾಡಿಗೆ ಸಂಚರಿಸುವ ಪ್ರಯಾಣಿಕರು 72 ಗಂಟೆಗಳೊಗೆ ನಡೆಸಿದ RT-PCR ಪರೀಕ್ಷೆಯ ನೆಗೆಟಿವ್ ವರದಿ ಅಥವಾ ಕರ್ನಾಟಕ ಸರ್ಕಾರದ ಮಾರ್ಗಸೂಚಿ ಅನ್ವಯ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದುಕೊಂಡಿರುವುದು ಕಡ್ಡಾಯವಾಗಿದೆ.
"ತಮಿಳುನಾಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಸೇವೆಯನ್ನು ನಾಳೆಯಿಂದ ಪುನಾರಂಭಿಸಲಾಗುವುದು. ರಾಜ್ಯದ ವಿವಿಧ ಮಾರ್ಗಗಳಲ್ಲಿ 250 ಬಸ್ಸುಗಳು ಸಂಚರಿಸಲಿವೆ," ಎಂದು ಕೆಎಸ್ಆರ್ ಟಿಸಿ ಟ್ವೀಟ್ ಮಾಡಿದೆ. ಪ್ರತಿನಿತ್ಯ ಕೇರಳಕ್ಕೆ ಪ್ರಯಾಣಿಸುವ ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಇತರರು 15 ದಿನಗಳಿಗೊಮ್ಮೆ ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳಬೇಕು. ಪ್ರಯಾಣದ ಸಂದರ್ಭದಲ್ಲಿ RT-PCR ವರದಿಯನ್ನು ಕಡ್ಡಾಯವಾಗಿ ಇಟ್ಟುಕೊಂಡಿರಬೇಕು.

ಕೊವಿಡ್-19 ಇಳಿಮುಖ: ಕರ್ನಾಟಕದಲ್ಲಿ ಒಂದೇ ದಿನ 1189 ಮಂದಿಗೆ ಸೋಂಕು

ಕರ್ನಾಟಕದ ಈ ನಿಲ್ದಾಣಗಳಿಂದ ಬಸ್ ಸಂಚಾರ:
ಬೆಂಗಳೂರು, ಮೈಸೂರು, ಮಂಗಳೂರು, ಪುತ್ತೂರು ಸೇರಿದಂತೆ ಅಗತ್ಯವಿರುವ ವಿವಿಧ ಪ್ರದೇಶಗಳಿಂದ ನೆರೆ ರಾಜ್ಯಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಸಂಚರಿಸಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಸೇವೆಯನ್ನು ಪುನಾರಂಭಿಸಲಾಗಿದೆ ಎಂದು ಕೆಎಸ್ಆರ್ ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಕೊವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕಳೆದ ಏಪ್ರಿಲ್ 27ರಂದು ನೆರೆ ರಾಜ್ಯಗಳಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

Karnataka Govt Resumes KSRTC Bus Services to Kerala and Tamil nadu From Monday

Recommended Video

ವಿಶ್ವಕಪ್ ನಲ್ಲಿ ಸಿಡಿಯೋ ಇಬ್ಬರು ಬ್ಯಾಟ್ಸ್ ಮನ್ ಬಗ್ಗೆ ಹೇಳಿದ DK | Oneindia Kannada

ಕರ್ನಾಟಕದಲ್ಲಿ ಇಳಿಮುಖವಾಗಿ ಕೊವಿಡ್-19:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.94ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.85ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1189 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1408 ಸೋಂಕಿತರು ಗುಣಮುಖರಾಗಿದ್ದು, 22 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 37145ಕ್ಕೆ ಏರಿಕೆಯಾಗಿದೆ. ಭಾನುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2938616ಕ್ಕೆ ಏರಿಕೆಯಾಗಿದೆ. ಒಟ್ಟು 2880889 ಸೋಂಕಿತರು ಗುಣಮುಖರಾಗಿದ್ದು. 20556 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
Karnataka Govt Resumes KSRTC Bus Services to Kerala and Tamil nadu From Monday: This Conditions Apply.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X