ಹಲಾಲ್, ಹಿಜಾಬ್ ವಿವಾದ; ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ಎಂದ ಸಿಎಂ
ನವದೆಹಲಿಯಲ್ಲಿ ಮಂಗಳವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಎಲ್ಲರೂ ಅದಕ್ಕೆ ತಲೆಬಾಗಿ ನಡೆಯಲೇಬೇಕು ಎಂದರು. ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಪ್ರಾಮುಖ್ಯತೆ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಹಲಾಲ್ ಕಟ್ ಮತ್ತು ಹಿಜಾಬ್ ವಿಚಾರಗಳ ಬಗ್ಗೆ ಉಲ್ಲೇಖಿಸಿದ ಅವರು, ನಮ್ಮ ಸಮಾಜದಲ್ಲಿ ಯಾವ ರೀತಿ ಆಚರಿಸಬೇಕು ಎನ್ನುವುದು ಧಾರ್ಮಿಕ- ಸಾಮಾಜಿಕ ವಿಚಾರ ಎಂದರು.
ಕುಮಾರಸ್ವಾಮಿ ಆರೋಪಕ್ಕೆ ಬೊಮ್ಮಾಯಿ ತಿರುಗೇಟು:
ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಗ್ಗೆ ಸರ್ಕಾರ ಕೈ ಕಟ್ಟಿ ಕುಳಿತಿದೆ. ಯಾವುದೇ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಅವರು ಏನಾದರೂ ಅಂದುಕೊಳ್ಳಲಿ. ವೈಯಕ್ತಿಕ ವಿಚಾರಗಳನ್ನು ಜನರು ತೀರ್ಮಾನ ಮಾಡುತ್ತಾರೆ. ಅವರು ಯಾವಾಗ ಮೂಕರಾಗಿದ್ದರು, ಯಾವಾಗ ಏನು ಮಾತನಾಡುತ್ತಾರೆ. ನಾನು ಏನು ಮಾತನಾಡುತ್ತೇನೆ ಎನ್ನುವುದನ್ನು ಜನ ತೀರ್ಮಾನಿಸುತ್ತಾರೆ. ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಹೇಳಿಕೆ ನೀಡುವುದೇ ಆಡಳಿತ ಅಲ್ಲ ಎಂದ ಬೊಮ್ಮಾಯಿ:
"ನಾವು ಯಾವಾಗ ಕೆಲಸ ಮಾಡಬೇಕೋ ಆವಾಗ ಮಾಡಿದ್ದೇವೆ. ಹಿಜಾಬ್ ವಿಚಾರದಲ್ಲಿ ನ್ಯಾಯಾಲಯ ಏನು ಹೇಳಬೇಕೋ ಅದನ್ನು ಹೇಳಿದ್ದೇವೆ. ಹಲವಾರು ವಿಚಾರಗಳು ಬಂದಾಗ ಅಧಿಕಾರಿಗಳಿಗೆ ಸೂಚನೆ ಕೊಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದೇವೆ. ಹೇಳಿಕೆ ಕೊಟ್ಟರಷ್ಟೇ ಆಡಳಿತ ಅಲ್ಲ. ಆಡಳಿತ ಮಾಡಲು ರೀತಿ ನೀತಿಗಳಿವೆ. ಅದರಂತೆ ನಾವು ಆಡಳಿತ ಮಾಡುತ್ತೇವೆ," ಎಂದರು.
Recommended Video













Click it and Unblock the Notifications