• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

SSLC, PUC ಪರೀಕ್ಷೆ: ಸರ್ಕಾರ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳೇನು?

|

ಬೆಂಗಳೂರು, ಮೇ 18: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ದಿನಾಂಕವನ್ನು ರಾಜ್ಯ ಸರ್ಕಾರ ಇಂದು ಪ್ರಕಟಿಸಿದೆ.

ಹಾಗೆಯೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೂಡ ಕೈಗೊಂಡಿದೆ. ಜೂನ್ 25 ರಿಂದ ಜುಲೈ 4ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಜೂನ್ 18ರಂದು ನಡೆಯಲಿದೆ.

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ದಿನಾಂಕ ಪ್ರಕಟ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧವಾಗಲು 20 ದಿನಗಳಿಗೂ ಮುಂಚೆಯೇ ವೇಳಾಪಟ್ಟಿ ತಿಳಿಸಲಾಗಿದೆ. ಯಾರು ಎಲ್ಲಿ ಪರೀಕ್ಷೆ ಬರೆಯಲು ಇಷ್ಟ ಪಡುತ್ತಾರೋ ಅಂತಹ ಕೇಂದ್ರಗಳಲ್ಲೇ ಅವಕಾಶ ನೀಡುವುದು, ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೊಠಡಿಗಳಲ್ಲಿ ಸಾಮಾಜಿಕ ಅಂತರ, ಸ್ಯಾನಿಟೈಜರ್ ಬಳಕೆ, ಥರ್ಮಲ್ ಪರೀಕ್ಷೆ ಸೇರಿದಂತೆ ಕೊರೊನಾ ಸೋಂಕು ಹಬ್ಬದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟವರಿಗೆ ಸಚಿವರು ಸೂಚನೆ ನೀಡಿದ್ದರು.

ಎಲ್ಲೆಲ್ಲಿ ಪರೀಕ್ಷಾ ಕೇಂದ್ರಗಳು ಆರಂಭವಾಗಲಿವೆಯೋ ಅಂತಹ ಕಡೆ ಈಗಾಗಲೇ ಪರೀಕ್ಷೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪ್ರತಿದಿನವು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಪರೀಕ್ಷೆ ಬರೆಯಲು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 43720 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ದಿನಾಂಕ ಪ್ರಕಟ

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ಸ್ಕ್ರೀನ್ ಜತೆಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು, ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗೆಬಿಡಲಾಗುವುದು. ಮತ್ತು ಅವರಿಗೆ ಎಲ್ಲ ರೀತಿಯ ಆರೋಗ್ಯ ನೆರವು ನೀಡಲಾಗುತ್ತದೆ . ಪರೀಕ್ಷಾ ಕೇಂದ್ರಕ್ಕೆ ಬರುವಂತಹ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಜ್ವರ-ಅನಾರೋಗ್ಯ ಇದ್ದರೆ ಅಂತವರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

English summary
Karnataka Govt Safety Measures To Conduct SSLC And PUC Exams,Each examination center will be equipped with enough sanitizer dispensers and thermal checking machines. In case any student found to be ill or have fever, cough or cold, then special arrangements will be made for such students to write exams in an Exam hall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more