Get Updates
Get notified of breaking news, exclusive insights, and must-see stories!

ಸರ್ಕಾರಿ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲು ನಿರ್ಧಾರ- ಯಾವಾಗಿಂದ? ಯಾವ ತರಗತಿ ವರೆಗೆ? ತಿಳಿಯಿರಿ

ಬೆಂಗಳೂರು, ಆಗಸ್ಟ್‌ 16: ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಬಾರಿ ಮೊಟ್ಟೆ ಅಥವಾ ಬಾಳೆಹಣ್ಣು ನೀಡಲು ನಿರ್ಧರಿಸಲಾಗಿದೆ. 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಆಗಸ್ಟ್ 18 ರಂದು ಮಂಡ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Karnataka Govt Schools to Provide Eggs and Bananas in Mid-Day Meals Twice a Week Starting August 18

8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಲು ತೀರ್ಮಾನಿಸಲಾಗಿತ್ತು. ಆದರೆ ಈಗ 10ನೇ ತರಗತಿಯ ವರೆಗೂ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇವೆ. ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮವನ್ನು ಆಗಸ್ಟ್ 18ರಂದು ಮಂಡ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರ 1 ರಿಂದ 8 ನೇ ತರಗತಿಯ ವರೆಗಿನ ಶಾಲಾ ಮಕ್ಕಳಿಗೆ ಪೌಷ್ಟಿಕಾಂಶದ ಪೂರಕ ಭಾಗವಾಗಿ ವಾರಕ್ಕೆ ಎರಡು ಬಾರಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಲು ಜೂನ್‌ನಲ್ಲಿ ಆದೇಶವನ್ನು ಹೊರಡಿಸಿತು. ಶಾಲಾ ಮಕ್ಕಳಲ್ಲಿನ ಅಪೌಷ್ಟಿಕತೆ ಹೋಗಲಾಡಿಸಲು ಈ ಯೋಜನೆಯನ್ನು ಜಾರಿಗೊಳಿಸಲಾಯಿತು. ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜತೆಗೆ ಬಾಳೆಹಣ್ಣು ನೀಡಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಮಧು ಬಂಗಾರಪ್ಪ ಹೇಳಿದರು. ಮುಂದಿನ ಶೈಕ್ಷಣಿಕ ವರ್ಷದಿಂದ ಕೇಂದ್ರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸರ್ಕಾರ ರದ್ದುಪಡಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

Karnataka Govt Schools to Provide Eggs and Bananas in Mid-Day Meals Twice a Week Starting August 18

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸಲು ಕರ್ನಾಟಕ ಸರ್ಕಾರ ಶುಕ್ರವಾರ ನಿರ್ಧರಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಹಾಳು ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ. ಸ್ಥಳೀಯ ಸಂಸ್ಕೃತಿ, ಸಾಮಾಜಿಕ ಮತ್ತು ಆರ್ಥಿಕ ಮಾನದಂಡಗಳಿಗೆ ಹೊಂದಿಕೆಯಾಗುವ ಶಿಕ್ಷಣ ನೀತಿಯನ್ನು ತಮ್ಮ ಸರ್ಕಾರ ಸಿದ್ಧಪಡಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟದ ಆಡಳಿತ ವ್ಯವಸ್ಥೆಗೆ ಹೊಂದಿಕೆಯಾಗುವುದಿಲ್ಲ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಹಲವಾರು ಕುತಂತ್ರಗಳನ್ನು ಹೊಂದಿದೆ. ವೈವಿಧ್ಯಮಯ ಧರ್ಮಗಳು, ಭಾಷೆಗಳು ಮತ್ತು ಸಂಸ್ಕೃತಿಗಳನ್ನು ಹೊಂದಿರುವ ಭಾರತದಂತಹ ರಾಷ್ಟ್ರಕ್ಕೆ ಏಕರೂಪ ಶಿಕ್ಷಣ ವ್ಯವಸ್ಥೆ ಸರಿಹೊಂದುವುದಿಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

Karnataka Govt Schools to Provide Eggs and Bananas in Mid-Day Meals Twice a Week Starting August 18

'ರಾಜ್ಯದ ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ಪರಿಸರವನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು. ಹೊಸ ನೀತಿಯು ರಾಜ್ಯದಲ್ಲಿನ ಉನ್ನತ ಶಿಕ್ಷಣದ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸುತ್ತದೆ. ನಮ್ಮ ಯುವಜನರನ್ನು ಜಾಗತಿಕವಾಗಿ ಸ್ಪರ್ಧಿಸಲು ಮತ್ತು ಅರ್ಥಪೂರ್ಣ ಉದ್ಯೋಗಾವಕಾಶಗಳನ್ನು ಪಡೆಯಲು ಸಶಕ್ತಗೊಳಿಸುತ್ತದೆ' ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+