ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಸಾವು; ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 29; "ಸರ್ಕಾರ ಕೊರೊನಾ ಇಂದ ಸಾವಿಗೀಡಾದ ಜನರ ನಿಜ ಲೆಕ್ಕವನ್ನು ಮುಚ್ಚಿಟ್ಟು, ಜನರಿಗೆ ಸುಳ್ಳು ಹೇಳುತ್ತಿದೆ. ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಬಿಡುಗಡೆ ಮಾಡುವ ಮೃತರ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ ಇದೆ. ಸರ್ಕಾರ ಅಗತ್ಯ ವೈದ್ಯಕೀಯ ಸೌಲಭ್ಯ ನೀಡಿದ್ದರೆ ಜನ ಹೀಗೆ ಸಾಯುವ ಸನ್ನಿವೇಶ ಬರುತ್ತಿತ್ತಾ?" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಗುರುವಾರ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದಾರೆ. ಕೋವಿಡ್ ನಿರ್ವಹಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಕೋವಿಡ್ 2ನೇ ಅಲೆ; ಭಾರತದಲ್ಲಿ 9 ದಿನದಲ್ಲಿ 20 ಸಾವಿರ ಸಾವು ಕೋವಿಡ್ 2ನೇ ಅಲೆ; ಭಾರತದಲ್ಲಿ 9 ದಿನದಲ್ಲಿ 20 ಸಾವಿರ ಸಾವು

"ರೋಗಿಗಳಿಗೆ ಆಕ್ಸಿಜನ್, ಐಸಿಯು ಹಾಸಿಗೆಗಳು, ಆಂಬುಲೆನ್ಸ್ ಗಳು ಅಗತ್ಯ ಸಮಯದಲ್ಲಿ ಸಿಗುತ್ತಿಲ್ಲ ಎಂದು ಸತ್ಯ ಹೇಳಿದರೆ ಬಿಜೆಪಿ ನಾಯಕರು ನಾನು ಟೀಕೆ ಮಾಡುತ್ತಿದ್ದೇನೆ ಅಂತಾರೆ. ಶವ ಸಂಸ್ಕಾರ ಮಾಡಲು ಕ್ಯೂನಲ್ಲಿ ನಿಲ್ಲಬೇಕಾದ, ಲಂಚ ಕೊಡಬೇಕಾದ ಪರಿಸ್ಥಿತಿ ಇದೆ. ಇದು ಸುಳ್ಳಾ? ಇದನ್ನು ಹೇಳಿದ್ರೆ ಟೀಕೆಯಾಗುತ್ತಾ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವು, ಶೇ.20ರಷ್ಟು ಏಪ್ರಿಲ್‌ನಲ್ಲಿ ಸಂಭವಿಸಿದೆ ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಾವು, ಶೇ.20ರಷ್ಟು ಏಪ್ರಿಲ್‌ನಲ್ಲಿ ಸಂಭವಿಸಿದೆ

Karnataka Govt Showing False Number About COVID Death Says Siddaramaiah

ಉಮೇಶ್ ಕತ್ತಿ ರಾಜೀನಾಮೆ ಪಡೆಯಿರಿ; "ಬಡ ರೈತನೊಬ್ಬನಿಗೆ ಹೊಟ್ಟೆಗಿಲ್ಲದಿದ್ದರೆ ಸಾಯೋದೆ ಒಳ್ಳೆಯದು" ಎಂಬ ಉಡಾಫೆ ಉತ್ತರ ನೀಡಿರುವ ಉಮೇಶ್ ಕತ್ತಿ ಸಚಿವನಾಗಿ ಮುಂದುವರೆಯಲು ನಾಲಾಯಕ್. ಕತ್ತಿ ಪರವಾಗಿ ಯಡಿಯೂರಪ್ಪ ಅವರು ವಿಷಾದ ವ್ಯಕ್ತಪಡಿಸುವ ಬದಲು ಮಂತ್ರಿಮಂಡಲದಿಂದ ಕೈಬಿಡಬೇಕಿತ್ತು. ಇಂತಹ ಅಯೋಗ್ಯರನ್ನು ಇಟ್ಟುಕೊಂಡು ಸರ್ಕಾರ ಬಡವರ ಪರವಾಗಿ ಕೆಲಸ ಮಾಡಲು ಆಗುತ್ತಾ? ತಕ್ಷಣ ಸಚಿವ ಉಮೇಶ್ ಕತ್ತಿ ರಾಜೀನಾಮೆ ಪಡೆಯಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರೈತನಿಗೆ ಸತ್ತೋಗು ಎಂಬ ಹೇಳಿಕೆ ಸಮರ್ಥಿಸಿಕೊಂಡ ಆಹಾರ ಸಚಿವ ಉಮೇಶ್ ಕತ್ತಿ; ಭಾರೀ ವಿರೋಧರೈತನಿಗೆ ಸತ್ತೋಗು ಎಂಬ ಹೇಳಿಕೆ ಸಮರ್ಥಿಸಿಕೊಂಡ ಆಹಾರ ಸಚಿವ ಉಮೇಶ್ ಕತ್ತಿ; ಭಾರೀ ವಿರೋಧ

Recommended Video

#Positive Story: ಮೇ ತಿಂಗಳಿನಲ್ಲಿ ಆಕ್ಸಿಜನ್ ಉತ್ಪಾದನೆ ಶೇ. 25 ರಷ್ಟು ಹೆಚ್ಚಳ | Oneindia Kannada

"ಲಾಕ್‌ಡೌನ್ ನಿಂದಾಗಿ ಜನ ಕೆಲಸ ಇಲ್ಲದೆ ಮನೆಯಲ್ಲಿ ಕೂತಿದ್ದಾರೆ, ಅಗತ್ಯ ವಸ್ತುಗಳನ್ನು ಕೊಳ್ಳಲು ಅವರ ಬಳಿ ಹಣವಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಪ್ರತಿ ವ್ಯಕ್ತಿಗೆ ತಲಾ 10 ಕೆಜಿ ಅಕ್ಕಿ ಸೇರಿದಂತೆ ಅಗತ್ಯ ದಿನಸಿ ವಸ್ತುಗಳನ್ನು ತಕ್ಷಣ ವಿತರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸುತ್ತೇನೆ" ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

English summary
Leader of opposition Siddaramaiah alleged that Karnataka government and BBMP showing false number about COVID related death.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X