Land Conversion: ಲಂಚವಿಲ್ಲದೆ ಭೂ ಪರಿವರ್ತನೆಗೆ ಅವಕಾಶ, ಮಹತ್ವದ ಬದಲಾವಣೆ: ಸರ್ಕಾರದಿಂದ ಗುಡ್‌ನ್ಯೂಸ್
ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಶಾಸಕ ರಾಮೋಜಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಯಾವುದೇ ಲಂಚವಿಲ್ಲದೆ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ಕರ್ನಾಟಕ ಭೂ ಕಂದಾಯ ಕಾಯ್ದೆ ಜಾರಿಯಾಗಿದ್ದರೂ ಈ ಹಿಂದೆ ಅಗತ್ಯ ತಿದ್ದುಪಡಿ ಆಗಿರಲಿಲ್ಲ. ಆದರೆ ಪ್ರಸ್ತುತ ಅತ್ಯಧಿಕ ಹಾಗೂ ಅಗತ್ಯ ತಿದ್ದುಪಡಿಗಳನ್ನು ತರಲಾಗುತ್ತಿದೆ. ಕಲಂ 95ರಕ್ಕೆ ಸಾಕಷ್ಟು ತಿದ್ದುಪಡಿ ಮಾಡಲಾಗಿದ್ದು, ಕಳೆದ ಅಕ್ಟೋಬರ್ 20ರಂದೇ ಕರಡು ರಚಿಸಲಾಗಿದೆ. ಇದರಲ್ಲಿ ಮುಖ್ಯವಾಗಿ ಜನರಿಗೆ ಅನುಕೂಲವಾಗಲು ಭೂ ಪರಿವರ್ತನೆಯನ್ನು ಮತ್ತಷ್ಟು ಸರಳೀಕರಣಗೊಳಿಸಲಾಗಿದೆ ಎಂದಿದ್ದಾರೆ.

ಮಧ್ಯವರ್ತಿಗಳಿಗೆ ಬ್ರೇಕ್
ಹಲವು ವರ್ಷಗಳಿಂದಲೂ ಭೂ ಪರಿವರ್ತನೆ ಎಂಬುದೇ ಹಗರಣವಾಗಿತ್ತು. ಇದರಲ್ಲಿ ಅಧಿಕಾರಿಗಳು ಭಾಗಿಯಾಗಿದ್ದಾರೋ ಇಲ್ಲವೋ ನಮಗೆ ತಿಳಿದಿಲ್ಲ. ಆದ್ರೆ ಮಧ್ಯವರ್ತಿಗಳಂತೂ ಹುಟ್ಟಿಕೊಂಡಿದ್ದಾರೆ. ಇದರಿಂದ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು. ಹೀಗಾಗಿ ಈ ಭೂ ಪರಿವರ್ತನೆ ದಂಧೆಗೆ ಸಂಪೂರ್ಣ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಹತ್ವದ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.
30 ದಿನಗಳಲ್ಲಿ ಭೂ ಪರಿವರ್ತನೆ
ಮಾಸ್ಟರ್ ಪ್ಲಾನ್ ಪ್ರಕಾರ ಉದ್ಯಮ ನಡೆಸುವವರಿಗೆ ಆಟೋ ಕನ್ವರ್ಷನ್‌ಗೆ ಅವಕಾಶ ನೀಡಲಾಗಿದೆ. ಮಾಸ್ಟರ್ ಪ್ಲಾನ್ ಹೊರಗಿನ ಹಾಗೂ ಡೀಮ್ಡ್ ಕನ್ವರ್ಷನ್‌ಗೂ ಈ ಹಿಂದೆ ಮೂರು ನಾಲ್ಕು ತಿಂಗಳು ಸಮಯ ಬೇಕಾಗಿತ್ತು. ಆದರೆ, ಪ್ರಸ್ತುತ 30 ದಿನಗಳಲ್ಲಿ ಭೂ ಪರಿವರ್ತನೆಗೆ ಅವಕಾಶ ನೀಡಲಾಗುತ್ತಿದೆ. ಭೂ ಪರಿವರ್ತನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜಿಲ್ಲಾಧಿಕಾರಿಗಳು 30 ದಿನಗಳ ಒಳಗೆ ಸಂಬಂಧಿತ ಇಲಾಖೆಯ ಜೊತೆಗೆ ಚರ್ಚಿಸಿ ಪರಿವರ್ತನೆಗೆ ಅವಕಾಶ ನೀಡಬಹುದು ಅಥವಾ ತಿರಸ್ಕರಿಸಬಹುದು. ಒಂದು ವೇಳೆ 30 ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ, ಆಟೋಮೇಟಿಕ್ ಆಗಿ ಭೂ ಪರಿವರ್ತನೆಗೆ ಅವಕಾಶ ಲಭ್ಯವಾಗುತ್ತದೆ ಎಂದು ವಿವರಿಸಿದ್ದಾರೆ.
ಸಣ್ಣ ಕೈಗಾರಿಕೆಗಳು ಎರಡು ಎಕರೆವರೆಗೆ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಪರಿವರ್ತನೆ ಅಗತ್ಯ ಇಲ್ಲ. ಭಾರತ ದೇಶದಲ್ಲಿ ಪ್ರಸ್ತುತ ನವೀಕರಿಸಬಹುದಾದ ಇಂಧನದ ಕಡೆ ಹೆಜ್ಜೆ ಇಡುತ್ತಿದೆ. ಹೀಗಾಗಿ ಇದಕ್ಕೂ ಭೂ ಪರಿವರ್ತನೆ ಬೇಕಿಲ್ಲ. ಇಂಧನ ಇಲಾಖೆಯ ಅನುಮತಿ ಪಡೆದಿದ್ದರೆ, ನವೀಕರಿಸಬಹುದಾದ ಇಂಧನದ ಪ್ಲಾಂಟ್ ನಿರ್ಮಿಸಲು ಭೂ ಪರಿವರ್ತನೆಯ ಅಗತ್ಯವಿಲ್ಲ. ಹೀಗೆ ಭೂ ಪರಿವರ್ತನೆಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ಸರಳೀಕರಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉಪ ವಿಭಾಗಾಧಿಕಾರಿಗಳ ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮ ಇರಲಿಲ್ಲ. ಇದರಿಂದ ಉಪ ವಿಭಾಗಾಧಿಕಾರಿಗಳು ಕೋರ್ಟ್‌ನಲ್ಲಿ ತಮ್ಮ ಅಧಿಕಾರ ವ್ಯಾಪ್ತಿ ಮೀರಿ, ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳಿವೆ. ಈ ಹಿನ್ನೆಲೆ ಇದಕ್ಕೂ ನಿಯಮಗಳನ್ನು ರೂಪಿಸಿದ್ದೇವೆ. ಅನೇಕ ಸೆಕ್ಷನ್‌ಗಳಿಗೆ ಹೊಸ ನಿಯಮ ತಿದ್ದುಪಡಿ ಮೂಲಕ ಜಾರಿಗೊಳಿಸುತ್ತಿದ್ದೇವೆ. ಮುಂದಿನ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದಾರೆ.
-
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ












Click it and Unblock the Notifications