ಕೋವಿಡ್ ಸಾವು: ಕುಟುಂಬಗಳಿಗೆ ಒಂದು ಲಕ್ಷ ಪರಿಹಾರ ವಿತರಣೆ
ಬೆಂಗಳೂರು, ಸೆ.23: ಕೋವಿಡ್19 ನಿಂದ ಮೃತಪಟ್ಟ ಬಡತನ ರೇಖೆಗಿಂತ ಕೆಳಗಿನ (ಬಿಪಿಎಲ್) ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ಒಂದು ಲಕ್ಷದ ಚೆಕ್ ವಿತರಣೆ ಮಾಡಿದೆ. ಕಂದಾಯ ಸಚಿವ ಆರ್.ಅಶೋಕ್ ಅವರು ಗುರುವಾರ ವಿಧಾನಸೌಧದಲ್ಲಿ ಸಾಂಕೇತಿಕವಾಗಿ 18 ಕುಟುಂಬಗಳಿಗೆ ಚೆಕ್ ವಿತರಣೆ ಮಾಡಿದರು.
ಕೋವಿಡ್ ಸಾಂಕ್ರಾಮಿಕ ಹರಡಿದ ನಂತರ 2020 ಮತ್ತು ಈ ವರ್ಷ ಅನೇಕರನ್ನು ಬಲಿ ಪಡೆದಿದೆ. ಕುಟುಂಬಕ್ಕೆ ಆಧಾರ ಆಗಿದ್ದವರನ್ನು ಕಳೆದುಕೊಂಡು ಕುಟುಂಬಸ್ಥರು ತೊಂದರೆ ಪಡುತ್ತಿದ್ದಾರೆ. ಇಂತಹವರಿಗೆ ರಾಜ್ಯ ಸರ್ಕಾರ ನೆರವಿಗೆ ಬಂದಿದ್ದು, ಮೃತಪಟ್ಟಂತಹ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಒಂದು ಲಕ್ಷ ಪರಿಹಾರವಾಗಿ ನೀಡಿದೆ.
ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ತಲಾ 50,000 ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿತ್ತು. ರಾಜ್ಯ ಸರ್ಕಾರಗಳು ವಿಪತ್ತು ನಿರ್ವಹಣಾ ನಿಧಿಯಿಂದ ಈ ಹಣ ಒದಗಿಸಲಿವೆ. ಕರೋನಾಕ್ಕೆ ಸಂಬಂಧಸಿದಂತೆ 40,000ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಚೆಕ್ ವಿತರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶೋಕ್, "ಕೋವಿಡ್ ಕಾರಣದಿಂದಾಗಿ ಅನೇಕ ಕುಟುಂಬಗಳಲ್ಲಿ ಸಾವು ಸಂಭವಿಸಿದೆ. ಕೆಲವರು ತಂದೆ, ತಾಯಿಯನ್ನು ಕಳೆದುಕೊಂಡಿದ್ದಾರೆ, ಮಕ್ಕಳು ಅನಾಥ ಆಗಿವೆ, ವಯಸ್ಕರು ಮೃತಪಟ್ಟಿದ್ದರಿಂದ ವೃದ್ಧರು ಆಸರೆ ಕಳೆದುಕೊಂಡಿದ್ದಾರೆ. ಇಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರ ನೆರವು ನೀಡುತ್ತಿದೆ" ಎಂದು ಹೇಳಿದರು.
ಪರಿಹಾರಕ್ಕಾಗಿ ರಾಜ್ಯದಾದ್ಯಂತ 7,729 ಅರ್ಜಿಗಳು ಬಂದಿವೆ. ಇಂದು ಸಾಂಕೇತಿಕವಾಗಿ ಕೆಲವರಿಗೆ ಮಾತ್ರ ಚೆಕ್‌ಗಳನ್ನು ವಿತರಣೆ ಮಾಡಿದ್ದೇವೆ. ಉಳಿದಂತೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ವಿತರಣೆ ಮಾಡಲಿದ್ದಾರೆ. ಪರಿಹಾರಕ್ಕಾಗಿ ಆಯ್ಕೆಯಾದ ಫಲಾನುಭವಿಗಳು ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಚೆಕ್ ಪಡೆದುಕೊಳ್ಳಬೇಕು ಎಂದು ಅವರು ಮಾಹಿತಿ ನೀಡಿದರು.
ಸುಪ್ರೀಂಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರವೂ ಸಹ 50,000 ಪರಿಹಾರ ಘೋಷಣೆ ಮಾಡಿದೆ. ಆದರೆ, ಆ ಹಣ ಇನ್ನೂ ಬಿಡುಗಡೆಯಾಗಿಲ್ಲ. ಯಾವ ರೀತಿಯಲ್ಲಿ ಹಣ ಕೊಡಬೇಕು ಎಂದು ಕೇಂದ್ರ ಸರ್ಕಾರದಿಂದ ಸ್ಪಷ್ಟ ನಿರ್ದೇಶನ ಬಂದ ಬಳಿಕ ಆ ಹಣವನ್ನೂ ಸಹ ಫಲಾನುಭವಿಗಳಿಗೆ ತಲುಪಿಸುತ್ತೇವೆ ಎಂದು ಆಶೋಕ್ ಹೇಳಿದರು.
ಕೋವಿಡ್ ಮೃತ ಕುಟುಂಬಗಳ ವರದಿಗೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಲಾಗಿದೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಯಾರಾದರೂ ಕೋವಿಡ್ ಕಾರಣದಿಂದ ಮೃತಪಟ್ಟಿದ್ದರೆ ಅಂತಹವರು ನಾಡ ಕಚೇರಿಗಳಿಗೆ ತೆರಳಿ ಅಗತ್ಯ ಮಾಹಿತಿಗಳನ್ನು ಒದಗಿಸುವ ಮೂಲಕ ಅರ್ಜಿಗಳನ್ನು ತುಂಬಿ ಕಳುಹಿಸಬೇಕು. ಪರಿಶೀಲನೆ ನಡೆಸಿ ಪರಿಹಾರ ಒದಗಿಸಲಾಗುವುದು ಎಂದು ಅಶೋಕ್ ವಿವರಿಸಿದರು.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications