New BPL Card: ರಾಜ್ಯದಲ್ಲಿ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವ ಕೆ.ಎಚ್‌.ಮುನಿಯಪ್ಪ

BPL Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಈ ನಡುವೆಯೇ ಹೊಸ ಬಿಪಿಎಲ್‌ ಪಡಿತರ ಚೀಟಿಗಾಗಿ ಕಾಯುತ್ತಿದ್ದವರಿಗೆ ಭರ್ಜರಿ ಗುಡ್‌ ನ್ಯೂಸ್‌ವೊಂದನ್ನು ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ ಅವರು ಕೊಟ್ಟಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎಂದು ಬಹುತೇಕ ಮಂದಿ ತಲೆಯಲ್ಲಿರುತ್ತದೆ ಅದಕ್ಕೆಲ್ಲ ಉತ್ತರ ಇಲ್ಲಿದೆ ತಿಳಿಯಿರಿ.

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಶ್ರೀಮಂತರು ಅಂದರೆ ಅನರ್ಹರು ಸಹ ಬಿಪಿಎಲ್‌ ಕಾರ್ಡ್ ಪಡೆದು ಬಡವರ ಅನ್ನ ಕಿತ್ತುಕೊಳ್ಳುತ್ತಿದ್ದರು. ಇದೀಗ ಸರ್ಕಾರ ಇಂತವಹರಿಗೆ ಕಡಿವಾಣ ಹಾಕಿ ಬಡವರಿಗೆ ಸಿಗಬೇಕಾದ ಬಿಪಿಎಲ್‌ ಸೌಲಭ್ಯವನ್ನು ಒದಗಿಸಲು ಮಹತ್ವದ ಕಾರ್ಯವನ್ನು ಮುಂದುವರೆಸಿದೆ.

Karnataka Govt to Cancel Fake BPL Cards and Issue New Cards Soon Big Relief for Eligible Families

ರಾಜ್ಯದಲ್ಲಿ ಯಾರೆಲ್ಲಾ ಅನರ್ಹರು ಇದ್ದಾರೋ ಅವರ ಬಳಿಯಿರುವ ಬಿಪಿಎಲ್‌ ಕಾರ್ಡ್‌ ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಮಾಡುತ್ತಿದೆ. ಈ ನಡುವೆಯೇ ಈಗಾಗಲೇ ಹೊಸ ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಕಾರ್ಡ್ ಯಾವಾಗ ಬರಲಿದೆಯೋ ಎಂದು ಕಾಯುತ್ತಿದ್ದವರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ.

ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್‌ಗೆ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆದಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಲಾಗುವುದು ಎಂದು ಹೇಳಿದರು.

ಇದೀಗ ಸದ್ಯ ರಾಜ್ಯದಲ್ಲಿ ಆಹಾರ ಇಲಾಖೆಯು ಅಕ್ರಮ ಬಿಪಿಎಲ್‌ ಕಾರ್ಡ್‌ ಪತ್ತೆಕಾರ್ಯ ಮುಂದುವರೆಸಿದೆ. ಅರ್ಹರಿಲ್ಲದಿದ್ದರೂ ಸಹ ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅಂತಹವರನ್ನು ಪತ್ತೆಹಚ್ಚಿ ಅವರ ಪಡಿತರ ಚೀಟಿಯನ್ನು ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಅಲ್ಲದೆ, ಸರ್ಕಾರಿ ಅಧಿಕಾರಿಗಳು, ತೆರಿಗೆದಾರರು ಬಿಪಿಎಲ್ ಕಾರ್ಡ್‌ ಹೊಂದಿದ್ದರೆ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆಹಾರ ಇಲಾಖೆಯು 2022ರಿಂದ ಬಳಿಕ ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿಯನ್ನು ಆಹ್ವಾನ ಮಾಡಿಲ್ಲ. ಕೇವಲ ರೇಷನ್‌ ಕಾರ್ಡ್‌ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ಮನೆ ಯಜಮಾನರ ಹೆಸರು ಬದಲಾವಣೆ, ಮೃತರ ಹೆಸರು ಕೈಬಿಡುವುದು, ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾವಣೆ, ಕೆವೈಎಸ್ಸಿಗೆ ಮಾತ್ರ ಅವಕಾಶ ಕಲ್ಪಿಸಿದೆ. ಇನ್ನು ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ತುಂಬಾ ಜನರು ಕಾತರದಿಂದ ಕಾಯುತ್ತಿದ್ದಾರೆ.

ಇನ್ನು ಹೊಸ ಪಡಿತರ ಚೀಟಿ ವಿತರಣೆ ಕಳೆದ ಎರಡು ವರ್ಷಗಳಿಂದ ಸ್ಥಗಿತ ಆಗಿದೆ. ಆದರೂ, ಅರ್ಜಿ ಸಲ್ಲಿಕೆ ಮಾತ್ರ ನಿರಂತರವಾಗಿ ನಡೆಯುತ್ತಿದೆ. ಪ್ರತಿ ವಾರ ಅಥವಾ 15 ದಿನಕ್ಕೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಸರ್ವರ್‌ ಸಮಸ್ಯೆಗಳ ಇದ್ದರೂ ಸಹ ಅಪಾರ ಸಂಖ್ಯೆಯಲ್ಲಿ ಜನರು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರೆ.

ನಂತರ, ತಮ್ಮ ಅರ್ಜಿಗಳ ಕಾಪಿಯನ್ನು ಹಿಡಿದುಕೊಂಡು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಭೇಟಿ ನೀಡಿ, ತಮ್ಮ ಕಾರ್ಡ್‌ಗಳು ಇನ್ನೂ ಯಾಕೆ ಬಂದಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಇದರಿಂದ ಅಧಿಕಾರಿಗಳು ಉತ್ತರ ನೀಡುವಲ್ಲಿಯೇ ಕಾಲ ಕಳೆಯುವಂತಾಗಿದೆ.

ಯಾರೆಲ್ಲಾ ಬಿಪಿಎಲ್‌ ಕಾರ್ಡ್‌ ಪಡೆಯಲು ಅರ್ಹರು?

* ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿ ಆಗಿರಬೇಕು
* ಕುಟುಂಬದ ವಾರ್ಷಿಕ ಆದಾಯವು 1.2 ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರಬೇಕು
* ಒಂದು ಕುಟುಂಬವು 3 ಹೆಕ್ಟೇರ್‌ಗಳಿಗಿಂತ (7.5 ಎಕರೆ) ಹೆಚ್ಚು ಕೃಷಿ ಭೂಮಿಯನ್ನು ಹೊಂದಿರಬಾರದು
* ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆ ಹೊಂದಿರಬಾರದು
* ಕುಟುಂಬವು 4 ಚಕ್ರದ ವಾಹನನ್ನು ಹೊಂದಿರಬಾರದು.
* ಆದಾಯ ತೆರಿಗೆ ಪಾವತಿಸುತ್ತಿರಬಾರದು
* ಮಾಸಿಕ ವಿದ್ಯುತ್ ಬಿಲ್ 450 ರೂಪಾಯಿಗಿಂತ ಹೆಚ್ಚಿರಬಾದು.

ಈಗಾಗಲೇ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಮತ್ತೊಂದೆಡೆ ಈಗಾಗಲೇ ಹೊಸ ಬಿಪಿಎಲ್‌ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ಅವರಿಗೆ ಅರ್ಹತೆ ಇದ್ದರೆ, ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+