ಏ.11ರಿಂದ ಮಹತ್ವಾಕಾಂಕ್ಷಿ ಜಾತಿ ಗಣತಿ ಆರಂಭ
ಬೆಂಗಳೂರು, ಜ. 5 : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಾತಿಗಣತಿಗೆ ಕಾಲ ಮೂಡಿಬಂದಿದೆ. ಏ.11ರಿಂದ 30ರವರೆಗೆ ಜಾತಿ ಗಣತಿ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಜಾತಿ ಗಣತಿ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಏ.11ರಿಂದ 30ರ ತನಕ ಜಾತಿ ಗಣತಿ ನಡೆಯಲಿದೆ ಎಂದು ಹೇಳಿದರು. ಎಲ್ಲಾ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಜಾತಿ ಗಣತಿ ನಡೆಸಬೇಕು, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿ-ಗತಿಗಳ ಅಧ್ಯಯನ ನಡೆಲು ಕರ್ನಾಟಕ ಸರ್ಕಾರ ಜಾತಿ ಗಣತಿ ನಡೆಸಲು ಮುಂದಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಜಾತಿ ಗಣತಿ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಈಗ ದಿನಾಂಕ ನಿಗದಿಯಾಗಿದೆ. [ಜಾತಿ ಗಣತಿಯಲ್ಲಿ ಸರಿಯಾದ ಮಾಹಿತಿ ಕೊಡಿ]
ಜಾತಿ ಗಣತಿಗೆ ಒಟ್ಟಾರೆ 1.26 ಲಕ್ಷ ಗಣತಿದಾರರು ಬೇಕು ಎಂದು ಅಂದಾಜಿಸಲಾಗಿದೆ. ಗಣತಿ ಕಾರ್ಯಕ್ಕೆ ಶಿಕ್ಷಕರನ್ನು ಬಳಸಿಕೊಳ್ಳುವುದಿಲ್ಲ ಎಂದು ಸರ್ಕಾರ ಮೊದಲು ಹೇಳಿತ್ತು. ಆದರೆ, ಈಗ ಶಿಕ್ಷಕರನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.













Click it and Unblock the Notifications