ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸಾ ವೆಚ್ಚಕ್ಕೆ ರಾಜ್ಯ ಸರ್ಕಾರ ಲಗಾಮು?

ರಾಜ್ಯದ ಖಾಸಗಿ ಆಸ್ಪತ್ರೆ, ಚಿಕಿತ್ಸಾ ಕೇಂದ್ರಗಳಲ್ಲಿ ನೀಡಲಾಗುವ ಚಿಕಿತ್ಸೆಗಳು, ಸೇವೆಗಳ ದರಗಳನ್ನು ನಿಗದಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಸಂಬಂಧಿಸಿದ ಮಸೂದೆಯನ್ನು ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಿದೆ. ಇದಕ್ಕ

|
Google Oneindia Kannada News

ಬೆಂಗಳೂರು, ಜೂನ್ 14: ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಲಭ್ಯವಾಗುವ ಪ್ರತಿಯೊಂದು ಚಿಕಿತ್ಸೆಗೂ ಪ್ರತ್ಯೇಕವಾಗಿ ದರಗಳನ್ನು ನಿಗದಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಇದಕ್ಕಾಗಿ, ಕರ್ನಾಟಕ ಖಾಸಗಿ ಆಸ್ಪತ್ರೆ, ಚಿಕಿತ್ಸಾ ಕೇಂದ್ರಗಳ ಮಸೂದೆ 2017ನ್ನು ರಾಜ್ಯ ಆರೋಗ್ಯ ಸಚಿವ ರಮೇಶ್ ಕುಮಾರ್ ಮಂಗಳವಾರ ಸದನದಲ್ಲಿ ಮಂಡಿಸಿದ್ದಾರೆ. ಈ ಮಸೂದೆಗೆ ಸದನದಲ್ಲಿ ಅಂಗೀಕಾರ ಸಿಕ್ಕರೆ ರಾಜ್ಯ ಸರ್ಕಾರಕ್ಕೆ ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆ ಅಥವಾ ಸೇವೆಗಳಿಗೆ ದರ ನಿಗದಿಗೊಳಿಸಲು ಅನುಕೂಲವಾಗುತ್ತದೆ.

Karnataka govt to determine cost of treatment in private hospitals

ಮಸೂದೆಗೆ ಅಂಗೀಕಾರ ಸಿಕ್ಕ ಕೂಡಲೇ ತಜ್ಞರ ಸಮಿತಿಯೊಂದನ್ನು ನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆ ಸಮಿತಿಯು ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿನ ಖಾಸಗಿ ಆಸ್ಪತ್ರೆಗಳ, ನರ್ಸಿಂಗ್ ಹೋಂ ಗಳ ಬಗ್ಗೆ ಅಧ್ಯಯನ ನಡೆಸಿ, ಪ್ರತಿಯೊಂದು ಸೇವೆಗೂ, ಚಿಕಿತ್ಸೆಗೂ ನಿಗದಿತ ದರವನ್ನು ವಿಧಿಸಲಿದೆ.

English summary
Turning the heat on the private hospitals' lobby, Karnataka government has proposed to determine fees that can be collected by private hospitals from patients for various medical procedures.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X