ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ತೆರೆಯಲು ನಿರ್ಧಾರ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 4: ಸರ್ಕಾರಿ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ.

Recommended Video

BBMP Election ಮುಂದೂಡಲು ಪಾಲಿಕೆ ಪಾಲಿಟಿಕ್ಸ್!! | Oneindia Kannada

ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶ ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶ

ಮೊದಲ ಹಂತದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸಲು ಗುರುವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಡಿಇಡಿ, ಬಿಇಡಿ ಆದವರಿಗೆ ಮಾಂಟೆಸ್ಸರಿ ತರಬೇತಿ

ಡಿಇಡಿ, ಬಿಇಡಿ ಆದವರಿಗೆ ಮಾಂಟೆಸ್ಸರಿ ತರಬೇತಿ

ಮಕ್ಕಳಿಗೆ ಶಿಕ್ಷಣ ನೀಡಲು ಡಿಇಡಿ, ಬಿಇಡಿ ಆದವರಿಗೆ ಮಾಟೆಸ್ಸರಿ ತರಬೇತಿ ನೀಡಲಾಗುತ್ತದೆ. ಈ ಶಿಕ್ಷಕರಿಗೆ 7,500 ರೂ. ಮತ್ತು ಮಕ್ಕಳನ್ನು ನೋಡಿಕೊಳ್ಳುವ ಆಯಾಗಳಿಗೆ 5 ಸಾವಿರ ರೂ. ಗೌರವ ಸಂಭಾವನೆ ನೀಡಲು ತೀರ್ಮಾನಿಸಲಾಗಿದೆ.

276 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ

276 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ

ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.ಆದರೆ ಪ್ರಸಕ್ತ ವರ್ಷದಿಂದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಮಾತ್ರ ಎಲ್‌ಕೆಜಿ, ಯುಕೆಜಿ ತರಗತಿ ಪ್ರಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ಮಾದರಿ ಪಬ್ಲಿಕ್ ಶಾಲೆ ಸ್ಥಾಪನೆ

ಕುಮಾರಸ್ವಾಮಿ ಅಧಿಕಾರಾವಧಿಯಲ್ಲಿ ಮಾದರಿ ಪಬ್ಲಿಕ್ ಶಾಲೆ ಸ್ಥಾಪನೆ

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿ ಹೋಬಳಿಗೊಂದರಂತೆ 276 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಿದ್ದರು. ಈ ವೇಳೆ 1 ರಿಂದ 12ನೇ ತರಗತಿಯವರಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದನ್ನು ತಪ್ಪಿಸಲು ಮುಂದಿನ ಶೈಕ್ಷಣಿಕ ಸೇರಿಸುವುದನ್ನು ತಪ್ಪಿಸಲು ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ತರಗತಿಗಳಿಗೂ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.

ಡಿಜಿಟಲ್ ಕಲಿಕೆ

ಡಿಜಿಟಲ್ ಕಲಿಕೆ

ಇದೇ ವೇಳೆ ಸರ್ಕಾರದ ಅಡಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಎಂಜಿನಯರಿಂಗ್ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಲರ್ನಿಂಗ್ ಕೋರ್ಸ್ ಆರಂಭಿಸಲು ನಿರ್ಧರಿಸಲಾಗಿದೆ.

English summary
On par with the National Education Policy , the state government has planned to introduce the LKG and UKG sections in its Schools.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X