ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು; ಎನ್‌ಜಿಟಿ ಆದೇಶದ ವಿರುದ್ಧ ಕರ್ನಾಟಕದ ಕಾನೂನು ಸಮರ

|
Google Oneindia Kannada News

ಬೆಂಗಳೂರು, ಮೇ 28; ಮೇಕೆದಾಟು ಬಳಿ ಪರಿಸರಕ್ಕೆ ಹಾನಿಯಾಗುವಂತೆ ಅಕ್ರಮವಾಗಿ ನಡೆಯುತ್ತಿರುವ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಲು ಎನ್‌ಜಿಟಿ ಜಂಟಿ ಸಮಿತಿಯನ್ನು ರಚನೆ ಮಾಡಿದೆ. ಈ ಕುರಿತು ಕಾನೂನು ಹೋರಾಟ ನಡೆಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ತಜ್ಞರ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದೆ. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಆದೇಶದ ಬಗ್ಗೆ ಕಾನೂನು ಹೋರಾಟ ನಡೆಸಲಾಗುತ್ತದೆ.

ಮೇಕೆದಾಟು ಯೋಜನೆ; ಕ್ಯಾತೆ ತೆಗೆದ ತಮಿಳುನಾಡು ಹೊಸ ಸರ್ಕಾರ ಮೇಕೆದಾಟು ಯೋಜನೆ; ಕ್ಯಾತೆ ತೆಗೆದ ತಮಿಳುನಾಡು ಹೊಸ ಸರ್ಕಾರ

ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಈ ಕುರಿತು ಮಾತನಾಡಿದ್ದಾರೆ. "ಮೇಕೆದಾಟು ಯೋಜನೆಯಲ್ಲಿ ಪರಿಸರ ನಾಶ ವಿಷಯಕ್ಕೆ ಸಂಬಂಧ ಪರಿಶೀಲಿಸಲು ಸಮಿತಿ ರಚಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶವನ್ನು ಪ್ರಶ್ನಿಸಲಾಗುತ್ತದೆ" ಎಂದು ಹೇಳಿದ್ದಾರೆ.

ಮತ್ತೆ ಸುದ್ದಿಯಾದ ಮೇಕೆದಾಟು ವಿವಾದ; ಸಮಿತಿ ರಚಿಸಿದ ಎನ್‌ಜಿಟಿ ಮತ್ತೆ ಸುದ್ದಿಯಾದ ಮೇಕೆದಾಟು ವಿವಾದ; ಸಮಿತಿ ರಚಿಸಿದ ಎನ್‌ಜಿಟಿ

Karnataka Govt To Move For Legal Fight On NGT Order On Mekedatu

ಕುಡಿಯುವ ನೀರು ಪೂರೈಕೆಗಾಗಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ. ಆದರೆ ತಮಿಳುನಾಡು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಸುಪ್ರೀಂಕೋರ್ಟ್‌ ಮೊರೆ ಸಹ ಹೋಗಿದೆ.

ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್ ಮೇಕೆದಾಟು ಯೋಜನೆಗೆ ತಮಿಳುನಾಡು ಸಿಎಂ ಮತ್ತೆ ಕಿರಿಕ್

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ 2021ರ ಏಪ್ರಿಲ್ 15ರಂದು ಪತ್ರಿಕೆಗಳಲ್ಲಿ ಬಂದ ವರದಿ ಅನ್ವಯ ಸ್ವಯಂ ಪ್ರೇರಿತ ಅರ್ಜಿಯನ್ನು ದಾಖಲು ಮಾಡಿಕೊಂಡಿದೆ. ಅರ್ಜಿ ವಿಚಾರಣೆ ನಡೆಸುವಾಗ ಜಂಟಿ ಸಮಿತಿಯನ್ನು ರಚನೆ ಮಾಡಿದೆ.

ಮೇಕೆದಾಟು ಯೋಜನೆ ಪ್ರದೇಶದ ವ್ಯಾಪ್ತಿಯ ಕಚ್ಚಾ ರಸ್ತೆ ಕುರಿತು ತಮಿಳುನಾಡಿನ ಪತ್ರಿಕೆಯಲ್ಲಿ ವರದಿಯೊಂದು ಪ್ರಕಟವಾಗಿದೆ. ಈ ಕುರಿತು ಪರಿಶೀಲನೆ ನಡೆಸಿ ಜುಲೈ 5ರೊಳಗೆ ವರದಿ ನೀಡುವಂತೆ ಜಂಟಿ ಸಮಿತಿಗೆ ಎನ್‌ಜಿಟಿ ಸೂಚಿಸಿದೆ.

ಕಾವೇರಿ ನದಿ ಪಾತ್ರದಲ್ಲಿ ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಾಣ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡಿನ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ.

ಮಳೆಗಾಲದಲ್ಲಿ ವ್ಯರ್ಥವಾಗಿ ಹರಿದು ಹೋಗಿ ಸಮುದ್ರ ಸೇರುವ ಕಾವೇರಿ ನದಿ ನೀರನ್ನು ಎರಡು ಸಮಾನಾಂತರ ಅಣೆಕಟ್ಟುಗಳಲ್ಲಿ ಸಂಗ್ರಹ ಮಾಡಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕರ್ನಾಟಕ ಯೋಜನೆ ರೂಪಿಸಿದೆ.

Recommended Video

Virat Kohli, Rohit Sharma ಮತ್ತು Joe Root ಹೆಸರಿನಲ್ಲಿ ಮಾತ್ರ ಇದೆ ಈ ವಿಶೇಷ ದಾಖಲೆ | Oneindia Kannada

ಕಾವೇರಿ ನದಿ ಪಾತ್ರದಲ್ಲಿ ಅಣೆಕಟ್ಟು ಕಟ್ಟುವುದು ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪಿನ ಉಲ್ಲಂಘನೆ. ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ತಮಿಳುನಾಡು ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್‌ನಲ್ಲಿ ಒತ್ತಾಯಿಸುತ್ತಿದೆ.

English summary
Karnataka government decided for legal fight against national green tribunal order of appointed of joint committee to inspect unauthorised construction activity at Mekedatu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X