ಭಾರತ ಲಾಕ್ ಡೌನ್ 4.O:ಮೇ.18ರಂದು ರಾಜ್ಯ ಸರ್ಕಾರದ ಮಾರ್ಗಸೂಚಿ ಬಿಡುಗಡೆ
ನವದೆಹಲಿ, ಮೇ.17: ನೊವೆಲ್ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ನಾಲ್ಕನೇ ಅವಧಿಗೆ ಭಾರತ ಲಾಕ್ ಡೌನ್ ವಿಸ್ತರಿಸಿದ ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ಹೊರಡಿಸಿದೆ. ಇದರ ಬೆನ್ನಲ್ಲೇ ಸೋಮವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿ ಬಿಡುಗಡೆಗೂ ಮುನ್ನವೇ ರಾಜ್ಯದಲ್ಲಿ ಎರಡು ದಿನಗಳ ಕಾಲ ಲಾಕ್ ಡೌನ್ ವಿಸ್ತರಣೆಗೊಳಿಸಲಾಗಿತ್ತು. ಮೇ.19ರವರೆಗೂ ಭಾರತ ಲಾಕ್ ಡೌನ್ 3.O ನಿಯಮಗಳನ್ನೇ ಪಾಲಿಸುವಂತೆ ಸೂಚಿಸಲಾಗಿತ್ತು.
ಇದೀಗ ಕೇಂದ್ರ ಸರ್ಕಾರವು ನಾಲ್ಕನೇ ಅವಧಿಯ ಲಾಕ್ ಡೌನ್ ಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಸೋಮವಾರವೇ ರಾಜ್ಯ ಸರ್ಕಾರವೂ ಕೂಡಾ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದೆ.

ರಾಜ್ಯಕ್ಕೆ ವಲಯಗಳ ತೀರ್ಮಾನಿಸುವ ಹಕ್ಕು:
ಕರ್ನಾಟಕದಲ್ಲೂ ಕೂಡಾ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿಂದೆ ವಲಯಗಳ ತೀರ್ಮಾನಿಸುವ ಅಧಿಕಾರವನ್ನು ರಾಜ್ಯಕ್ಕೆ ನೀಡುವಂತೆ ಬೇಡಿಕೆ ಇಡಲಾಗಿತ್ತು. ಈ ಹಿನ್ನೆಲೆಯೆಲ್ಲಿ ಕೆಂಪು, ಕಿತ್ತಳೆ ಹಾಗೂ ಹಸಿರು ವಲಯಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಬಿಡಲಾಗಿದೆ. ಅಲ್ಲದೇ ಜಿಲ್ಲೆಗಳಲ್ಲಿನ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ಚಟುವಟಿಕೆಗಳ ಬಗ್ಗೆ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.












Click it and Unblock the Notifications