ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭದ ಕುರಿತು ಮಹತ್ವದ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್, 11: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಿರುತ್ತದೆ. ಹಾಗೆಯೇ ಇದೀಗ ಇಷ್ಟು ಸರ್ಕಾರಿ ಶಾಲೆಗಳಲ್ಲಿದ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವ ಕುರಿತು ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುತ್ತದೆ. ಹಾಗೆಯೇ ಇದೀಗ 2025-26ನೇ ಸಾಲಿನಲ್ಲಿ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ ಅಥವಾ ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭ ಮಾಡಲು ಅನುಮತಿ ನೀಡಲಾಗಿದೆ.

ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ, ರಾಜ್ಯದ 1,000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಲಾಗಿದೆ. ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ವೇಳೆ 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು ಎಂದು ಘೋಷಣೆ ಮಾಡಲಾಗಿತ್ತು.
ಅದರಂತೆಯೇ ರಾಜ್ಯದ 1,419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ ಅಥವಾ ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲಿ ಅನುಮತಿ ನೀಎಲಾಗಿದೆ. ಸ್ಥಳೀಯವಾಗಿ ಲಭ್ಯವಿರುವ ಸೌಲಭ್ಯಗಳನ್ನು ಬಳಕೆ ಮಾಡಿಕೊಂಡು ಪ್ರಾರಂಭಿಸಲು ತಿಳಿಸಲಾಗಿದೆ.
ಮೇ 18, 2019ರಲ್ಲಿನ ಷರತ್ತುಗಳಿಗೊಳಪಟ್ಟು ಈ ಅನುಮತಿ ನೀಡಿ ಆದೇಶಿಸಲಾಗಿದೆ. ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ರಾಜ್ಯದ 208 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ ಅಥವಾ ಇತರ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ಬಳಕೆ ಮಡಿಕೊಂಡು ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಆದೇಶಿಸಿದೆ.
ಕ್ರಮಾಂಕ (4)ರ ಸರ್ಕಾರದ ಆದೇಶದಲ್ಲಿ ರಾಜ್ಯದ 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ. ಕ್ರಮಾಂಕ (5)ರ ಸರ್ಕಾರದ ಆದೇಶದಲ್ಲಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ವಿದ್ಯಾರ್ಥಿಗಳಲ್ಲಿ ಮಾತೃ ಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು 2025-26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸುವಂತೆ ಅನುಮೋದನೇ ಕೋರಲಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸಚಿವರುಗಳು, ಇಲಾಖಾಧಿಕಾರಿಗಳಿಂದ ಶಿಫಾರಸ್ಸು ಪತ್ರಗಳು ಮತ್ತು ಮನವಿಗಳು ಸೇರಿದಂತೆ ಒಟ್ಟು 984 ಪ್ರಾಥಮಿಕ ಶಾಲೆಗಳಲ್ಲಿ ದ್ವಿ-ಭಾಷ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮೋದನೆಯನ್ನು ಕೋರಲಾಗಿತ್ತು. ಆಯುಕ್ತರು, ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಆದೇಶದಲ್ಲಿ ರಾಜ್ಯದ ಒಟ್ಟು 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025-26ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಷರತ್ತುಗಳಿಗಳೊಂದಿದೆ ಅನುಮತಿ ನೀಡಿ ಆದೇಶಿಸಿದೆ. ಈ ಆದೇಶವನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಚರ್ಚಿಸಿ ಹೊರಡಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
CBSE 10th Results 2026: ಹತ್ತನೇ ತರಗತಿ ನಂತರ ನಿಮ್ಮ ಆಯ್ಕೆ ಏನಾಗಿರಬೇಕು? ಮುಂದಿನ ಹಾದಿ ಹೀಗಿರಲಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
CBSE ಹೊಸ ನಿಯಮ: ಮುಖ್ಯ ವಿಷಯದಲ್ಲಿ ಫೇಲ್ ಆದರೂ ಪಾಸ್ ಅವಕಾಶ, CBSE ರಿಸಲ್ಟ್ ನೋಡುವುದು ಹೇಗೆ -
CBSE Results 2026: ಸಿಬಿಎಸ್ಇ 10 ಮತ್ತು 12ನೇ ತರಗತಿಯ ಉತ್ತರ ಪತ್ರಿಕೆಯ ಪ್ರತಿ ಪಡೆಯುವುದು ಹೇಗೆ? -
Central Board of Secondary Education: 10ನೇ ತರಗತಿ ಎರಡು ಪರೀಕ್ಷೆ ವ್ಯವಸ್ಥೆ: ಅವಕಾಶವೇ ಅಥವಾ ಹೆಚ್ಚುವರಿ ಒತ್ತಡವೇ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್












Click it and Unblock the Notifications