ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು ಮಳೆ ಕಡಿಮೆ ಮುನ್ಸೂಚನೆ : ಸರ್ಕಾರದಿಂದ ಮೋಡ ಬಿತ್ತನೆ

|
Google Oneindia Kannada News

ಬೆಂಗಳೂರು, ಮೇ 15 : ಕರ್ನಾಟಕ ಸರ್ಕಾರ ಮೋಡ ಬಿತ್ತನೆ ಮಾಡಲು ಮುಂದಾಗಿದೆ. ಈ ಬಾರಿಯ ಮುಂಗಾರು ಸಾಧಾರಣವಾಗಿರಲಿದೆ ಎಂಬ ಮುನ್ಸೂಚನೆ ಸಿಕ್ಕಿದ್ದು, ಮಳೆ ಕಡಿಯಾಗುವ ಆತಂಕ ಎದುರಾಗಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದರು. ಬರ ಪರಿಸ್ಥಿತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಭೆ ನಡೆಸಿದರು. ಸಭೆಯ ಬಳಿಕ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿದರು.

ಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಜೂನ್ 4 ರಂದು ಕೇರಳಕ್ಕೆ ಮುಂಗಾರುಮಳೆ, ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆ

'ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಸಿಕ್ಕಿದೆ. ಆದ್ದರಿಂದ, ಮೋಡ ಬಿತ್ತನೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಜೂನ್ ಕೊನೆಯ ವಾರದಲ್ಲಿ ಮೋಡ ಬಿತ್ತನೆ ನಡೆಯಲಿದೆ' ಎಂದು ಸಚಿವರು ಹೇಳಿದರು.

ಪೂರ್ವ ಮುಂಗಾರು ಮಳೆ ಕ್ಷೀಣ : ರೈತರಿಗೆ ಕೆಲವು ಸಲಹೆಗಳುಪೂರ್ವ ಮುಂಗಾರು ಮಳೆ ಕ್ಷೀಣ : ರೈತರಿಗೆ ಕೆಲವು ಸಲಹೆಗಳು

cloud seeding

'ಈ ಬಾರಿ ಎರಡು ವರ್ಷದ ಅವಧಿಗೆ ಟೆಂಡರ್ ಕರೆಯಲು ತೀರ್ಮಾನ ಮಾಡಿದ್ದೇವೆ. ಸುಮಾರು 88 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧಾರ ಮಾಡಿದ್ದೇವೆ. ಆದಷ್ಟು ಬೇಗ ಟೆಂಡರ್ ಕರೆಯಲಾಗುತ್ತದೆ' ಎಂದು ಕೃಷ್ಣ ಬೈರೇಗೌಡ ಹೇಳಿದರು.

ಇನ್ನೆಷ್ಟು ದಿನ ಬಿಸಿಗಾಳಿ ಮುಂದುವರೆಯಲಿದೆಇನ್ನೆಷ್ಟು ದಿನ ಬಿಸಿಗಾಳಿ ಮುಂದುವರೆಯಲಿದೆ

ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲು ತೀರ್ಮಾನಿಸಲಾಗಿದೆ. ಹುಬ್ಬಳ್ಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಎರಡು ವಿಮಾನದಲ್ಲಿ ಈ ಬಾರಿ ಮೋಡ ಬಿತ್ತನೆ ನಡೆಯಲಿದೆ. ತಜ್ಞರ ಸಮಿತಿ ಕೂಡಾ ಮೋಡ ಬಿತ್ತನೆ ಅಗತ್ಯವಿದೆ ಎಂದು ಹೇಳಿದೆ.

ಬರ ಪರಿಶೀಲನೆ ಸಭೆ : ಚುನಾವಣಾ ಆಯೋಗದ ಅನುಮತಿ ಪಡೆದು ರಾಜ್ಯದ ಬರ ಪರಿಸ್ಥಿತಿ ಕುರಿತು ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಬರ ಪರಿಹಾರ ಕಾಮಗಾರಿಯನ್ನು ಕೈಗೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡಲಾಗಿದೆ.

ಕುಡಿಯುವ ನೀರು ಕೊರತೆ ಇರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ನೀರು ಪೂರೈಕೆ ಮಾಡಲು ಬಾಡಿಗೆಗೆ ಬೋರ್‌ವೆಲ್‌ಗಳನ್ನು ಪಡೆಯಲಾಗಿದೆ. ಜಾನುವಾರುಗಳಿಗೂ ನೀರು, ಮೇವು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

English summary
After the reports of normal rain fall in monsoon Karnataka government said it would take up cloud seeding by the end of June 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X