ಸಿಐಡಿಯಿಂದ ರವಿ ಡಿ. ಚನ್ನಣ್ಣನವರ್ ಎತ್ತಂಗಡಿ: ವಾಲ್ಮಿಕಿ ನಿಗಮದ ಎಂಡಿ

ಬೆಂಗಳೂರು, ಜ. 27: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ದೂರಿನ ಪ್ರತಿ ಹೊರ ಬಿದ್ದಿದ್ದೇ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣದಲ್ಲಿ ಯಾವುದೇ ಸುದ್ದಿ ಪ್ರಸಾರ ಮಾಡದಂತೆ ರವಿ ಡಿ. ಚನ್ನಣ್ಣನವರ್ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

ಇದೀಗ ಏಕಾಏಕಿ ಸಿಐಡಿಯಿಂದ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾವಣೆ ಆಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ವರ್ಗದ ಜನರ ಕಲ್ಯಾಣ ಯೋಜನೆಗಳ ಅನುಷ್ಠಾನ ಜವಾಬ್ದಾರಿ ಎಂಡಿ ಅವರ ಮೇಲಿರುತ್ತದೆ.

Karnataka Govt Transfer 9 IPS Officers Including Ravi D Channannavar

ವರ್ಗಾವಣೆಯಾದವರ ಪಟ್ಟಿ: ಸಿಐಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರನ್ನು ಪೂರ್ವ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳದ ಎಸ್ಪಿ ಅಬ್ದುಲ್ ಅಹಾದ್ ಅವರನ್ನು ಕೆಎಸ್ಆರ್‌ಟಿಸಿ ಭದ್ರತೆ ಮತ್ತು ಜಾಗೃತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಕೊಪ್ಪಳದ ಎಸ್ಪಿ ಟಿ. ಸುಧೀರ್ ಅವರನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕಾರಾಗೃಹ ಇಲಾಖೆಯ ಎಸ್ಪಿ ಟಿ.ಪಿ. ಶಿವಕುಮಾರ್ ಅವರನ್ನು ಚಾಮರಾಜ ನಗರ ಜಿಲ್ಲೆ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ದಿವ್ಯ ಸಾರಾ ಥಾಮಸ್ ಅವರನ್ನು ಮೈಸೂರಿನಲ್ಲಿರುವ ಕರ್ನಾಟಕ ಪೊಲೀಸ್ ಅಕಾಡೆಮಿ ಉಪ ನಿರ್ದೇಶಕ ಹುದ್ದೆಗೆ ನಿಯೋಜಿಸಲಾಗಿದೆ. ಹುದ್ದೆಗಾಗಿ ಕಾಯುತ್ತಿದ್ದ ಡೆಕ್ಕ ಕಿಶೋರ್ ಬಾಬು ಬೀದರ್ ಎಸ್ಪಿಯಾಗಿ ವರ್ಗಾವಣೆಯಾಗಿದ್ದಾರೆ. ಎ. ಗಿರಿ ಅವರನ್ನು ಕೊಪ್ಪಳದ ಎಸ್ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೀದರ್ ಎಸ್ಪಿಯಾಗಿದ್ದ ನಾಗೇಶ್ ಡಿ.ಎಲ್. ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

Recommended Video

      ಕರ್ನಾಟಕದ ಐವರು ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಗೌರವ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+