ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೊಮ್ಮಾಯಿ ನಾಯಕತ್ವದಲ್ಲಿ ರಾಜ್ಯ ಉತ್ತಮ ಸಾಧನೆ ತೋರಲಿದೆ; ಜೋಶಿ

|
Google Oneindia Kannada News

ನವದೆಹಲಿ, ಜುಲೈ 28: ಬುಧವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

"ಯಡಿಯೂರಪ್ಪ ನಮಗೆ ಅನ್ಯಾಯ ಮಾಡಲ್ಲ"

"ಬಸವರಾಜ ಬೊಮ್ಮಾಯಿ ವಿದ್ಯಾವಂತ ಹಾಗೂ ಅನುಭವಿ ನಾಯಕ. ಅವರ ನಾಯಕತ್ವದಲ್ಲಿ ಕರ್ನಾಟಕ ಉತ್ತಮ ಸಾಧನೆ ಮಾಡುತ್ತದೆ ಎನ್ನುವ ವಿಶ್ವಾಸ ನನಗಿದೆ. ಕರ್ನಾಟಕದಲ್ಲಿ ಉಪ ಮುಖ್ಯಮಂತ್ರಿಗಳ ನೇಮಕದ ಕುರಿತು ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಈ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳುತ್ತಾರೆ" ಎಂದು ತಿಳಿಸಿದರು.

Karnataka Govt Will Do Well Under Basavaraja Bommai Says Union Minister Pralhad Joshi

ಇಂದು ಸಂಜೆಯೇ ಬೊಮ್ಮಾಯಿ ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಲಿರುವುದಾಗಿ ತಿಳಿದುಬಂದಿದೆ. ಅಲ್ಲಿಯೇ ರಾಜ್ಯ ಸಚಿವ ಸಂಪುಟದ ಕುರಿತು ನಿರ್ಧಾರವಾಗುವ ನಿರೀಕ್ಷೆಯಿದೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, "ನನ್ನ ಎದುರು ಆರ್ಥಿಕ, ಸಾಮಾಜಿಕ ಸವಾಲುಗಳಿವೆ. ಈಗ ಸಚಿವ ಸಂಪುಟ ಸಭೆ ಮಾಡುತ್ತೇನೆ. ಸಂಪುಟ ಸಭೆಯಲ್ಲಿ ರಾಜ್ಯದ ಸ್ಥಿತಿಗತಿ ಕುರಿತು ವಿವರಿಸುತ್ತೇನೆ. ಸದ್ಯದ ಹಣಕಾಸಿನ ಸ್ಥಿತಿ ನೋಡಿಕೊಂಡು ಹಲವು ನಿರ್ಧಾರಗಳನ್ನು ಮಾಡುತ್ತೇನೆ. ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸವಾಲು ಎದುರಿಸುತ್ತೇನೆ" ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

Recommended Video

ಸಿಎಂ ಆಗ್ತಿಂದ್ದಂತೆ ವಿರೋಧಪಕ್ಷಕ್ಕೆ ಟಾಂಗ್ ಕೊಟ್ಟ ಬಸವರಾಜ್ ಬೊಮ್ಮಾಯಿ | Oneindia Kannada

"ನಾನು ಮುಖ್ಯಮಂತ್ರಿ ಮಾತ್ರವಲ್ಲ ಎಲ್ಲರೊಳಗೊಬ್ಬ ಎಂಬಂತೆ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.

English summary
Basavaraj Bommai is an educated and an experienced leader. I am confident that Karnataka Govt will do well under his leadership says Union Minister Pralhad Joshi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X