Caste Survery 2025: ಸೆಪ್ಟಂಬರ್ 22ರಿಂದ ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ! ಏನು ದಾಖಲೆ ಬೇಕು?
ಕರ್ನಾಟಕ ಸರ್ಕಾರದ ಮಹತ್ವದ 'ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025' ಆರಂಭಕ್ಕೆ ಅಧಿಕಾರಿಗಳು ಸಜ್ಜಾಗಿದ್ದಾರೆ. ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ಭವಿಷ್ಯದ ನೀತಿ ನಿರೂಪಣೆಯ ಆಧಾರವಾಗುತ್ತದೆ. ಇದಕ್ಕೆ ನಾಗರಿಕರು ಜವಾಬ್ದಾರಿಯಿಂದ ಇದರಲ್ಲಿ ಪಾಲ್ಗೊಳ್ಳುವಂತೆ ಸರ್ಕಾರ ಕೋರಿದೆ. ಈಗಾಗಲೇ ಮನೆ ಮನೆಗೆ ಸ್ಟಿಕ್ಕರ್ ಅಂಟಿಸಲಾಗುತ್ತಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಯಾವೆಲ್ಲ ದಾಖಲೆಗಳು ಬೇಕು? ಇಲ್ಲಿದೆ ಮಾಹಿತಿ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಸಮೀಕ್ಷೆ ನಡೆಯಲಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಈಗಾಗಲೇ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಯಿಂದ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ಈ ಮೂಲಕ ಕೆಲವು ದಾಖಲೆ ರೆಡಿ ಇಟ್ಟುಕೊಳ್ಳುವಂತೆ ಸರ್ಕಾರ ತಿಳಿಸಿದೆ.

ಈ ದಾಖಲೆಗಳು ಇಟ್ಟುಕೊಂಡಿರಿ
ಈ ಸಮೀಕ್ಷೆಯ ಪ್ರಶ್ನಾವಳಿಯಲ್ಲಿ ಸುಮಾರು 60 ಪ್ರಶ್ನೆಗಳು, ಪಡಿತರ ಚೀಟಿ ಅಥವಾ ಆಧಾರ್ ಸಂಖ್ಯೆ ದೃಢೀಕರಣ ಪತ್ರವಾಗಿ ಆಧಾರವಾಗಿದೆ ಸಮೀಕ್ಷೆ ಕಾರ್ಯವನ್ನು ಹೊಂದಿದೆ. ಈ ಸಂದರ್ಭದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್/ಸಂಖ್ಯೆ, ಮತದಾರರ ಗುರುತಿನ ಚೀಟಿ, ವಿಕಲಚೇತನರಲ್ಲಿ UID ಕಾರ್ಡ್ ಅಥವಾ ಪ್ರಮಾಣ ಪತ್ರಗಳು ಸಿದ್ಧವಾಗಿಟ್ಟು ಕೊಳ್ಳಬೇಕಿದೆ.
ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್‌ಗಳು ಮೊಬೈಲ್‌ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಮೀಕ್ಷೆ ವೇಳೆ ಇ-ಕೆವೈಸಿ (ಇ-ಕೆವೈಸಿ) ಪ್ರಕ್ರಿಯೆಗಾಗಿ ಒಟಿಪಿ ಸಂಖ್ಯೆ ಆ ಸದಸ್ಯರ ಆಧಾರ್ ನಂಬರ್‌ಗೆ ಜೋಡಣೆ ಆಗಿರುವ ಮೊಬೈಲ್ ನಂಬರ್‌ಗೆ ಬರುತ್ತದೆ. ಒಂದು ವೇಳೆ ಆ ಸದಸ್ಯರು ಮನೆಯಲ್ಲಿ ಇಲ್ಲದಿದ್ದರೆ ಕುಟುಂಬದ ಪರವಾಗಿ ಉತ್ತರ ನೀಡುತ್ತಿರುವ ಸದಸ್ಯರು ಫೋನ್ ಮೂಲಕ OTP ಸಂಖ್ಯೆ ಪಡೆದ ಮಾಹಿತಿ ನೀಡಬೇಕು.
ಜಾಗೃತಿ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು 63617-89579 ಈ ನಂಬರ್‌ಗೆ ವಾಟ್ಸಪ್ ಮುಖಾಂತರ ಹಾಯ್ ಎಂದು ಸಂದೇಶವನ್ನು ಕಳುಹಿಸಿ ನೋಂದಣಿ ಮಾಡಿಕೊಳ್ಳಬಹುದು. 6 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಸದಸ್ಯನಿಗೂ ಆಧಾರ್ ಕಡ್ಡಾಯವಾಗಿದೆ.
ಆಧಾರ್ ಸಂಖ್ಯೆ ಇಲ್ಲದಿದ್ದರೆ ಹತ್ತಿರದ ಆಧಾರ್ ನೋಂದಣಿ ಕೇಂದ್ರದಲ್ಲಿ ವಿವರಗಳನ್ನು ನೋಂದಾಯಿಸಿ ನೋಂದಣಿ ಸಂಖ್ಯೆಯು ಸಮೀಕ್ಷೆಯಲ್ಲಿದೆ ಭಾಗವಹಿಸಬಹುದು. ಹಾಗೆ, ಮೊಬೈಲ್ ನಂಬರ್ ಆಧಾರ್‌ಗೆ ಲಿಂಕ್ ಆಗಿಲ್ಲದಿದ್ದರೆ ಅದನ್ನು ತಕ್ಷಣವೇ ಲಿಂಕ್ ಮಾಡಿಸಿಕೊಳ್ಳಬೇಕು.
ಪ್ರಶ್ನಾವಳಿಯಲ್ಲಿ ವ್ಯಾಪಾರ, ಉದ್ಯೋಗ, ವಿದ್ಯಾರ್ಹತೆ, ಕೌಶಲ್ಯ ತರಬೇತಿ ಅಗತ್ಯತೆ, ಆದಾಯ, ಕುಟುಂಬ ಮತ್ತು ಚರಾಸ್ತಿ ವಿವರಗಳು, ಧರ್ಮ, ಜಾತಿ, ಉಪಜಾತಿ, ಕುಲಕಸುಬು ಮುಂತಾದ ಮಾಹಿತಿಗಳ ಬಗ್ಗೆ ಪ್ರಶ್ನೆಗಳು ಇರುತ್ತವೆ. ಪ್ರತಿ ಕುಟುಂಬಕ್ಕೆ ಹಾಗೂ ಈ ಮೇಲೆ ತಿಳಿಸಿದ ದಾಖಲೆಗಳೊಂದಿಗೆ ಸಿದ್ಧವಾಗಿದೆ. ಆದ್ದರಿಂದ, ಈ ಪೂರ್ವ ಸಿದ್ಧತೆಯ ಬಗ್ಗೆ ಅರಿವು ಮೂಡಿಸಲು ಪದವಿ ವಿದ್ಯಾರ್ಥಿಗಳ ಮೂಲಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಕೋರಿದೆ.
ಈ ಸಮೀಕ್ಷೆ, ದಾಖಲಾತಿ, ನೋಂದಣಿ ಹಾಗೂ ಇತರ ಹೆಚ್ಚಿನ ಮಾಹಿತಿಗಾಗಿ ನೀವು ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಬಹುದು. ಇಲ್ಲವೇ https://kscbc.karnataka.gov.in ಈ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.












Click it and Unblock the Notifications